Shreyas K Manju.New Film Pooja

Thursday, July 01, 2021

316

 

ಶ್ರೇಯಸ್ಸ್ ಕೆ ಮಂಜು ಈಗ "ರಾಣ"

 

ಜುಲೈ 7 ರಂದು ಮುಹೂರ್ತ.

 

ಖ್ಯಾತ ನಿರ್ಮಾಪಕ ಕೆ.ಮಂಜು ಅರ್ಪಿಸುವ, ನಂದಕಿಶೋರ್ ನಿರ್ದೇಶನದ ಹಾಗೂ ಗುಜ್ಜಲ್ ಪುರುಷೋತ್ತಮ್ ನಿರ್ಮಾಣದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಇಂದು ಬೆಳಗ್ಗೆ ಮೋದಿ‌ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು.

ಚಿತ್ರಕ್ಕೆ "ರಾಣ" ಎಂದು ಹೆಸರಿಡಲಾಗಿದೆ. ಶೀರ್ಷಿಕೆ ಅನಾವರಣ ಸಮಾರಂಭದಲ್ಲಿ ಕೆ.ಮಂಜು, ನಿರ್ಮಾಪಕ ಪುರುಷೋತ್ತಮ ಗುಜ್ಜಾಲ್, ನಿರ್ದೇಶಕ ನಂದಕಿಶೋರ್, ನಾಯಕ ಶ್ರೇಯಸ್ಸ್ ಹಾಗೂ ನಾಯಕಿ ರೇಶ್ಮಾ ನಾಣಯ್ಯ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.

ಜುಲೈ 7 ರಂದು "ರಾಣ" ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ.

ಈ ಚಿತ್ರದ ಶೀರ್ಷಿಕೆ ಮೊದಲು ನಿರ್ಮಾಪಕ ರಮೇಶ್ ಕಶ್ಯಪ್ ಅವರ ಬಳಿಯಿತ್ತು. ರಾಕಿಂಗ್ ಯಶ್ ಅವರು "ರಾಣ" ಚಿತ್ರದಲ್ಲಿ ಅಭಿನಯಿಸಬೇಕಿತ್ತು. ರಮೇಶ್ ಕಶ್ಯಪ್ ಅವರು ನಮಗಾಗಿ ಈ ಶೀರ್ಷಿಕೆ ಬಿಟ್ಟುಕೊಟ್ಟಿದ್ದಾರೆ.

ಶೀರ್ಷಿಕೆ ನೀಡಿದ್ದ ರಮೇಶ್ ಕಶ್ಯಪ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ನಿರ್ಮಾಪಕ ಪುರುಷೋತ್ತಮ ಗುಜ್ಜಾಲ್, ಕೆ.ಮಂಜು ಹಾಗೂ ಶ್ರೇಯಸ್ಸ್  ಧನ್ಯವಾದ ತಿಳಿಸಿದ್ದಾರೆ.

ಚಂದನ್ ಶೆಟ್ಟಿ ಸಂಗೀತ ನೀಡುತ್ತಿರುವ ಈ ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ‌.

Copyright@2018 Chitralahari | All Rights Reserved. Photo Journalist K.S. Mokshendra,