Boss.Film News

Monday, March 09, 2026

 

*ಕುತೂಹಲ ಮೂಡಿಸಿದೆ ತನುಷ್ ಶಿವಣ್ಣ ಅಭಿನಯದ "ಬಾಸ್" ಚಿತ್ರದ ಫಸ್ಟ್ ಲುಕ್ ಟೀಸರ್.*                                                .                                                         *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿ.ಲವ ನಿರ್ದೇಶನ* .    

 

ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ "ಬಾಸ್" ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಕುತೂಹಲ ಮೂಡಿಸಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಫಸ್ಟ್ ಲುಕ್ ಟೀಸರ್ ಬಿಡುಗಡೆ ನಂತರ  ಚಿತ್ರತಂಡದ ಸದಸ್ಯರು ಮಾತನಾಡಿದರು. 

 

"ಬಾಸ್", ಕ್ರೈಮ್ ಥ್ರಿಲ್ಲರ್ ಆಧಾರಿತ ಚಿತ್ರ.  ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇಂದು ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಟ್ರೇಲರ್ ಸಹ ಅನಾವರಣವಾಗಲಿದೆ. ಮುಂದಿನ ತಿಂಗಳು ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ತನುಷ್ ಶಿವಣ್ಣ ಚಿತ್ರದ ನಾಯಕನಾಗಿ ನಟಿಸಿದ್ದು, ಮೋನಿಕಾ ಗೌಡ ಹಾಗೂ ಪಾಯಲ್ ಚಂಗಪ್ಪ ನಾಯಕಿಯರಾಗಿ ಅಭಿನಯಿಸಿದ್ದಾರೆ. "ಬಾಸ್" ಚಿತ್ರಕ್ಕೆ "ಸತ್ಯಮೇವ ಜಯತೇ" ಎಂಬ ಅಡಿಬರಹವಿದೆ. ಡೆವಿ ಸುರೇಶ್ ಸಂಗೀತ ನಿರ್ದೇಶನ, ಶರತ್ ಎನ್ ಆರ್ ಪುರ ಛಾಯಾಗ್ರಹಣ ಹಾಗೂ ಮಹೇಶ್ ರೆಡ್ಡಿ ಅವರ ಸಂಕಲನ ಈ ಚಿತ್ರಕ್ಕಿದೆ ಎಂದು ನಿರ್ದೇಶಕ ವಿ.ಲವ ತಿಳಿಸಿದರು.

ನನ್ನ ಮೊದಲ ಚಿತ್ರದಿಂದಲೂ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಧನ್ಯವಾದ ಎಂದು ಮಾತನಾಡಿದ ನಾಯಕ ತನುಷ್ ಶಿವಣ್ಣ, ನಮ್ಮ ಚಿತ್ರದ ಫಸ್ಟ್ ಲುಕ್ ಟೀಸರ್ ಅನಾವರಣವಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಈ ಚಿತ್ರದಲ್ಲಿ ನನ್ನದು ಸಮಾಜಕ್ಕೆ ಬೇಕಾಗಿರುವ ವ್ಯಕ್ತಿಯ ಪಾತ್ರ. ಚಿತ್ರದಲ್ಲಿ ಎರಡು ಹಾಡುಗಳಿದೆ. ಅನಿಲ್ ಪಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿ.ಲವ ನಿರ್ದೇಶಿಸಿದ್ದಾರೆ. ಚಿತ್ರತಂಡದ ಸಹಕಾರದಿಂದ "ಬಾಸ್" ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು.

 

 ಚಿತ್ರದಲ್ಲಿ ನಟಿಸಿರುವ ಡಾ||ವಿಜಯೇಶ್, ವೀರೇನ್ ಕೇಶವ್, ಭೀಷ್ಮ ರಾಮಯ್ಯ, ಲಕ್ಷ್ಮಣ್ ಪೂಜಾರಿ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಶರತ್ ಎನ್ ಆರ್ ಪುರ  ಸೇರಿದಂತೆ ಅನೇಕ ತಂತ್ರಜ್ಞರು "ಬಾಸ್" ಚಿತ್ರದ ಕುರಿತು ಮಾತನಾಡಿದರು.

Copyright@2018 Chitralahari | All Rights Reserved. Photo Journalist K.S. Mokshendra,