Padmagandhi.News

Thursday, December 04, 2025

*ಸದ್ದು ಮಾಡುತ್ತಿದೆ ’ಪದ್ಮಗಂಧಿ’*

 

      ಹಿರಿಯ ನಟ *ಕ.ಸುಚೇಂದ್ರ ಪ್ರಸಾದ ಚಿತ್ರಕಥೆ-ಸಂಭಾಷಣೆ ಜತೆಗೆ ನಿರ್ದೇಶನ* ಮಾಡಿರುವ *ಪದ್ಮಗಂಧಿ* ಚಿತ್ರದ ಕನ್ನಡ, ಸಂಸ್ಕ್ರತ ಮತ್ತು ಹಿಂದಿ ಭಾಷೆಯ ಟ್ರೇಲರ್ ಹಾಗೂ ಹಾಡುಗಳು ಬಿಡುಗಡೆಗೊಂಡು ಪ್ರಶಂಸೆಯ ಸುರಿಮಳೆಗಳು ಬರುತ್ತಿದೆ. ಮಾಜಿ ಎಂಎಲ್‌ಸಿ, ಅಂಕಣಕಾರ್ತಿ, ಸಂಸ್ಕ್ರತ ಭೂಮಿಕೆಯಲ್ಲಿ ನಾನಾ ದಿಕ್ಕಿನಲ್ಲಿ ಅಧ್ಯಯನ ನಡೆಸಿರುವ ನಿವೃತ ಪ್ರೊಫೆಸರ್ *ಎಸ್.ಆರ್.ಲೀಲಾ ರಚಸಿ, ನಿರ್ಮಾಣ* ಮಾಡಿರುವುದು ಹೊಸ ಅನುಭವ.

 

      ವಿದ್ಯಾರ್ಥಿಯಾಗಿ ಕು.ಮಹಾಪದ್ಮ, ಗುರುಮಾತೆ ಪಾತ್ರದಲ್ಲಿ ಉಡುಪಿಯ ಪರಿಪೂರ್ಣ ಚಂದ್ರಶೇಖರ್ ಇವರೊಂದಿಗೆ ರಿಯಲ್‌ದಲ್ಲಿ ಹೆಸರು ಮಾಡಿರುವ ಶತಾವಧಾನಿ ಡಾ.ಆರ್.ಗಣೇಶ್, ಡಾ.ಗೌರಿ ಸುಬ್ರಹ್ಮಣ್ಯ (ಧರ್ಮಾಧಿಕಾರಿಗಳು, ಮುಕ್ತಿನಾಗ ದೇವಸ್ಥಾನ), ಡಾ.ಪ್ರೇಮಾ, ಡಾ.ಹೇಮಂತ್‌ಕುಮಾರ್, ಆಚಾರ್ಯ ಮೃತ್ಯುಂಜಯಶಾಸ್ತ್ರಿ, ಜಿ.ಎಲ್.ಭಟ್(ಶಿಲ್ಪಜ್ಞ), ಮೃತ್ಯುಂಜಯಶಾಸ್ತ್ರಿ, ಪಂಡಿತ ಪ್ರಸನ್ನವೈದ್ಯ, ಡಾ.ದೀಪಕ್‌ಪರಮಶಿವನ್, ಹೇಮಂತಕುಮಾರ.ಜಿ ಬಣ್ಣ ಹಚ್ಚಿರುವುದು ಚಿತ್ರಕ್ಕೆ ಹಿರಿಮೆ ತಂದುಕೊಟ್ಟಿದೆ. ಡಾ.ದೀಪಕ್ ಪರಮಶಿವನ್ ಸಂಗೀತ, ಮನುಯಪ್ಲಾರ್-ನಾಗರಾಜ್ ಅದ್ವಾನಿ-ಗಿರಿಧರ್‌ದಿವಾನ್ ಛಾಯಾಗ್ರಹಣ, ಎನ್.ನಾಗೇಶ್ ನಾರಾಯಣಪ್ಪ ಸಂಕಲನವಿದೆ.

      ಸಿನಿಮಾವು ಹಾದಿಯಿಂದ ಅಂತ್ಯದವರೆಗೂ ಪದ್ಮಗಂಧಿಯ ಪರಿಮಳ ಪಸರಿಸುತ್ತದೆ. ದೈವೀಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಕಥೆ ಇರುವುದು ವಿಶೇಷ.  ನಮ್ಮಲ್ಲಿ ದೈವೀಕ ಅನುಭೂತಿ ಸ್ಪುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಧಿಯನ್ನು ವಿಸ್ತಿರಿಸಿಕೊಳ್ಳುತ್ತಾ, ಅದರ ಅಗಾದತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರಯಂತೆ ಭಾಸವಾಗಲಾರಂಭಿಸಿದೆ. ಇದೆಲ್ಲಾವನ್ನು ಸಂಶೋಧಿಸಿ ವಿಷಯಗಳನ್ನು ಸನ್ನಿವೇಶಗಳಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ನನ್ನ ಮನಸ್ಸಿನಲ್ಲಿರುವಂತೆ ತೆರೆ ಮೇಲೆ ತೋರಿಸಿದ್ದಾರೆ. ನೀವುಗಳು ವ್ಯಾಪಕ ಪ್ರಚಾರ ಮಾಡಿದರೆ, ನಮ್ಮ ಶ್ರಮ ಸಾರ್ಥಕವಾದಂತೆ ಎಂದು ನಿರ್ಮಾಪಕಿ ಎಸ್.ಆರ್.ಲೀಲಾ ಮಾಹಿತಿ ಬಿಚ್ಚಿಟ್ಟರು.

 

      ಅಂದಹಾಗೆ ಸಿನಿಮಾವು ಇದೇ ತಿಂಗಳು ತೆರೆಗೆ ತರಲು ಸುಚಿತ್ ಫಿಲಂಸ್‌ನ ವೆಂಕಟ್‌ಗೌಡ ಯೋಜನೆ ಹಾಕಿಕೊಂಡಿದ್ದಾರೆ.

 

Copyright@2018 Chitralahari | All Rights Reserved. Photo Journalist K.S. Mokshendra,