Mr.Jack.Film News

Monday, August 31, 2026

 

*ಟೀಸರ್ ನಲ್ಲಿ ಮೋಡಿಮಾಡಿದ "MR ಜಾಕ್"* .                               

 

 *ಸುಮಂತ್ ಗೌಡ ನಿರ್ದೇಶನದ ಹಾಗೂ ಗುರುನಂದನ್ ನಾಯಕನಾಗಿ ನಟಿಸಿರುವ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ* .  

 

 "ಫಸ್ಟ್ rank ರಾಜು" ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗುರುನಂದನ್ ನಾಯಕರಾಗಿ ನಟಿಸಿರುವ "MR. ಜಾಕ್" ಚಿತ್ರದ ಟೀಸರ್ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಸುಮಂತ್ ಗೌಡ ನಿರ್ದೇಶನದ ಈ ಚಿತ್ರವನ್ನು ಮಂಡಿಮನೆ ಟಾಕೀಸ್ ಲಾಂಛನದಲ್ಲಿ ಗುರುನಂದನ್ ಅವರು ತಮ್ಮ ಸ್ನೇಹಿತರೊಡಗೂಡಿ ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 

 

 "MR  ಜಾಕ್" ನಮ್ಮ ಸುತ್ತಮುತ್ತಲಿನಲ್ಲೇ ನಡೆಯುವ ಕಥೆ‌. ಈ ಚಿತ್ರದಲ್ಲಿ ಹಾಸ್ಯವೇ ಪ್ರಧಾನ. ಎಮೋಷನ್ ಸಹ ಇದೆ. ಅಷ್ಟೇ ಅಲ್ಲ ಈಗಿನ ಜನರು ಬಯಸುವ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಗುರುನಂದನ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ತಪಸ್ವಿನಿ ಪೂಣಚ್ಛ. ಮಿತ್ರ, ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್, ಧರ್ಮಣ್ಣ, ಸುಶ್ಮಿತ ಜಗ್ಗಪ್ಪ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶಿವಸೇನ ಛಾಯಾಗ್ರಾಹಕರಾಗಿ, ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶಕರಾಗಿ ಹಾಗೂ ವಿಜಯ್ ರಾಜ್ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಪೂರ್ಣವಾಗಿದ್ದು, ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಇಂದು ಟೀಸರ್ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಹಾಡುಗಳು ಹಾಗೂ ಟ್ರೈಲರ್ ಸಹ ಅನಾವರಣವಾಗಲಿದೆ ಎಂದು ನಿರ್ದೇಶಕ ಸುಮಂತ್ ಗೌಡ ತಿಳಿಸಿದ್ದಾರೆ.

ನಿರ್ದೇಶಕರು ಬಂದು ಕಥೆ ಹೇಳಿದಾಗ ತುಂಬಾ ಇಷ್ಟವಾಯಿತು. ಈ ಕಥೆಯನ್ನು ಮೂರುನಾಲ್ಕು ಜನ ನಿರ್ಮಪಕರಿಗೂ ಹೇಳಲಾಯಿತು. ಅವರು ಒಪ್ಪಿ ಆರಂಭವಾಗುವುದು ತಡವಾಗಬಹುದು ಎಂದೆನಿಸಿ, ನಾನೇ ಮಂಡಿಮನೆ ಟಾಕೀಸ್ ಎಂಬ ಸಂಸ್ಥೆಯ ಮೂಲಕ ನಿರ್ಮಾಣಕ್ಕೆ ಮುಂದಾದೆ. ಕೆಲವು ಸ್ನೇಹಿತರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. "MR ಜಾಕ್" ಅಲಿಯಾಸ್ ಜಾನಕಿರಾಮ ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು. ಇದೊಂದು ಪರಿಶುದ್ಧ ಹಾಸ್ಯಮಯ ಮನೋರಂಜನೆಯ ಚಿತ್ರ. ಮದುವೆ ಆದ ನಂತರ ಕೆಲವರ ಜೀವನ ಸುಖವಾಗಿರುತ್ತದೆ. ಕೆಲವರ ಜೀವನ ಸುಖಕರವಾಗಿರದೆ ವಿಚ್ಚೇದನದ ತನಕ ಹೋಗುತ್ತದೆ ಇದೇ ಕಥೆಯ ಪ್ರಮುಖ ಅಂಶ. ಟೀಸರ್ ಬಿಡುಗಡೆ ಮಾಡುವ ಮೂಲಕ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಟ್ರೈಲರ್ ನಲ್ಲಿ ಚಿತ್ರದ ಕುರಿತು ಇನ್ನಷ್ಟು ತಿಳಿಸುತ್ತೇವೆ. ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ನಾಯಕ ಹಾಗೂ ನಿರ್ಮಾಪಕ ಗುರುನಂದನ್.                      

 

ಈ ಚಿತ್ರದಲ್ಲಿ ನನ್ನ ಪಾತ್ರದ ಹಸರು ನಂದಿನಿ. ಮುಗ್ದ ಶಿಕ್ಷಕಿಯಾಗಿ ಕಾಣಿಸಿಕೊಂಡಿದ್ದೇನೆ ಎಂದು ನಾಯಕಿ ತಪಸ್ವಿನಿ ಪೂಣಚ್ಛ ಹೇಳಿದರು.

 

ಚಿತ್ರದಲ್ಲಿ ನಟಸಿರುವ ಮಿತ್ರ, ಅರವಿಂದ್, ಧರ್ಮಣ್ಣ, ಸುಶ್ಮಿತ ಜಗ್ಗಪ್ಪ, ಅನಂತ ಪದ್ಮನಾಭ, ಛಾಯಾಗ್ರಾಹಕ ಶಿವಸೇನ, ಸಂಗೀತ ನಿರ್ದೇಶಕ ಕಿರಣ್ ರವೀಂದ್ರನಾಥ್, ಸಂಕಲನಕಾರ ವಿಜಯ್ ರಾಜ್ ಹಾಗೂ ನೃತ್ಯ ನಿರ್ದೇಶಕ ಅಭಿಷೇಕ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸಹ ನಿರ್ಮಾಪಕರಾದ ಸಂತೋಷ್, ಮಹೇಶ್ ಹಾಗೂ ಸುಜಿತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

 

Copyright@2018 Chitralahari | All Rights Reserved. Photo Journalist K.S. Mokshendra,