'ಈವಾರ ತೆರೆಮೇಲೆ ಎಂಆರ್‌ಪಿ
ಸ್ಥೂಲಕಾಯದ ವ್ಯಕ್ತಿಗಳು ಸಮಾಜದಲ್ಲಿ ಯಾವ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾರೆ, ಅದನ್ನು ಸಮಸ್ಯೆ ಎಂದುಕೊಳ್ಳದೆ ವರವೆಂದು ಭಾವಿಸಿ ಕೆಲಸದ ಕಡೆ ಗಮನ ಕೊಟ್ಟರೆ ಅವರೂ ಸಮಾಜ ಗುರುತಿಸುವಂಥ ವ್ಯಕ್ತಿಯಾಗಿ ಬೆಳೆಯಬಹುದು ಎಂಬ ಸಂದೇಶವಿರುವ ಚಿತ್ರ "ಎಂಆರ್‌ಪಿ" ಈವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರಕ್ಕೆ ಬಾಹುಬಲಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಅವರ ಪ್ರಕಾರ ಎಂಆರ್ ಪಿ ಎಂದರೆ ಮೋಸ್ಟ್ ರೆಸ್ಪಾನ್ಸಿಬಲ್ ಪರ್ಸನ್. ಎಂ.ಡಿ.ಶ್ರೀಧರ್, ಎ.ವಿ.ಕೃಷ್ಣಕುಮಾರ್, ಮೋಹನ್‌ಕುಮಾರ್ ಎನ್.ಜಿ. ಹಾಗೂ ರಂಗಸ್ವಾಮಿ ಸೇರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಅಂಬುಜಾ ಟೀಸರ್ ಬಿಡುಗಡೆ
ನೈಜ ಘಟನೆ ಆಧಾರಿತ ‘ಅಂಬುಜ’ ಚಿತ್ರದ ಟೀಸರ್ ಕಲಾವಿದರ ಸಂಘದಲ್ಲಿ ಬಿಡುಗಡೆಗೊಂಡಿತು. ಕಥೆ,ಸಾಹಿತ್ಯ ಬರೆದು ನಿರ್ಮಾಣ ಮಾಡಿರುವುದು ಕಾಶಿನಾಥ್.ಡಿ.ಮಡಿವಾಳರ್. ನಿರ್ದೇಶಕ ಶ್ರೀನಿಹನುಮಂತರಾಜು ಅವರಿಗೆ ಎರಡನೇ ಅವಕಾಶ. ರಜನಿ ಮಾತನಾಡಿ ಸಿನಿಮಾ ತುಂಬಾ ವಿಶೇಷವಾಗಿದೆ. ಲಂಬಾಣಿ ವೇಷ ಭೂಷಣ ಕಣ್ಣಿಗೆ ಹಬ್ಬ, ಚಿತ್ರೀಕರಣದಲ್ಲಿ ಅವರು ನಮ್ಮನ್ನು ಸ್ವೀಕರಿಸಿದ ರೀತಿ ಎಲ್ಲವು ಮರೆಯಲಿಕ್ಕೆ ಆಗುವುದಿಲ್ಲ. ಮೊದಲ ದಿನ ಲಂಬಾಣಿ ವೇಷ ಹಾಕಿಕೊಂಡಾಗ ತಲೆ ನೋವಾಗುತ್ತಿತ್ತು. ಆಮೇಲೆ ಸರಿಹೊಂದಿತು ಎಂದರು.
ಮಿಸ್ಟ್ರಿ ಥ್ರಿಲ್ಲರ್ "3.0" ಈವಾರ ತೆರೆಗೆ
ಒರಾಕಲ್ ಕಲಾ ಕ್ರಿಯೇಶನ್ಸ್ ಲಾಛನದಲ್ಲಿ ತಯಾರಾಗಿರುವ ಕ್ರೈಂ, ಥ್ರಿಲ್ಲರ್ ಕಥಾಹಂದರದ ಚಿತ್ರ "3.O" ಈವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಇಂದ್ರಜಿತ್ ಅವರು ಚಿತ್ರದ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳಿದ್ದಾರೆ.
ಹೊಸ ಪ್ರತಿಭೆಗಳಾದ ಶಶಿಕಿರಣ್, ಶಿವರಾಜ್ ಮತ್ತು ಲೋಹಿತ್ ಈ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದು, ಅವರೇ ಬಂಡವಾಳವನ್ನೂ ಹಾಕಿದ್ದಾರೆ. ನಾಯಕಿಯಾಗಿ ನಿಶ್ಕಲಗೌಡ ನಟಿಸಿದ್ದಾರೆ.
ಗಜರಾಮ ಕ್ಲೈಮಾಕ್ಸ್ ಫೈಟ್
‘ಗಜರಾಮ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಇತ್ತೀಚೆಗೆ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಎಲ್ಲರ ಗಮನ ಸೆಳೆದಿದೆ. ಈಗ ಆಕ್ಷನ್ ದೃಶ್ಯಗಳ ಶೂಟಿಂಗ್ ಹೆಚ್‌ಎಂಟಿಯಲ್ಲಿ ನಡೆಯುತ್ತಿತು. ಮಾದ್ಯಮದವರು ಭೇಟಿ ನೀಡಿದಾಗ ನಾಯಕ ರಾಜವರ್ಧನ್ ಮತ್ತು ಖಳನಟ ಕಬೀರ್‌ಸಿಂಗ್ ಹೊಡೆದಾಟದ ಸನ್ನಿವೇಶಗಳನ್ನು ಸೆರೆ ಹಿಡಿಯಲಾಗುತ್ತಿತ್ತು. ಕಬೀರ್‌ಸಿಂಗ್ ಮಾತನಾಡಿ ಇದರಲ್ಲಿ ನಾನು ರೌಡಿಯಾಗಿ ಕಾಣಿಸಿಕೊಂಡಿದ್ದೇನೆ. ಬೇರೆ ಭಾಷೆಯಿಂದ ಇಲ್ಲಿಗೆ ಬಂದಿದ್ದೇನೆ. ಸಿನಿಮಾಗೆ ಭಾಷೆಗಳ ಮಿತಿಯಿಲ್ಲ. ಸದ್ಯ ಹಿಂದಿ ವೆಬ್ ಸೀರೀಸ್‌ದಲ್ಲಿ ನಟಿಸುತ್ತಿದ್ದೇನೆ. ಯಾವ ಭಾಷೆಯಾದರೂ ಅಭಿನಯಿಸುತ್ತೇನೆ ಎಂದರು.
ಸೆಟ್ಟೇರಿದ 1900 ಚಿತ್ರ ಹಾರರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿರುವ ’1900’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಮೊದಲ ದೃಶ್ಯಕ್ಕೆ ಲವ್ ಮಾಕ್ಟೆಲ್ ಖ್ಯಾತಿಯ ಕೃಷ್ಣ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಪದ್ಮಾವತಿ ಪ್ರೊಡಕ್ಷನ್ ಅಡಿಯಲ್ಲಿ ರಾಜೇಶ್.ಬಿ ಮತ್ತು ಉಮೇಶ್.ಕೆ.ಎನ್ ಬಂಡವಾಳ ಹೂಡುತ್ತಿದ್ದಾರೆ. ಮೂಡಿಬಿದರೆಯ ರಾಜೇಶ್.ಬಿ ಮೂಲತ: ನಟನಾಗಿ ಗುರುತಿಸಿಕೊಂಡಿದ್ದು, ಇದರ ಅನುಭವದಿಂದಲೇ ಸಿನಿಮಾಕ್ಕೆ ಕಥೆ, ನಿರ್ದೇಶನ ಮಾಡುವ ಜತೆಗೆ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ. ಉಮೇಶ್.ಕೆ.ಎನ್ ದುಡಿದ ಹಣವನ್ನು ಚಿತ್ರಕ್ಕೆ ವಿನಿಯೋಗಿಸುತ್ತಿದ್ದು ಅಲ್ಲದೆ ಒಂದು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಶಾಪ ....
ಸೂತ್ರಧಾರಿಯಾಗಿ ಚಂದನ್‌ಶೆಟ್ಟಿ ‘ಎಲ್ರ ಕಾಲೆಳೆಯುತ್ತೆ ಕಾ’ ಚಿತ್ರದ ಮೂಲಕ ನಾಯಕನಾಗಿ ಪರಿಚಯಗೊಂಡಿದ್ದ ರಾಪರ್ ಚಂದನ್‌ಶೆಟ್ಟಿ ಈಗ ‘ಸೂತ್ರಧಾರಿ’ ಸಿನಿಮಾದಲ್ಲಿ ಇನ್ಸ್‌ಪೆಕ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿರಣ್‌ಕುಮಾರ್ ನಿರ್ದೇಶನ ಮಾಡುತ್ತಿದ್ದು, ನವರಸನ್ ಬಂಡವಾಳ ಹೂಡುತ್ತಿದ್ದಾರೆ. ಮೊನ್ನೆ ನಡೆದ ಸಮಾರಂಭದಲ್ಲಿ ಹಿರಿಯ ಪ್ರಚಾರಕರ್ತ ಸುಧೀಂದ್ರವೆಂಕಟೇಶ್ ಶೀರ್ಷಿಕೆ ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನವರಸನ್ ನನ್ನ ನಿರ್ಮಾಣದ ಐದನೇ ಚಿತ್ರವಿದು, ಈವರೆಗೂ ನಮ್ಮ ಸಂಸ್ಥೆಯ ಮೂಲಕ ೧೮೦ಕ್ಕೂ ಹೆಚ್ಚು ಚಿತ್ರಗಳ ಇವೆಂಟ್ ....
*ತೆರೆಯಲ್ಲೂ ಜೋಡಿಯಾದರು ಅರವಿಂದ್-ದಿವ್ಯಾ ಉರುಡುಗ* -ಇದು ಆರ್ಧಂಬರ್ಧ ಪ್ರೇಮಕಥೆಯ ವಿಚಾರ- ಬಿಗ್‌ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್, ರಕ್ಷಿತ್‌ಶೆಟ್ಟಿ, ರಿಶಬ್‌ಶೆಟ್ಟಿ, ರಚಿತಾರಾಮ್, ಅನೀಶ್, ಬಾಲು ನಾಗೇಂದ್ರ ಸೇರಿದಂತೆ ಅನೇಕ ಕಲಾವಿದರನ್ನು ಪರಿಚಯಿಸಿದ್ದರು. ಈಗ ಬೈಕ್ ರೇಸರ್ ಅರವಿಂದ್‌ರನ್ನು ನಾಯಕನಾಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ....
ಪ್ರೊಡಕ್ಷನ್ ನಂ.೧ ಚಿತ್ರಕ್ಕೆ ಮುಹೂರ್ತ ಹೆಸರಿಡದ ಚಿತ್ರ ‘ಪ್ರೊಡಕ್ಷನ್ ನಂ.೧’ ಸಿನಿಮಾದ ಮುಹೂರ್ತ ಸಮಾರಂಭವು ವಿಜಯ ದಶಮಿ ದಿನದಂದು ನಂದಿನಿ ಲೇಔಟ್‌ನ ಬಲಮುರಿ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು. ಮಾಜಿ ಕಾರ್ಪೋರೇಟರ್ ರಾಜೇಂದ್ರಕುಮಾರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ‘ಪುಟಾಣಿಸಫಾರಿ’ ‘ವರ್ಣಮಯ’ ‘ಮಠ’ ‘ನೈಟ್‌ಕರ್ಫ್ಯೂ’ ಹಾಗೂ ಇದೇ ತಿಂಗಳು ಬಿಡುಗಡೆಯಾಗುತ್ತಿರುವ ‘ವಾಸಂತಿ ನಲಿದಾಗ’ ಚಿತ್ರಗಳನ್ನು ನಿರ್ದೇಶನ ಮಾಡಿರುವ ರವೀಂದ್ರವೆಂಶಿ ಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ರೈತ, ಉದ್ಯಮಿಯಾಗಿರುವ ಚಿಕ್ಕಬದರಿಕಲ್ಲು ....
ಪ್ರಮೋದ್‌ಶೆಟ್ಟಿ ಈಗ ಶಭಾಷ್ ಬಡ್ಡಿಮಗ್ನೆ ‘ಲಾಫಿಂಗ್ ಬುದ್ದ’ ‘ಕಾಶಿಯಾತ್ರೆ’ ಚಿತ್ರಗಳಲ್ಲಿ ನಾಯಕನಾಗಿ ನಟಿಸಿರುವ ಪ್ರಮೋದ್‌ಶೆಟ್ಟಿ ಮೂರನೇ ಚಿತ್ರ ‘ಶಭಾಷ್ ಬಡ್ಡಿಮಗ್ನೆ’ ಸಿನಿಮಾದ ಮಹೂರ್ತ ಕಂಠೀರವ ಸ್ಟುಡಿಯೋದಲ್ಲಿ ವಿಜಯದಶಮಿ ಹಬ್ಬದಂದು ಅದ್ದೂರಿಯಾಗಿ ನಡೆಯಿತು. ನಟ ಅಜಯ್‌ರಾವ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಹಾರೈಸಿದರು. ಸಹಾಯಕ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಹರೀಶ್.ಸಾ.ರಾ ನಿರ್ದೇಶಕರಾಗಿ ಬಡ್ತಿಗೊಂಡು ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕಥೆ ಬರೆದಿರುವ ಬಿ.ಎಸ್.ರಾಜಶೇಖರ್ ಸಿನಿಮಾಗೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ....
ಐದು ಭಾಷೆಗಳ ಗದಾಯುದ್ದ ಈ ಹಿಂದೆ ‘ಮೃಗಶಿರ’ ಎನ್ನುವ ಚಿತ್ರವನ್ನು ನಿರ್ದೇಶನ ಮಾಡಿದ್ದ ಶ್ರೀವತ್ಸ ಅವರು ‘ಗದಾಯುದ್ದ’ ಸಿನಿಮಾಕ್ಕೆ ಕಥೆ,ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪ್ರಪಂಚದಲ್ಲಿ ಭೂತಪ್ರೇತಗಳು ಇದೆಯೋ ಇಲ್ಲವೋ ತಿಳಿದಿಲ್ಲ. ಆದರೆ ವಾಮಾಚಾರ ಎನ್ನುವುದು ಮಾತ್ರ ಇಂದಿಗೂ ಜೀವಂತವಾಗಿದೆ. ಕೇವಲ ವೈಯಕ್ತಿಕ ದ್ವೇಷ, ಧನದಾಹದಿಂದ ಮನುಷ್ಯರ ಜೀವ ತೆಗೆಯುವುದಕ್ಕಾಗಿ ಇದನ್ನು ಬಳಸಿಕೊಳ್ಳಲಾಗುತ್ತಿದೆ. ಇಂತಹುದೆ ವಿಷಯಗಳನ್ನು ಇಟ್ಟುಕೊಂಡು ಸಿನಿಮಾವನ್ನು ಮಾಡಲಾಗಿದೆ. ಬೆಳಗಾವಿ ಮೂಲದ ನಿತಿನ್‌ಶಿರಗುರ್‌ಕರ್ ನಿರ್ಮಾಣ ಮಾಡಿದ್ದು, ಇವರ ಪುತ್ರ ಸುಮಿತ್ ನಾಯಕನಾಗಿ ನಟಿಸಿದ್ದಾರೆ. ಧನ್ಯಪಾಟೀಲ್ ನಾಯಕಿ. ....
*ಸೆಟ್ಟೇರಿತು ರಾಜವರ್ಧನ್ ನಾಲ್ಕನೇ ಚಿತ್ರ - ’ಗಜರಾಮ’ನಿಗೆ ಕ್ಲ್ಯಾಪ್ ಮಾಡಿದ ಜೂನಿಯರ್ ರೆಬೆಲ್ ಸ್ಟಾರ್* ‘ಮ್ಯಾಸಿವ್ ಸ್ಟಾರ್’ ರಾಜವರ್ಧನ್ ಬಿಚ್ಚುಗತ್ತಿ ಸಿನಿಮಾ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕ ನಟನಾಗಿ ಅಭಿನಯಿಸುತ್ತಿರುವ ಪ್ರಣಯಂ, ಹಿರಣ್ಯ ಸಿನಿಮಾ ಬಿಡುಗಡೆಗೆ ಮೊದಲೇ ಮಾಸ್ ಸಬ್ಜೆಕ್ಟ್ ಸಿನಿಮಾವೊಂದು ರಾಜವರ್ಧನ್ ಬತ್ತಳಿಕೆ ಸೇರಿದೆ. ಅದುವೇ ’ಗಜರಾಮ’. ಫಸ್ಟ್ ಲುಕ್ ಪೋಸ್ಟರ್ ಮೂಲಕ ಕಿಕ್ ಕೊಟ್ಟ ಈ ಚಿತ್ರದ ಮುಹೂರ್ತ ಇಂದು ನೆರವೇರಿದೆ. ನಿರ್ದೇಶಕ ಸುನೀಲ್ ಕುಮಾರ್ ವಿ.ಎ ಹೆಣೆದ ಕಥೆ ಕೇಳಿ ಇಂಪ್ರೆಸ್ ಆಗಿರುವ ರಾಜವರ್ಧನ್ ’ಗಜರಾಮ’ನಾಗಿ ಅಬ್ಬರಿಸಲು ಗ್ರೀನ್ ಸಿಗ್ನಲ್ ....
ಪ್ರೀತಿ ಸ್ನೇಹ ಬದುಕು ಸಾರುವ ದಿ ಚೆಕ್ ಮೇಟ್ ‘ದಿ ಚೆಕ್ ಮೇಟ್’ ಚಿತ್ರವೊಂದು ಕರೋನ ಮುಂಚೆ ಶುರುವಾಗಿ, ಈಗ ತನ್ನೆಲ್ಲಾ ಕೆಲಸಗಳನ್ನು ಮುಗಿಸಿಕೊಂಡು ಅಕ್ಟೋಬರ್ ೭ರಂದು ಜನರಿಗೆ ತೋರಿಸಲು ಸಜ್ಜಾಗಿದೆ. ಭಾರತೀಶ ವಷಿಷ್ಟ ಹಾಗೂ ಸಂತೋಷಚಿಪ್ಪಾಡಿ ನಿರ್ದೇಶಕರುಗಳು. ರಂಜನ್‌ಹಾಸನ್ ನಾಯಕನಾಗಿ ನಟಿಸುವ ಜತೆಗೆ ಜಗದ್ ಜ್ಯೋತಿ ಮೂವಿ ಮೇಕರ‍್ಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಸಿನಿಮಾದ ಹಾಡು, ಟ್ರೇಲರ್‌ನ್ನು ಬಿಡುಗಡೆಗೊಳಿಸಿದೆ. ಚದುರಂಗ ಅಂದರೆ ಬುದ್ದಿವಂತರ ಆಟ ಎಂದೇ ಪ್ರಖ್ಯಾತಿ. ಚೆಸ್ ಆಧಾರವಾಗಿಟ್ಟುಕೊಂಡು ತಯಾರಿಸಿದ ಕಥೆ ಇದಾಗಿದೆ. ಪ್ರೀತಿ, ....
ಬನಾರಸ್ ಟ್ರೇಲರ್ ಲೋಕಾರ್ಪಣೆ ಶಾಸಕ ಜಮೀರ್‌ಅಹ್ಮದ್‌ಖಾನ್ ಪುತ್ರ ಝೈದ್‌ಖಾನ್ ಪ್ರಪ್ರಥಮ ಬಾರಿ ನಟಿಸಿರುವ ‘ಬನಾರಸ್’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಲ್ಮಾನ್‌ಖಾನ್ ಸಹೋದರ ಅರ್ಬಾಜ್‌ಖಾನ್ ಹಿಂದಿ ಭಾಷೆ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ಕನ್ನಡ ಭಾಷೆಯ ಟ್ರೇಲರ್‌ನ್ನು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಅರ್ಬಾಜ್‌ಖಾನ್ ಚಿತ್ರವು ಅದ್ಬುತವಾಗಿ ಮೂಡಿಬಂದಿದೆ ಎಂಬುದು ತುಣುಕುಗಳನ್ನು ನೋಡಿದರೆ ತಿಳಿಯುತ್ತದೆ. ಕನ್ನಡ ಸಿನಿಮಾಗಳನ್ನು ನೋಡುತ್ತೇನೆ. ಇಲ್ಲಿನ ಚಿತ್ರರಂಗವು ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಒಳ್ಳೆಯ ಕಥೆಗಳನ್ನು ಜನ ಖಂಡಿತಾ ಮೆಚ್ಚುತ್ತಾರೆ. ಅದರಲ್ಲೂ ....
ಕುತೂಹಲ ಹುಟ್ಟಿಸಿದ ಬಾಂಡ್ ರವಿ ಟೀಸರ್ ‘ಪ್ರೀಮಿಯರ್ ಪದ್ಮಿನಿ’ದಲ್ಲಿ ಕಾರು ಚಾಲಕ, ‘ರತ್ನನ್ ಪ್ರಪಂಚ’ದಲ್ಲಿ ಉಡಾಳ್‌ಬಾಬು ಆಗಿ ಗುರುತಿಸಿಕೊಂಡಿದ್ದ ಪ್ರಮೋದ್ ಈಗ ‘ಬಾಂಡ್ ರವಿ’ ಚಿತ್ರದಲ್ಲಿ ಡಾ.ಪುನೀತ್‌ರಾಜ್‌ಕುಮಾರ್ ಅಭಿಮಾನಿಯಾಗಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಮೊನ್ನೆ ಬಿಡುಗಡೆಯಾದ ಟೀಸರ್‌ದಲ್ಲಿ ಪಂಚಿಂಗ್ ಹಾಗೂ ಮಾಸ್ ಡೈಲಾಗ್‌ಗಳು ಗಮನ ಸೆಳೆದಿದೆ. ಸಂಗೀತ ಸಂಯೋಜಕ ಮನೋಮೂರ್ತಿ ಮಾತನಾಡಿ ಈ ಸಿನಿಮಾದ ಬಗ್ಗೆ ಅಪಾರವಾದ ಭರವಸೆ ಇದೆ. ‘ಮುಂಗಾರು ಮಳೆ’ ಕೂಡ ಹೀಗೆ ಶುರುವಾಗಿ, ನಂತರ ಹಿಟ್ ಆಗಿತ್ತು. ನಾಯಕನಿಗೆ ತುಂಬಾ ಶೇಡ್ಸ್ ಇದೆ ಎಂದರು. ನಾನು ಈ ....
ನ್ಯಾನೋ ನಾರಾಯಣಪ್ಪ ಟ್ರೇಲರ್ ಬಿಡುಗಡೆ
‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ನಿರ್ದೇಶನ ಮಾಡಿದ್ದ ಕುಮಾರ್ ಈಗ ‘ನ್ಯಾನೋ ನಾರಾಯಣಪ್ಪ’ ಚಿತ್ರಕ್ಕೆ ರಚನೆ,ಚಿತ್ರಕಥೆ,ಆಕ್ಷನ್ ಕಟ್ ಹೇಳುವ ಜತೆಗೆ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಸಲುವಾಗಿ ಮೊನ್ನೆ ಟ್ರೇಲರ್ ಅನಾವರಣ ಸಮಾರಂಭ ನಡೆಯಿತು. ಇದೊಂದು ಕಾಮಿಡಿ, ಎಮೋಷನಲ್ ಡ್ರಾಮಾ ಒಳಗೊಂಡ ಚಿತ್ರವಾಗಿದ್ದು, ನೋಡುಗರನ್ನು ತುಂಬಾ ಕಾಡುವಂಥ ತಾತನ ಕಥೆಯನ್ನು ಹೇಳಲಿದ್ದಾರೆ. ಕೆಜಿಎಫ್ ಖ್ಯಾತಿಯ ಕೃಷ್ಣೋಜಿರಾವ್ ಶೀರ್ಷಿಕೆ ಹೆಸರಿನಲ್ಲಿ ಕಾಣಿಸಿಕೊಂಡಿದ್ದು, ನ್ಯಾನೋ ಕಾರು ಕೂಡ ಪ್ರಮುಖ ಪಾತ್ರವಹಿಸಿರುವುದು ವಿಶೇಷ.
ಕಿಂಗ್ಸ್ ಕ್ಲಬ್‌ದಲ್ಲಿ ಲವ್‌ಲೀ ಚಿತ್ರೀಕರಣ ‘ಲವ್ ಲೀ’ ಸಿನಿಮಾದ ಚಿತ್ರೀಕರಣ ನಾಗರಬಾವಿ ಬಳಿ ಇರುವ ಕಿಂಗ್ಸ್ ಕ್ಲಬ್‌ನಲ್ಲಿ ನಡೆಯುತ್ತಿತ್ತು. ಮಾದ್ಯಮದವರು ಸೆಟ್‌ಗೆ ಹೋದಾಗ ವಸಿಷ್ಠಸಿಂಹ, ಉಪನಾಯಕಿ ಸಮೀಕ್ಷಾ, ಸಾಧುಕೋಕಿಲ ದೃಶ್ಯದಲ್ಲಿ ಭಾಗವಹಿಸಿದ್ದರು. ಬಿಡುವು ಮಾಡಿಕೊಂಡು ತಂಡವು ಮಾತಿಗೆ ಕುಳಿತುಕೊಂಡಿತು. ವಸಿಷ್ಠಸಿಂಹ ಮಾತನಾಡಿ ಕೊನೆ ಹಂತದ ಶೂಟಿಂಗ್ ನಡೆಯುತ್ತಿದೆ. ಇದಾದ ನಂತರ ಉಡುಪಿ, ಮಂಗಳೂರು, ಹಾಗೂ ವಿದೇಶಕ್ಕೆ ಹೋಗುವ ಇರಾದೆ ಇದೆ. ಇಂಥಾ ಜಾನರ್ ಸಿನಿಮಾ ಅಂತ ಹೇಳಲಾಗುವುದಿಲ್ಲ. ೮-೧೦ ವರ್ಷಗಳ ಹಿಂದೆ ನಡೆದಂಥ ಒಂದಷ್ಟು ನೈಜ ಘಟನೆಗಳನ್ನು ....
*ಟೀಸರ್ ನಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ ಪ್ಯಾನ್ ಇಂಡಿಯಾ ಚಿತ್ರ "ಕಬ್ಜ"* *ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ ಅವರಿಂದ ಟೀಸರ್ ಬಿಡುಗಡೆ.* ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ ಅಭಿನಯದ, ಆರ್ ಚಂದ್ರು ನಿರ್ದೇಶಿಸಿರುವ, ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ"ದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ದಕ್ಷಿಣ ಭಾರತದ ಖ್ಯಾತ ನಟ ರಾಣಾ ದಗ್ಗುಬಾಟಿ "ಕಬ್ಜ" ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ಬಿಡುಗಡೆಯಾದ ಕ್ಷಣದಿಂದಲೇ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ವೀಕ್ಷಣೆಯಲ್ಲಿ ದಾಖಲೆ ನಿರ್ಮಿಸುತ್ತಿದೆ. ಉಪೇಂದ್ರ ಸರ್ ಮುಂದೆ ನಿಂತು ಮಾತನಾಡುವುದಕ್ಕೆ ಭಯ ಆಗತ್ತೆ. ಅಂತಹ ಅದ್ಭುತ ನಟ ....
*ಸಖತಾಗಿದೆ "ತ್ರಿಬಲ್ ರೈಡಿಂಗ್" ಹಾಡು.* ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ತ್ರಿಬಲ್ ರೈಡಿಂಗ್" ಚಿತ್ರದ "ಯಟ್ಟಾ ಯಟ್ಟಾ" ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಾನು "ಮುಂಗಾರು ಮಳೆ" ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ ಕೂಡಿ ಬಂದಿದೆ. "ತ್ರಿಬಲ್ ರೈಡಿಂಗ್" ಸ್ವಮೇಕ್ ಚಿತ್ರ. ಆಕ್ಷನ್, ಥ್ರಿಲ್ಲರ್, ....
*ದಿಲೀಪ್ ರಾಜ್ ಈಗ "ಮಹಾನ್ ಕಲಾವಿದ".* *ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಅಭಯ್ ಚಂದ್ರ ನಿರ್ದೇಶನ.* ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ದಿಲೀಪ್ ರಾಜ್ ಈಗ ಕಿರುತೆರೆಯಲ್ಲೂ ಜನಪ್ರಿಯ. "ಹಿಟ್ಲರ್ ಕಲ್ಯಾಣ"ದ A J ಪಾತ್ರದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ. ಪ್ರಸ್ತುತ ಇವರು "ಮಹಾನ್ ಕಲಾವಿದ" ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಹಿರಿಯ ಪತ್ರಕರ್ತರಾದ ದಿ.ಸುರೇಶ್ಚಂದ್ರ ಪುತ್ರ ಅಭಯ್ ಚಂದ್ರ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಇವರ ಎರಡನೇ ನಿರ್ದೇಶನದ ಚಿತ್ರ. ಸಂಗೀತ ನಿರ್ದೇಶನ ಕೂಡ ಅಭಯ್ ಚಂದ್ರ ಅವರದೆ. ಈ ಚಿತ್ರದ ಕೆಲವು ವಿಷಯಗಳನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ....
ಶುಭಮಂಗಳ ಟ್ರೇಲರ್ ಬಿಡುಗಡೆ ೭೦ರ ದಶಕದಲ್ಲಿ ತೆರೆಕಂಡ ಚಿತ್ರಬ್ರಹ್ಮ ಪುಟ್ಟಣ್ಣಕಣಗಾಲ್ ನಿರ್ದೇಶನದ ‘ಶುಭಮಂಗಳ’ ಬಿಡುಗಡೆಗೊಂಡು ಯಶಸ್ವಿಯಾಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಹೊಸ ಕತೆಯೊಂದಿಗೆ ಚಿತ್ರವೊಂದು ಸಿದ್ದಗೊಂಡಿದೆ. ಪ್ರಚಾರದ ಸಲುವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಿಲ್ಕ್‌ಬೋರ್ಡ್, ಮಹಾಸಂಪರ್ಕ ಸೇರಿದಂತೆ ೨೦ಕ್ಕೂ ಹೆಚ್ಚು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸಂತೋಷ್‌ಗೋಪಾಲ್ ಕಥೆ ಬರೆದು ಸಂಕಲನ ಮಾಡಿ ಆಕ್ಷನ್ ಕಟ್ ಹೇಳಿದ್ದಾರೆ. ಜತೆಗೆ ಆವ್ಯಕ್ತ ಬ್ಯಾನರ್‌ನಡಿ ಸ್ನೇಹಿತರೊಂದಿಗೆ ಸೇರಿಕೊಂಡು ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಮದುವೆ ಮನೆಯಲ್ಲಿ ....