ಮರುಸೃಷ್ಟಿಯಲ್ಲಿ ನಾಗರಹಾವು 70 ದಶಕದಲ್ಲಿ ಬಿಡುಗಡೆಗೊಂಡು ಸೂಪರ್ ಹಿಟ್ ಆಗಿದ್ದ ’ನಾಗರ ಹಾವು’ ಇದೇ ಶೀರ್ಷಿಕೆಯಲ್ಲಿ ಎರಡು ಬಾರಿ ಸಿನಿಮಾಗಳು ಬಂದಿದ್ದರೂ ಕಥೆ ಬೇರೆಯದೆ ಆಗಿತ್ತು. ಆದರೆ ಈಗ ಪಾತ್ರಧಾರಿಗಳ ಹೆಸರನ್ನು ಬಳಸಿಕೊಂಡಿರುವ ’ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರವೊಂದು ಸದ್ದಿಲ್ಲದೆ ಮುಗಿಸಿಕೊಂಡಿದೆ. ಪ್ರಚಾರದ ಮೊದಲ ಹಂತವಾಗಿ ಎಸ್ಆರ್ವಿ ಚಿತ್ರಮಂದಿರ ಕಿಕ್ಕಿರಿದ ಜನಸಂದಣಿಯಲ್ಲಿ ಎರಡು ನಿಮಿಷದ ಟ್ರೇಲರ್ ಅನಾವರಣಗೊಂಡಿತು. ಜೋಳಿಗೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಪಲ್ಲಕ್ಕಿ ಬರವಣಿಗೆ, ನಿರ್ದೇಶನ ಮತ್ತು ಒಂದು ಮಹತ್ವದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಾಧಾಕೃಷ ಪಲ್ಲಕ್ಕಿ ಬಂಡವಾಳ ಹೂಡಿದ್ದು, ಗೌತಮ್ ....
*"ಮರಳಿ ಮನಸಾಗಿದೆ" ಹಾಡುಗಳ ದಿಬ್ಬಣ ಶುರುವಾಗಿದೆ* . *ಮನುಕುಲದ ಮೌಲ್ಯಗಳನ್ನು ಸಾರುವ ಈ ಚಿತ್ರದ ಮೊದಲ ಹಾಡು ಶಾಸಕ ಅಶ್ವಥ್ ನಾರಾಯಣ ಅವರಿಂದ ಅನಾವರಣ* . ಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್ ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ "ಮರಳಿ ಮನಸಾಗಿದೆ" ಚಿತ್ರದ ಮೊದಲ ಹಾಡನ್ನು ಶಾಸಕ ಆಶ್ವಥ್ ನಾರಾಯಣ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನು ಮನಸು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು A2 MUSIC ಮೂಲಕ ಬಿಡುಗಡೆಯಾಗಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮತನಾಡಿದರು. ....
ಹೃದಯಗೀತೆ ಸುಮಧುರ ದೃಶ್ಯ ಗೀತೆಗಳ ಗುಚ್ಚ ಪ್ರತಿಭೆ ಅನ್ನುವುದು ಯೊರೊಬ್ಬರ ಸ್ವತ್ತು ಅಲ್ಲ. ಯಾರಿಗೆ ಬೇಕಾದರೂ ಸರಸ್ವತಿ ಒಲಿಯಬಲ್ಲಳು. ಆ ಸಾಲಿಗೆ ಪ್ರೀತಿ ಅಶೋಕ ಸೇರ್ಪಡೆಯಾಗುತ್ತಾರೆ. ವೃತ್ತಿಯಲ್ಲಿ ಹಿರಿಯ ದಂತ ವೈದ್ಯೆ. ಪ್ರವೃತ್ತಿಯಲ್ಲಿ ಸಾಹಿತಿ ಮತ್ತು ಗಾಯಕಿ. ಮೊನ್ನೆಯಷ್ಟೇ ಇವರ ಬತ್ತಳಿಕೆಯಿಂದ ಮೂಡಿಬಂದಿರುವ ನಾಲ್ಕು ಹಾಡುಗಳ ’ಹೃದಯ ಗೀತೆ’ ವಿಡಿಯೋ ಆಲ್ಬಂ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಆರ್.ಎಸ್.ಗಣೇಶ್ ನಾರಾಯಣನ್ ಸಂಗೀತ ಸಂಯೋಜಿಸಿ ಒಂದರೆಡು ಗೀತೆಯಲ್ಲಿ ಕಾಣಿಸಿಕೊಂಡು ಧ್ವನಿಯಾಗಿದ್ದಾರೆ. ಶತ ಚಿತ್ರಗಳ ನಿರ್ದೇಶಕ ಸಾಯಿಪ್ರಕಾಶ್, ಸಾಹಿತಿ,ನಿರ್ದೇಶಕ, ಸಂಗೀತ ಸಂಯೋಜಕ ....
ಪೈರೆಸಿ ಮೇಲೆ ಸರ್ಕಾರ ನಟ್ಟು ಬೋಲ್ಟು ಟೈಟ್ ಮಾಡುವುದು ಸೂಕ್ತ - ಲಹರಿವೇಲು ಕ್ಯಾಚಿ ಟೈಟಲ್ ಹೊಂದಿರುವ ’ಡೆಡ್ಲಿ ಲವರ್ಸ್’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ನಾಗೇಂದ್ರ ಕಥೆ,ಚಿತ್ರಕಥೆ,ಸಂಭಾಷಣೆ,ಸಂಕಲನ, ನಿರ್ದೇಶನ ಜತೆಗೆ ಅನಘ ಎಂಟರ್ ಪ್ರೈಸಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಗೃಹ ಮಂತ್ರಿ ಪಾತ್ರ ನಿರ್ವಹಿಸಿರುವ ಲಹರಿವೇಲು ಕಾಯಾಕ್ರಮಕ್ಕೆ ಚಾಲನೆ ನೀಡಿದರು. ಅಖಿಲ್ ಕುಮಾರ್ ನಾಯಕನಾಗಿ ಮೂರನೇ ಅವಕಾಶ. ನವಪ್ರತಿಭೆ ತನುಪ್ರಸಾದ್ ನಾಯಕಿ. ಎಸಿಪಿಯಾಗಿ ಪ್ರೇಮಾಗೌಡ, ತಂದೆಯಾಗಿ ಭಾಸ್ಕರ್, ದುರಳನಾಗಿ ವಿನೋಧ್, ಎ.ಆರ್.ಲೋಕೇಶ್ ಮುಂತಾದವರು ನಟಿಸಿದ್ದಾರೆ. ಸಂಗೀತ ಲಯಕೋಕಿಲ, ....
" ಕಿರಿಕ್ " ಟ್ರೈಲರ್ ಬಿಡುಗಡೆ ಮಾಡಿದ ಸಚಿವ ಚೆಲುವರಾಯಸ್ವಾಮಿ ನಾಗತಿಹಳ್ಳಿ ಗಂಗಾಧರಗೌಡ ಅವರ ನಿರ್ದೇಶನದ, ರವಿ ಶೆಟ್ಟಿ, ಪೂಜಾ ರಾಮಚಂದ್ರ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ’ಕಿರಿಕ್’ ಚಲನಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಗುರುವಾರ ಸಂಜೆ ಕಲಾವಿದರ ಸಂಘದಲ್ಲಿ ನೆರವೇರಿತು. ಸಚಿವ ಎನ್. ಚೆಲುವರಾಯಸ್ವಾಮಿ ಅವರು ಕಿರಿಕ್ ಚಿತ್ರದ ಟ್ರೈಲರ್ ರಿಲೀಸ್ ಮಾಡಿದರೆ, ಸಾಹಿತಿ ನಾಗೇಂದ್ರ ಪ್ರಸಾದ್, ನಟ ಚೇತನ್ ಹಾಗೂ ಚೆಲುವರಾಯಸ್ವಾಮಿ ಅವರ ಪುತ್ರ ಸಚಿನ್ ೩ ಲಿರಿಕಲ್ ಹಾಡುಗಳನ್ನು ಬಿಡುಗಡೆಗೊಳಿಸಿದರು. ಗ್ಯಾರೇಜ್ ನಲ್ಲಿ ಮೆಕ್ಯಾನಿಕ್ ಕೆಲಸ ಮಾಡುವ ನಾಯಕ, ಸದಾ ಕಿರಿಕ್ ಮಾಡೋ ನಾಯಕಿ ಇಬ್ಬರ ಮಧ್ಯೆ ಕಿರಿಕ್, ....
ನಾನ್ ಪೋಲಿ ರೊಮ್ಯಾಂಟಿಕ್ ಸಾಂಗ್ ಬಿಡುಗಡೆ ಸ್ನೇಹ, ಪ್ರೀತಿ ಹಾಗೂ ತಾಯಿ ಸೆಂಟಿಮಂಟ್ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ನಾನ್ ಪೋಲಿ. ಯಶವಂತ್, ಹರೀಶ್, ನಾಯಕಿ ದಿಶಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ನಾಯಕ ಯಶವಂತ್ ಎಂ. ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗುತ್ತಿರುವ ಈ ಚಿತ್ರದ ಲಿರಿಕಲ್ ಹಾಡಿನ ಬಿಡುಗಡೆ ಸಮಾರಂಭ ಬಸವೇಶ್ವರ ನಗರದ ಡಾ.ರಾಜ್ಕುಮಾರ್ ಕಲಾಭವನದಲ್ಲಿ ನೆರವೇರಿತು, ಚೇತನ್ ಅವರ ಸಾಹಿತ್ಯ ಹಾಗೂ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ’ಯಾರೇ ನೀ ಯಾರೇ’ ಎಂದು ....
"ಪ್ಯಾರ್" ಕ್ರೇಜಿ ಸ್ಟಾರ್ ಹೊಸ ಚಿತ್ರ ಭಾವುಕ ತಂದೆಯಾಗಿ ರವಿಚಂದ್ರನ್ ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಾಣ ಮಾಡುತ್ತಿರುವ ನೂತನ ಚಿತ್ರದ ಟೈಟಲ್ ಅನಾವರಣ ಸಮಾರಂಭ ನಡೆಯಿತು. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೇ ’ಪ್ಯಾರ್’ ಎಂಬ ನೂತನ ಶೀರ್ಷಿಕೆ ಯನ್ನು ಲಾಂಚ್ ಮಾಡಿದರು. ಈ ಚಿತ್ರದಲ್ಲಿ ಭರತ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಆ್ಯನ್ ಎಮೋಷನಕ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ. ನಟ ....
ಅಮರಾವತಿ ಪೋಲಿಸ್ ಸ್ಟೇಷನ್ ಚಿತ್ರದ ಟೀಸರ್ ಬಿಡುಗಡೆ ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ, ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ ಚಿತ್ರ "ಅಮರಾವತಿ ಪೊಲೀಸ್ ಸ್ಟೇಷನ್". ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನಡೆಯಿತು. ಸುಮಾರು 800ಕ್ಕೂ ಹೆಚ್ಚು ಚಿತ್ರಗಳಿಗೆ ಪ್ರಚಾರ ಕಾರ್ಯ ನಿರ್ವಹಿಸಿರುವ ಕನ್ನಡ ಚಿತ್ರರಂಗದ ಹಿರಿಯ ಪ್ರಚಾರ ....
*ಕನ್ನಡದ ಮೊದಲ ವಾಕ್ಚಿತ್ರ "ಸತಿ ಸುಲೋಚನ" ಮರು ಸೃಷ್ಟಿ* . *ಹಲವು ಪ್ರಥಮಗಳನ್ನೊಳಗೊಂಡಿರುವ ಈ ಚಿತ್ರಕ್ಕೆ ಪಿ.ಶೇಷಾದ್ರಿ ನಿರ್ದೇಶನ ಹಾಗೂ ಸೃಜನ್ ಲೋಕೇಶ್ ನಿರ್ಮಾಣ* . *3.3.2026 ರಂದು ಮರು ಸೃಷ್ಟಿಯಾದ "ಸತಿ ಸುಲೋಚನ" ಚಿತ್ರ ಬಿಡುಗಡೆ* 3.3.1934 ಅಂದರೆ ಸರಿಯಾಗಿ 91 ವರ್ಷಗಳ ಹಿಂದೆ ಕನ್ನಡದ ಮೊದಲ ವಾಕ್ಚಿತ್ರ "ಸತಿ ಸುಲೋಚನ" ಬಿಡುಗಡೆಯಾಗಿತ್ತು. ನಾಟಕದಲ್ಲಿ ಕಲಾವಿದರ ಅಭಿನಯವನ್ನು ನೋಡಿದ ಜನರು ತೆರೆಯ ಮೇಲೆ ಮೊದಲ ವಾಕ್ಚಿತ್ರವನ್ನು ನೋಡಿ ಮೂಕ ವಿಸ್ಮಿತರಾದರು. ಹಿರಿಯ ನಟ ಆರ್ ನಾಗೇಂದ್ರರಾಯರ ಸಲಹೆ ಮೇರೆಗೆ ರಾಜಸ್ಥಾನ ಮೂಲದವರಾದ ಚಮನ್ ಲಾಲ್ ಡೊಂಗಾಜಿ ಅವರು ನಿರ್ಮಾಣ ಮಾಡಿದ ಈ ಚಿತ್ರವನ್ನು ವೈ.ವಿ.ರಾವ್ ನಿರ್ದೇಶನ ಮಾಡಿದ್ದರು. ....
*"ರಾಮನಗರ" ಇದು ವಿದ್ಯಾವಂತ ದೇಶಾಭಿಮಾನಿ ರೈತನ ಕಥೆ.* *ರೇಷ್ಮೆನಗರದ ಹೆಸರೆ ಈಗ ಚಿತ್ರದ ಶೀರ್ಷಿಕೆ* . ಕನ್ನಡದಲ್ಲಿ ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿವೆಯಾದರೂ, "ರಾಮನಗರ" ಚಿತ್ರ ವಿಭಿನ್ನ ಈವರೆಗೂ ಬಂದಿರದ ವಿಭಿನ್ನ ಕಥಾಹಂದರದೊಂದಿಗೆ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ರಾಮನಗರ ಜಿಲ್ಲೆಯ ಬೇವೂರು ಮಠದ ಪರಮಪೂಜ್ಯರು ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಆಶೀರ್ವದಿಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 'ರಾಮನಗರ’ ಊರಿನ ಶೀರ್ಷಿಕೆಯಾದರೂ ಇದು ರೈತನ ಕಥೆ. ಅದರಲ್ಲೂ ವಿದ್ಯಾವಂತ ....
*ಅಪರೂಪದ ಶಸ್ತ್ರ ಚಿಕಿತ್ಸೆ ಕುರಿತ ಸಾಕ್ಷ ಚಿತ್ರ "ಮಿಸ್ಲೆ"* *ಮಾನವೀಯತೆಯೇ ಮುಖ್ಯ ಎಂದು ಸಾರುವ ಈ ಸಾಕ್ಷ್ಯಚಿತ್ರಕ್ಕೆ ಸಂಸದ ಡಾ||ಸಿ.ಎನ್ ಮಂಜುನಾಥ್, ನಟಿ ಪ್ರಿಯಾಂಕ ಉಪೇಂದ್ರ ಮತ್ತು S .ರವಿ. ಐಪಿಎಸ್ ರವರ ಸಾಥ್* ವೈದ್ಯಕೀಯ ಲೋಕದಲ್ಲಿ ಆಗಾಗ ಅಚ್ಚರಿಗಳು ನಡೆಯುತ್ತವೆ ಇಂತಹ ಘಟನೆಗಳನ್ನು ಮುಂದಿಟ್ಟುಕೊಂಡು ನಿರ್ದೇಶಕ ಎ. ಪರಮೇಶ್ " ಮಿಸ್ಲೆ" ಸಾಕ್ಷ್ಯಚಿತ್ರ ನಿರ್ದೇಶನ ಮಾಡಿದ್ದು ಮನಮುಟ್ಡುವ ರೀತಿ ಕಟ್ಟಿಕೊಟ್ಟಿದ್ದಾರೆ. ವೈದ್ಯಕೀಯ ಕ್ಷೇತ್ರಕ್ಕೆ ಸಾವಲಾಗಿದ್ದ ಕಾಯಿಲೆಯಿಂದ ಡಾಕ್ಟರ್ ಹೇಗೆ ರೋಗಿಯನ್ನು ಪಾರುಮಾಡಿದರು ಎಂಬುದನ್ನು ಆಂಧ್ರಪ್ರದೇಶದ ಅನಂತಪುರದ ರೋಗಿಯೊಬ್ಬರು ಕೋವಿಡ್ ಸೋಂಕು ತಗುಲಿ ಅದರಿಂದ ಪಾರಾಗುವುದರೊಳಗೆ ಇನ್ನೊಂದು ....
*ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು ‘ಆಪಲ್ ಕಟ್’ ಚಿತ್ರದ ಟ್ರೇಲರ್* . ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ "ಆಪಲ್ ಕಟ್ " ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ದಾಸೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಅನಾವರಣ ಮಾಡಿ ಮಾತನಾಡಿದ ನಟ ಗಣೇಶ್, ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು ಸಾಮಾನ್ಯವಾಗಿ ನನ್ನ ಚಿತ್ರದ ಹೊರತು ಬೇರೆ ಸಮಾರಂಭಗಳಿಗೆ ಹೋಗುವುದು ಕಡಿಮೆ. ಕನ್ನಡ ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಸುಕೃತ ವಾಗ್ಲೆ ಅಭಿನಯದ "ಕಪಟಿ".* . *ದಯಾಳ್ ಪದ್ಮನಾಭನ್ ನಿರ್ಮಾಣದ ಈ ಚಿತ್ರ ಮಾರ್ಚ್ 7 ರಂದು ತೆರೆಗೆ* "ಹಗ್ಗದ ಕೊನೆ", "ಆ ಕಾರಾಳ ರಾತ್ರಿ" ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ - ಚೇತನ್ ಎಸ್ ಪಿ ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಕಪಟಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಹೆಸರಾಂತ ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್ ಯು ಶೆಟ್ಟಿ ....
SBPL ಲೋಗೋ ಅನಾವರಣ ದಕ್ಷಿಣ ಭಾರತದ ಅತೀ ದೊಡ್ಡ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಶ್ರೀಮುರಳಿ, ಶರಣ್ ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಹಲವು ರೀತಿಯ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಿವೆ. ಈ ಸಾಲಿಗೆ ಹೊಸ ಸೇರ್ಪಡೆ ಸೌಥ್ ಭಾರತ್ ಪ್ರೀಮಿಯರ್ ಲೋಗ್ ಟೆನ್ನಿಸ್ ಬಾಲ್ ಪಂದ್ಯಾವಳಿ. ಹೆಸರೇ ಹೇಳುವಂತೆ ದಕ್ಷಿಣ ಭಾರತದ ಆರೂ ರಾಜ್ಯಗಳ ಕ್ರಿಕೆಟ್ ಆಟಗಾರರ ಟೂರ್ನಿ ಇದಾಗಿದ್ದು, ಸದ್ಯದಲ್ಲೇ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಇತ್ತೀಚೆಗೆ SBPLನ ಲೋಗೋ ಅನಾವರಣ ಕಾರ್ಯಕ್ರಮವು ಶೆರಟನ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ನಟರಾದ ಶ್ರೀಮುರಳಿ, ಶರಣ್, ....
ಸೂರಿ ಮತ್ತು ಸಂಧ್ಯಾರನ್ನು ಕೊಂಡಾಡಿದ ಉಪೇಂದ್ರ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ‘ರಿಯಲ್ ಸ್ಟಾರ್’ ಅಭಿಮನ್ಯು ಕಾಶೀನಾಥ್ ಮತ್ತು ಅಪೂರ್ವ ನಾಯಕ-ನಾಯಕಿಯಾಗಿ ನಟಿಸಿರುವ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ. ಚಿತ್ರವು ಮಾರ್ಚ್ 06ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಟ್ರೇಲರ್ ಬಿಡುಗಡೆಯಾಗಿದೆ. ಇತ್ತೀಚೆಗೆ MMB Legacyಯಲ್ಲಿ ಚಿತ್ರತಂಡ ಟ್ರೇಲರ್ ಬಿಡುಗುಡೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ನಟ-ನಿರ್ದೇಶಕ ಉಪೇಂದ್ರ ಆಗಮಿಸಿ, ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೇಲರ್ ಬಿಡುಗಡೆ ಮಾಡಿ ....
‘ಡ್ಯೂಡ್’ ಚಿತ್ರದ ಹಾಡು ಬಿಡುಗಡೆ ತೇಜ್ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದ ಮೇಘನಾ ರಾಜ್ ಮಹಿಳೆಯರ ಶಕ್ತಿ ತೋರಿಸುವ ಚಿತ್ರಕ್ಕೆ ಪುನೀತ್ ರಾಜ್ಕುಮಾರ್ ಪ್ರೇರಣೆ ಸತತ ಪರಿಶ್ಮದಿಂದ ಕನಸು ನನಸಾಗುತ್ತದೆ ಎಂದು ಸಾರುವ ಚಿತ್ರ ಕನ್ನಡದಲ್ಲಿ ಫುಟ್ಬಾಲ್ ಹಿನ್ನೆಲೆಯ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಅಂಥದ್ದೊಂದು ಪ್ರಯತ್ನವನ್ನು ‘ರಿವೈಂಡ್’, ‘ರಾಮಾಚಾರಿ 2.0’ ಚಿತ್ರಗಳ ಖ್ಯಾತಿಯ ನಟ-ನಿರ್ದೇಶಕ ತೇಜ್ ಮಾಡುತ್ತಿದ್ದು, ‘ಡ್ಯೂಡ್’ ಎಂಬ ಹೆಸರಿನ ಫುಟ್ಬಾಲ್ ಹಿನ್ನೆಲೆಯ ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು 12 ಹೊಸ ನಾಯಕಿಯರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಈಗಾಗಲೇ ....
ಒಳ್ಳೆಯದು ಮಾಡುವವನು, ಓ ಎನ್ನನೇ ಶಿವನು ‘ದರ್ಶನ’ ಹದಿನೈದು ನಿಮಿಷದ ಕಿರುಚಿತ್ರವೊಂದು ಶಿವನ ಪರಿಕಲ್ಪನೆಯಲ್ಲಿ ಕಥೆಯು ಇರುವುದರಿಂದ, ಮಹಾ ಶಿವರಾತ್ರಿ ಹಬ್ಬದಂದು ಮಾಧ್ಯಮದವರಿಗೆ ವಿಶೇಷ ಪ್ರದರ್ಶನ ಏರ್ಪಾಟು ಮಾಡಲಾಗಿತ್ತು. ನಟ, ಮಾಜಿ ಮಂತ್ರಿ ಕುಮಾರ್ ಬಂಗಾರಪ್ಪ ಪುತ್ರ ಅರ್ಜುನ್ ಬಂಗಾರಪ್ಪ ಅಪ್ಪನಂತೆ ನಿರ್ಮಾಣ ಮಾಡುವುದರ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಗೆಳೆಯ ನಿತೀಶ್ ವಿನಯ್ ರಾಜ್ ರಚನೆ ಮತ್ತು ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ನಾಸ್ತಿಕ ಹುಡುಗನೊಬ್ಬ ಇರುಳಿನಲ್ಲಿ ಬುಲೆಟ್ ಓಡಿಸುತ್ತಾ ಕಾಡಿನ ದಾರಿಯಲ್ಲಿ ಹೋಗುವಾಗ ....
*ಈ ವಾರ ಬಿಡುಗಡೆಯಾಗಲಿದೆ ಹೊಸತಂಡದ ಹೊಸಪ್ರಯತ್ನ "1990s"* .
ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರ ಈ ವಾರ(ಫೆಬ್ರವರಿ 28) ಬಿಡುಗಡೆಯಗುತ್ತಿದೆ.
ನನಗೂ ಲವ್ವಾಗಿದೆ ಹಾಡು ಮತ್ತು ಟ್ರೇಲರ್ ಬಿಡುಗಡೆ ‘ನನಗೂ ಲವ್ವಾಗಿದೆ’ ಚಿತ್ರದ ಟ್ರೇಲರ್ ಮತ್ತು ಮೂರು ಹಾಡುಗಳ ಅನಾವರಣ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಶ್ರೀ ಕಾಳಿಅಮ್ಮನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಕೆ.ನೀಲಕಂಠನ್ ಕಥೆ,ಚಿತ್ರಕಥೆ ಬರೆದು ಬಂಡವಾಳ ಹೂಡುವ ಜೊತೆಗೆ ಖತರ್ನಾಕ್ ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಬಿ.ಎಸ್.ರಾಜಶೇಖರ್ ಸಂಭಾಷಣೆ, ಎರಡು ಹಾಡಿಗೆ ಸಾಹಿತ್ಯ ಒದಗಿಸಿ ನಿರ್ದೇಶನ ಮಾಡಿರುತ್ತಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ನಾನು ಚಿತ್ರಕ್ಕೆ ಕೆಲಸ ಮಾಡಲು ಹೋಗಿದ್ದೆ. ನಿರ್ಮಾಪಕರು ಶಾಂತಿನಗರ ....
*ವಿನೂತನವಾಗಿ ಬಿಡುಗಡೆಯಾಯಿತು ಮಡೆನೂರ್ ಮನು ಅಭಿನಯದ "ಕುಲದಲ್ಲಿ ಕೀಳ್ಯಾವುದೊ" ಚಿತ್ರದ ಮೊದಲ ಹಾಡು. * .* . *"ನಮ್ ಪೈಕಿ ಒಬ್ಬ ಹೋಗ್ಬುಟ" ಅಂತ ಹಾಡು ಬರೆದ ಯೋಗರಾಜ್ ಭಟ್."* ಈಗಿನ ಜನತೆಗೆ ಬೇಕಾದಂತಹ ಹಾಡುಗಳನ್ನು ಬರೆಯುವ ಗೀತರಚನೆಕಾರರಲ್ಲಿ ಯೋಗರಾಜ್ ಭಟ್ ಮೊದಲಿಗರು ಎನ್ನಬಹುದು. ದಿನ ನಾವು ಆಡುವ ಮಾತುಗಳನ್ನೆ ಯೋಗರಾಜ್ ಭಟ್ ಅವರು ಹಾಡುಗಳ ರೂಪಕ್ಕೆ ತಂದು ಎಲ್ಲರೂ ಗುನುಗುವ ಹಾಗೆ ಮಾಡುತ್ತಾರೆ. ಪ್ರಸ್ತುತ ಯೋಗರಾಜ್ ಭಟ್ ಅವರು "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕುಲದಲ್ಲಿ ಕೀಳ್ಯಾವುದೊ" ಚಿತ್ರಕ್ಕೆ "ನಮ್ ಪೈಕಿ ಒಬ್ಬ ಹೋಗ್ಬುಟ" ಎಂಬ ಹಾಡನ್ನು ಬರೆದಿದ್ದಾರೆ. ಮನೋಮೂರ್ತಿ ಅವರು ಸಂಗೀತ ....