*ಎರಡು ಉಪಕಥೆಗಳ ನಡುವೆ ನಡೆಯುತ್ತದೆ "ರುದ್ರ ಗರುಡ ಪುರಾಣ" ಕಥೆ* . *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ಚಿತ್ರ* . ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "ರುದ್ರ ಗರುಡ ಪುರಾಣ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 914 ವಿಮಾನ 1955 ರಲ್ಲಿ ನ್ಯೂಯಾರ್ಕ್ ನಿಂದ ಮಿಯಾನ್ ಸಿಟಿಗೆ ....
ಶೀರ್ಷಿಕೆ ಹಳೇದು ಕಥೆ ಹೊಸತು
೮೦ರ ದಶಕದಲ್ಲಿ ಡಾ.ರಾಜ್ಕುಮಾರ್ ಅಭಿನಯದ ‘ಧ್ರುವತಾರೆ’ ಚಿತ್ರವು ಬಿಡುಗಡೆಗೊಂಡು ಹಿಟ್ ಆಗಿತ್ತು. ನಾಲ್ಕು ದಶಕದ ನಂತರ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ದಗೊಂಡಿದೆ. ಜಿ.ಪಿ.ಫಿಲಂಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಗಣೇಶ್ಕುಮಾರ್ ನಿರ್ಮಾಣ ಮಾಡಿದ್ದಾರೆ. ಮೈಸೂರು ಮೂಲದ ಪ್ರತೀಕ್ ನಿರ್ದೇಶನದ ಜೊತೆಗೆ ನಾಯಕನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಹಾಡುಗಳು ಹೊರಬಂದಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ಎನ್.ಸುರೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.
*ಆಗಸ್ಟ್ 30 ಕ್ಕೆ ಬರಲಿದ್ದಾನೆ "ಮೈ ಹೀರೋ"* . ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ "ಮೈ ಹೀರೋ" ಚಿತ್ರ ಇದೇ ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು "ಮೈ ಹೀರೋ" ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಅವಿನಾಶ್ ವಿಜಯ ಕುಮಾರ್, ನಟಿ ಅಂಕಿತ ಅಮರ್ ಹಾಗೂ ಸಂಗೀತ ನಿರ್ದೇಶಕ ಗಗನ್ ಭಡೇರಿಯಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಹಾಲಿವುಡ್ ಕಲಾವಿದರಾದ ಜಿಲಾಲಿ ರಜ್ ಕಲ್ಲಹ್, ಎರಿಕ್ ರಾಬರ್ಟ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಮೈ ಹೀರೋ ಚಿತ್ರದ ಪ್ರಮುಖ ....
*ನಟ ಶರಣ್ ಅವರಿಂದ ಅನಾವರಣವಾಯಿತು "ಲಂಗೋಟಿ ಮ್ಯಾನ್" ಚಿತ್ರದ ಟೀಸರ್* . ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ "ಲಂಗೋಟಿ ಮ್ಯಾನ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಹತ್ತು ವರ್ಷಗಳ ಹಿಂದೆ "ಮಿರ್ಚಿ ಮಂಡಕ್ಕಿ ಖಡಕ್ ಚಾಯ್" ಚಿತ್ರವನ್ನು ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕಿ ಸಂಜೋತ ಭಂಡಾರಿ, ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಾನ್ಸೆಪ್ಟ್ ಬಂತು. ಆ ಚಿತ್ರದ ಕಥೆ ....
ಸತ್ಯ ಘಟನೆಯ ದ ರೂಲರ್ಸ್ ೨೦೧೭ರಂದು ನಡೆದ ನೈಜ ಘಟನೆಯನ್ನು ‘ದ ರೂಲರ್ಸ್’ ಚಿತ್ರದಲ್ಲಿ ಬಳಸಲಾಗಿದೆ. ಎಂ.ಎನ್.ಮೂವೀಸ್ ಬ್ಯಾನರ್ ಅಡಿಯಲ್ಲಿ ಅಶ್ವಥ್ ಬಳಗೆರೆ ನಿರ್ಮಾಣ ಮಾಡಿದ್ದು, ಉದಯ್ ಭಾಸ್ಕರ್ ಛಾಯಾಗ್ರಹಣ, ಸಂಕಲನ ಜತೆಗೆ ಆಕ್ಷನ್ ಕಟ್ ಹೇಳಿದ್ದಾರೆ. ಸಂವಿಧಾನದ ಶಕ್ತಿ ಎಂದು ಅಡಿಬರಹದಲ್ಲಿ ಹೇಳಲಾಗಿದೆ. ಸಿನಿಮಾವು ಆಗಸ್ಟ್ ೩೦ರಂದು ತೆರೆ ಕಾಣುತ್ತಿರುವುದರಿಂದ ತಂಡವು ಮಾಹಿತಿ ಹಂಚಿಕೊಳ್ಳಲು ಮಾಧ್ಯಮದ ಮುಂದೆ ಹಾಜರಾಗಿತ್ತು. ನಿರ್ದೇಶಕರು ಮಾತನಾಡುತ್ತಾ, ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾದ ಸುದ್ದಿಗಳನ್ನು ಆರಿಸಿಕೊಂಡು ಸ್ಕ್ರೀನ್ಪ್ಲೇ ....
ಜಂಬೂ ಸರ್ಕಸ್ ಮನಸೋತೆ ಮನಸಾರೆ ಹಾಡು ಬಂತು ಕನ್ನಡದ ಚಲನಚಿತ್ರದ ಸುಪ್ರಸಿದ್ದ ನಿರ್ದೇಶಕ ಎಂ ಡಿ ಶ್ರೀಧರ್ ಇದುವರೆವಿಗೂ ನಿರ್ದೇಶನ ಮಾಡಿದ ಸಿನಿಮಗಳೆಲ್ಲ ಸೂಪರ್ ಹಿಟ್. ಈಗ ಅವರ ‘ಜಂಬೂ ಸರ್ಕಸ್’ ಕೂಡ ಆ ನಿಟ್ಟಿನಲ್ಲಿ ಸಾಗುವಂತಿದೆ. ಅದಕ್ಕೆ ಸಾಕ್ಷಿಯಾಗಿ ಒಂದು ಇಂಪಾದ ಹಾಡು ‘ಮನಸೂತೆ ಮನಸಾರೆ.. ಕವಿರಾಜ್ ಅವರ ಗೀತ ಸಾಹಿತ್ಯದಲ್ಲಿ ನಕುಲ ಅಭಯಂಕರ ಹಾಡಿರುವ ಈ ಹಾಡನ್ನು ವಾಸುಕಿ ವೈಭವ ಸಂಯೋಜನೆ ಮಾಡಿದ್ದಾರೆ. ಈ ಹಾಡನ್ನು ಬಿಡುಗಡೆ ಮಾಡುತ್ತಾ ಚಿತ್ರದ ಇನ್ನೆರಡು ಹಾಡು ‘ಗ್ರಹಚಾರ.. ಹಾಗೂ ಗಾಂಚಲಿ ಗಂಗವ್ವ.. ಸಹ ಮಾಧ್ಯಮದರ ಮುಂದೆ ಕಳೆದ ಶನಿವಾರ ಎಂ ಎಂ ಬಿ ಲೆಗಸಿ ಸಭಾಂಗಣದಲ್ಲಿ ಅನಾವರಣ ಮಾಡಲಾಯಿತು. ‘ಜಂಬೂ ಸರ್ಕಸ್’ ಚಿತ್ರಕ್ಕೆ ಕಥಾ ಹಂದರ ಮೊದಲು ಬಂದಿದ್ದು ಹಾಸ್ಯ ....
*ಮಂಸೋರೆ "ದೂರ ತೀರ ಯಾನ" ಕ್ಕೆ ಜೊತೆಯಾದ ವಿಜಯ್ ಕೃಷ್ಣ - ಪ್ರಿಯಾಂಕ ಕುಮಾರ್* . *ಡಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ಸೆಪ್ಟೆಂಬರ್ ನಿಂದ ನಿರಂತರ ಚಿತ್ರೀಕರಣ* . ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ ನಿರ್ಮಾಣದ ಹಾಗೂ "ಹರಿವು", " ನಾತಿಚರಾಮಿ", "ಆಕ್ಟ್ 1978", "19.20.21" ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸುತ್ತಿರುವ ಮುಂದಿನ ಚಿತ್ರ "ದೂರ ತೀರ ಯಾನ". ವಿಜಯ್ ಕೃಷ್ಣ ಹಾಗೂ ....
ಶಾಸಕ ಭೈರತಿ ಬಸವರಾಜ್ ಶಿಶ್ಯ ಈಗ ಕುರಿ ಕಾಯೋನು.. ಕಳೆದ ಎರಡು ದಶಕಗಳಿಂದಲೂ ಚಿತ್ರರಂಗದಲ್ಲಿ ಕಲಾವಿದ, ಸಹಾಯಕ ನಿರ್ದೇಶಕನಾಗಿ ತೊಡಗಿಕೊಂಡಿರುವ ಮಹೇಶ್(ಓಂ) ಈಗ ಸ್ವತಂತ್ರ ನಿರ್ದೇಶಕನಾಗುತ್ತಿದ್ದಾರೆ. ಜೊತೆಗೆ ಹೀರೋ ಕೂಡ ಆಗುತ್ತಿದ್ದಾರೆ. ಅವರ ನಟನೆ ಹಾಗೂ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಅನಿವಾಸಿ ಕನ್ನಡಿಗರಾದ ರಾಜೇಶ್, ಪ್ರಿಯಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಮಾರಂಭದಲ್ಲಿ ಶಾಸಕ ಭೈರತಿ ಬಸವರಾಜ್ ಅವರು ’ಕುರಿ ಕಾಯೋನು’ ಚಿತ್ರದ ಟೈಟಲ್ ಲಾಂಚ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಇದಕ್ಕೂ ಮೊದಲು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ....
*"ರಕ್ಕಸಪುರದೋಳ್" ರಾಜ್ ಬಿ ಶೆಟ್ಟಿ* . *ಸಾಹಸ ನಿರ್ದೇಶಕ ಕೆ.ರವಿವರ್ಮ ನಿರ್ಮಾಣದ ಹಾಗೂ ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ - ಪ್ರೇಮ್ ಸಾಥ್* . ಸಾಹಸ ನಿರ್ದೇಶಕರಾಗಿ ಭಾರತದಾದ್ಯಂತ ಜನಪ್ರಿಯರಾಗಿರುವ ಕನ್ನಡದ ಹೆಮ್ಮೆಯ ಸಾಹಸ ನಿರ್ದೇಶಕ ಡಾ||ಕೆ.ರವಿವರ್ಮ ಅವರ ಪ್ರಥಮ ನಿರ್ಮಾಣದ, ರವಿ ಸಾರಂಗ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಖ್ಯಾತರಾಗಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ "ರಕ್ಕಸಪುರದೋಳ್" ಚಿತ್ರದ ಮುಹೂರ್ತ ಸಮಾರಂಭ ನೆಟಕಲ್ಲಪ್ಪ ಸರ್ಕಲ್ ನಲ್ಲಿರುವ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದಂದು ಅದ್ದೂರಿಯಾಗಿ ನೆರವೇರಿತು. ನಟಿ ರಕ್ಷಿತ ಹಾಗೂ ನಿರ್ದೇಶಕ ಪ್ರೇಮ್ ಚಿತ್ರದ ಮೊದಲ ....
‘ಕ್ರೆಡಿಟ್ ಕುಮಾರ’ನಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಪತ್ರಕರ್ತ ಹರೀಶ್ ಆಕ್ಷನ್ ಪ್ರಿನ್ ಧ್ರುವ ಸರ್ಜಾ ಲಾಂಚ್ ಮಾಡಿದ ಹೊಸ ಹೀರೋ ಹರೀಶ್ ಸೀನಪ್ಪ ಕ್ರೆಡಿಟ್ ಕುಮಾರ ಮೂಲಕ ಸಿನಿಮಾರಂಗಕ್ಕೆ ಹೊಸ ಹೀರೋ ಎಂಟ್ರಿ 'ಕ್ರೆಡಿಟ್ ಕುಮಾರ’, ಸ್ಯಾಂಡಲ್ ವುಡ್ ನಲ್ಲಿ ಸೆಟ್ಟೇರಿರುವ ಹೊಸ ಸಿನಿಮಾ. ’ಬಾಂಡ್ ರವಿ’ ಖ್ಯಾತಿಯ ನಿರ್ದೇಶಕ ಪ್ರಜ್ವಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 2ನೇ ಸಿನಿಮಾ. ಈ ಸಿನಿಮಾ ಮೂಲಕ ನಾಯಕನಾಗಿ ಹರೀಶ್ ಸೀನಪ್ಪ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 10ವರ್ಷಕ್ಕೂ ಅಧಿಕ ಸಮಯ ಸಿನಿಮಾ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಹರೀಶ್ ಇದೀಗ ಬೆಳ್ಳಿ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಮೊದಲ ಹೆಜ್ಜೆಯಾಗಿ ....
ಮೃದುಲ ಮನಸ್ಸಿಗೆ ಗಾಢವಾಗಿ ತಟ್ಟುತ್ತದೆ - ದತ್ತಣ್ಣ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಲೈಫ್ ಆಫ್ ಮೃದುಲ’ ಚಿತ್ರವನ್ನು ಮದನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಮದನ್ಕುಮಾರ್.ಸಿ ನಾಯಕ ಮತು ನಿರ್ಮಾಪಕ. ಸಂಭಾಷಣೆ ಬರೆದಿರುವ ಯೋಗಿದೇವಗಂಗೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಇವರೊಂದಿಗೆ ತೇಜಸ್ವಿನಿ.ಆರ್.ಗೌಡ ಪ್ರೋತ್ಸಾಹವಿದೆ. ಹಲವು ನಿರ್ದೇಶಕರ ಬಳಿ ಕೆಲಸ ಕಲಿತಿರುವ ಕೋಲಾರದ ಚೇತನ್ ತ್ರಿವೇಣ್ ಸಿನಿಮಾಕ್ಕೆ ರಚನೆ,ಚಿತ್ರಕಥೆ, ಸಾಹಸ ಹಾಗೂ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ ತಿಂಗಳು ಹಾಡುಗಳು ಹೊರಬಂದಿದ್ದು, ಎಲ್ಲಾ ಕಡೆ ಸದ್ದು ಮಾಡುತ್ತಿದೆ. ಈಗ ಪ್ರಚಾರದ ಎರಡನೇ ....
*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು ಅನಿವಾಸಿ ಕನ್ನಡಿಗರ "ಹನಿ ಹನಿ" ಆಲ್ಬಂ ಸಾಂಗ್* . *ಇದು ಮೊಟ್ಟಮೊದಲ ಬಾರಿಗೆ ಯೂರೋಪ್ ನಲ್ಲಿ ಚಿತ್ರೀಕರಣವಾಗಿರುವ ಮೊದಲ ಕನ್ನಡದ ಆಲ್ಬಂ ಸಾಂಗ್ ಕೂಡ* . ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ "ಹನಿ ಹನಿ" ಮ್ಯೂಸಿಕಲ್ ವಿಡಿಯೋ ಆಲ್ಬಂ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಗೌರವ ಕಾರ್ಯದರ್ಶಿ ಭಾ.ಮ.ಗಿರೀಶ್ ಹಾಗೂ ಹಿರಿಯ ನಿರ್ಮಾಪಕರಾದ ಎಸ್ ಎ ಚಿನ್ನೇಗೌಡ ....
ಹೊಸ ಚಿತ್ರಕ್ಕೆ ಸಹಿ ಹಾಕಿದ ಗುರುನಂದನ್
‘ಫಸ್ಟ್ರ್ಯಾಂಕ್ ರಾಜು’ ಖ್ಯಾತಿಯ ಗುರುನಂದನ್ ಹೆಸರಿಡದ ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಕಳೆದವಾರ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಮೊದಲ ದೃಶ್ಯಕ್ಕೆ ಅಶ್ವಿನಿ ಪುನೀತ್ರಾಜ್ಕುಮಾರ್ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಶೇಷ ಅಧಿಕಾರಿ ವೆಂಕಟೇಶ್ ಮತ್ತು ಗೋಲ್ಡ್ ಫಿಂಚ್ ಹೋಟೆಲ್ ಮಾಲೀಕ ಪ್ರಕಾಶ್ ಶೆಟ್ಟಿ ಉಪಸ್ತಿತರಿದ್ದರು. ಮಂಡಿಮನೆ ಟಾಕೀಸ್ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಸುಮಂತ್ಗೌಡ್ರು ನಿರ್ದೇಶನ ಮಾಡುತ್ತಿದ್ದಾರೆ.
ಮದ್ದಾನೆ ಇದು ಚಿತ್ರದ ಹೆಸರು
‘ಮದ್ದಾನೆ’ ಚಿತ್ರದ ಮುಹೂರ್ತ ಸಮಾರಂಭ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಪತಿ ನಾಯಕನಾಗಿ ನಟಿಸುತ್ತಿರುವ ಕಾರಣ ಪ್ಯಾಂಥರ್ಸ್ ಕ್ರಿಯೇಟೀವ್ ಸಿನಿಮಾಸ್ ಲಾಂಛನದಲ್ಲಿ ರಂಜನ.ಎಂ.ಕುಮಾವತ್ ನಿರ್ಮಾಣ ಮಾಡುತ್ತಿದ್ದು, ಸತೀಶ್.ಎಸ್.ಚೊಚ್ಚಲ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ರಂಗಭೂಮಿ ಕಲಾವಿದ. ‘ರಾಣಾ’ ‘ವಿಷ್ಣುಪ್ರಿಯ’ ಚಿತ್ರಗಳಲ್ಲಿ ನಟಿಸಿದ ಅನುಭವ ಹೊಂದಿರುವ ನಿಹಾಲ್ ರಾಜ್ ಹೀರೋ ಆಗಿ ಬಡ್ತಿ ಹೊಂದಿದ್ದಾರೆ.
ಅಪ್ಪ ಮಗಳ ಬೆಸುಗೆ ಹಾಗೂ ಮೆಡಿಕಲ್ ಮಾಫಿಯಾ
ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಸಿ’ ಚಿತ್ರದ ಟ್ರೇಲರ್ ಹಾಗೂ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅನೇಕ ಚಿತ್ರಗಳಲ್ಲಿ ಕೆಲಸ ಮಾಡಿದ ಅನುಭವ ಇರುವ ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನ ಜತೆಗೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಮಗ ನಾಯಕ ಆಗಿರುವುದರಿಂದ ಸುಬ್ರಮಣಿ ನಿರ್ಮಾಣ ಮಾಡುತ್ತಿದ್ದಾರೆ. ನಟ ರಾಜವರ್ಧನ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ.ಕೃಷ್ಣೇಗೌಡ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.
ಲಕ್ಷಿಯಾಗಿ ಪದ್ಮಜರಾವ್
‘ಲಕ್ಷೀ’ ಎಂಬ ಕಿರುಚಿತ್ರಕ್ಕೆ ರಚನೆ,ಚಿತ್ರಕಥೆ, ಸಂಭಾಷಣೆ, ಸಂಕಲನ, ನಿರ್ದೇಶನ ಜೊತೆಗೆ ಪುರೋಹಿತ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಮೊನ್ನೆಯಷ್ಟೇ ಚಿತ್ರದ ಪ್ರದರ್ಶನ ನಡೆಯಿತು. ಇದರಲ್ಲಿ ಅಭಿಜಿತ್, ಒಬ್ಬ ಮಗ ತನ್ನ ತಾಯಿಯ ಕನಸನ್ನು ನನಸು ಮಾಡುವ ಹಾಗೂ ಪೂರ್ವಜರ ಸಂಸ್ಕ್ರತಿ, ಆಚಾರ ವಿಚಾರಗಳನ್ನು ತೆರೆದಿಡುವ ಪ್ರಯತ್ನ ಮಾಡಿದ್ದಾರೆ. ಅಂದಹಾಗೆ ಇದು ನಿರ್ದೇಶಕರ ತಾಯಿ ಲಕ್ಷೀಕಂಬದ ನೈಜ ಘಟನೆ ಎಂಬುದು ವಿಶೇಷ. ಅವರ ಪ್ರತಿರೂಪವಾಗಿ ಹಿರಿಯ ನಟಿ ಪದ್ಮಜರಾವ್ ನಟಿಸಿದ್ದಾರೆ.
ಕಡಲ ತಡಿಯಲ್ಲಿ `ಕಲ್ಜಿಗ’ ಟ್ರೈಲರ್ ಅನಾವರಣ! ಸುಮನ್ ಸುವರ್ಣ ನಿರ್ದೇಶನದ `ಕಲ್ಜಿಗ’ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ಕಡಲ ಕಿನಾರೆಯಲ್ಲಿ ಘಟಿಸುವ ಬೆರಗಿನ ಕಥೆ ಮತ್ತು ಆ ಭಾಗದ ಕಲಾವಿದರೇ ತುಂಬಿರುವ ಈ ಚಿತ್ರದ ಬಗ್ಗೆ ಪ್ರೇಕ್ಷಕರೆಲ್ಲ ಕಾತರರರಾಗಿದ್ದಾರೆ. ಇದೀಗ ಒಂದು ಅರ್ಥವತ್ತಾದ ಕಾರ್ಯಕ್ರಮದ ಮೂಲಕ ಕಲ್ಜಿಗದ ಟ್ರೈಲರ್ ಅನಾವರಣಗೊಂಡಿದೆ. ಎ೨ ಫಿಲಂಸ್ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಗೊಂಡಿರೋ ಈ ಟ್ರೈಲರ್ ಕಂಡವರೆಲ್ಲ ಅಕ್ಷರಶಃ ಥ್ರಿಲ್ ಆಗಿದ್ದಾರೆ. ಎಲ್ಲ ದಿಕ್ಕುಗಳಿಂದಲೂ ಭರಪೂರ ಪ್ರತಿಕ್ರಿಯೆ ಹರಿದು ಬರಲಾರಂಭಿಸಿದೆ. ಇದರೊಂದಿಗೆ ಕಲ್ಜಿಗ ಕನ್ನಡದ ಬಹುನಿರೀಕ್ಷಿತ ಚಿತ್ರವಾಗಿ ದಾಖಲಾಗಿದೆ. ಹಿಮಾನಿ ಫಿಲಂಸ್ ಬ್ಯಾನರಿನಲ್ಲಿ ....
ಕಂಠೀರವ ಸ್ಟುಡಿಯೋದಲ್ಲಿ ಸಂಜು ವೆಡ್ಸ್ ಗೀತಾ ಚಿತ್ರಕ್ಕೆ ಕುಂಬಳಕಾಯಿ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್ ಬಿಡಿಸುತ್ತಿರುವ ದೃಶ್ಯದೊಂದಿಗೆ ಮಾಧ್ಯಮಗಳ ಸಮ್ಮುಖದಲ್ಲಿ ಕುಂಬಳಕಾಯಿ ಒಡೆಯುವ ಶಾಸ್ತ್ರ ಮಾಡಲಾಯಿತು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ....
ಆಗಸ್ಟ್ 30ಕ್ಕೆ ಬರುತ್ತಿರುವ "ಟೇಕ್ವಾಂಡೋ ಗರ್ಲ್ " ಚಿತ್ರದ ಟೀಸರ್ ಬಿಡುಗಡೆ ಮಾಡಿದ ಇಂದ್ರಜಿತ್ ಲಂಕೇಶ್ . ಇವತ್ತಿನ ಸಮಾಜದಲ್ಲಿ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ , ಅತ್ಯಾಚಾರದ ನಿರಂತರವಾಗಿ ನಡೆಯುತ್ತಲೇ ಇದೆ ಇದಕೆಲ್ಲ ಕಡಿವಾಣ ಬಹಳ ಅಗತ್ಯ. ಹೆಣ್ಣು ಮಕ್ಕಳು ಸ್ಟ್ರಾಂಗ್ ಆಗಬೇಕು. ಕರಾಟೆ , ಸೆಲ್ಫ್ ಡಿಫೆನ್ಸ್ ಮಾಡಿಕೊಳ್ಳುವಂತಹ ಟೇಕ್ವಾಂಡೋ ಸಮರ ಕಲೆಯನ್ನ ಮಕ್ಕಳು ಕಲಿಯಬೇಕಾಗಿರುವುದು ಅನಿವಾರ್ಯವಾಗಿದೆ. ಇದರಿಂದ ಹೆಣ್ಣು ಮಕ್ಕಳು ತಮ್ಮನ ತಾವು ರಕ್ಷಿಸಿಕೊಳ್ಳುವುದಕ್ಕೆ ಒಂದು ದಾರಿ ಆಗುತ್ತದೆ. ಅಂತದ್ದೇ ಒಂದು ಸಮರಭ್ಯಾಸ ಕಲೆಯ ಚಿತ್ರವಾದ "ಟೇಕ್ವಾಂಡೋ ಗರ್ಲ್" ಎಂಬ ಚಿತ್ರ ಇದೆ ಆಗಸ್ಟ್ 30ರಂದು ರಾಜ್ಯಾದ್ಯಂತ ....
"ಓ ಏ ಲಡ್ಕಿ" ಸ್ಟೈಲಿಷ್ ಆಲ್ಬಮ್ ಸಾಂಗ್ ನಟಿ ರಾಗಿಣಿ ದ್ವಿವೇದಿ ಬಿಡುಗಡೆ ಇತ್ತೀಚಿನ ದಿನಗಳಲ್ಲಿ ಆಲ್ಬಂ ಸಾಂಗ್ ಹೆಚ್ಚು ಜನಪ್ರಿಯವಾಗುತ್ತಿದೆ. ಅಧೀರ ಸಂತು ಅವರು ಬಾಲಿವುಡ್ ಸ್ಟೈಲ್ ನಲ್ಲಿ ಕನ್ನಡ ಆಲ್ಬಂ ಸಾಂಗ್ ಮಾಡಿದ್ದಾರೆ. ಅದರ ಹೆಸರು ಕೂಡ ವಿಭಿನ್ನವಾಗಿದೆ. ತುಂಬಾ ಸ್ಟೈಲಿಶ್ ಆಗಿ ಮೂಡಿಬಂದಿರುವ ’ಈ ಏ ಲಡ್ಕಿ’ ಎಂಬ ಕ್ಯಾಚಿ ಟೈಟಲ್ ಹೊಂದಿರೋ ಈ ಹಾಡನ್ನು ನಟಿ ರಾಗಿಣಿ ದ್ವಿವೇದಿ ಅವರು ಬಿಡುಗಡೆ ಮಾಡಿದರು. ವಿಶೇಷವಾಗಿ ಈ ಹಾಡಲ್ಲಿ ಉಗ್ರಂ ರವಿ ಖಳನಾಯಕನಾಗಿ ನಟಿಸಿದ್ದಾರೆ. ಎನ್ನಾರೈ ಯುವತಿಯಾಗಿ ಅಮೃತ, ಡಿಲವರಿ ಬಾಯ್ ಆಗಿ ಸಮೀರ್ ನಗರದ್ ಅಭಿನಯಿಸಿದ್ದಾರೆ. ಈ ಹಾಡಿನ ಜೊತೆಗೆ ಇದರ ಲಿರಿಕಲ್ ವಿಡಿಯೋ ಹಾಗೂ ರೀಮಿಕ್ಸ್ ವರ್ಷನ್ ....