Nassab.Film News

Sunday, June 16, 2024

  *ಕುತೂಹಲ ಮೂಡಿಸಿದೆ "ನಸಾಬ್" ಚಿತ್ರದ ಟ್ರೇಲರ್* .‌    *ಅಪ್ಪನ ಕಥೆಗೆ ಮಗನೇ ನಾಯಕ ಹಾಗೂ ನಿರ್ದೇಶಕ* .   ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರಗಳು ಹೆಚ್ಚು ಬರುತ್ತಿದೆ. ಅಂತಹುದೇ ಉತ್ತಮ‌ ಕಂಟೆಂಟ್ ಹೊಂದಿರುವ "ನಸಾಬ್" ಕನ್ನಡ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂಜಾರ ಶಕ್ತಿಪೀಠದ ಶ್ರೀ ಕುಮಾರ ಮಹಾರಾಜರು, ಮಾಜಿ ಉಪ ಸಭಾಪತಿ ರುದ್ರಪ್ಪ ಎಂ ಲಮ್ಮಾಣಿ, ಐ ಎ ಎಸ್ ಅಧಿಕಾರಿ ಜಗದೀಶ್ ಜಿ, ಮಾಜಿ ಶಾಸಕ ಪಿ.ರಾಜೀವ್, ಡಾ||ಶೋಭ ಜಿ , ಶೋಭಾ ಟಿ.ಆರ್ , ಹರೀಶ್ ಮುಂತಾದವರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಹಾಗೂ ....

134

Read More...

V Cinemas.News

Friday, June 14, 2024

  *ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ ಅವರಿಂದ "ವಿ‌ ಸಿನಿಮಾಸ್" ಅನಾವರಣ* ..    *ರಾಮಮೂರ್ತಿನಗರದಲ್ಲಿ ಆರಂಭವಾಯಿತು ಸುಸಜ್ಜಿತ ಮಲ್ಟಿಪ್ಲೆಕ್ಸ್* .   ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ.  ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ "ವಿ ಸಿನಿಮಾಸ್" ಎಂಬ ನಾಲ್ಕು ಆಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು.‌ ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೇಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ....

139

Read More...

Abhinava Kempegowda.News

Thursday, June 13, 2024

  *ಅಭಿನವ ಕೆಂಪೇಗೌಡ ಹೆಚ್ ಎಂ ಕೃಷ್ಣಮೂರ್ತಿ(ಜೇಡ್ರಳ್ಳಿ ಕೃಷ್ಣಪ್ಪ) ಅವರು ನಟಿಸಿ, ನಿರ್ಮಿಸಿರುವ "ನಾಡಸಿಂಹ ಕೆಂಪೇಗೌಡ" ಹಾಡು ಲೋಕಾರ್ಪಣೆ* .   ತಮ್ಮ‌ ಸಾಮಾಜಿಕ ಕಾರ್ಯಗಳ‌ ಮೂಲಕ ಜನರ‌ ಮನ‌ ಗೆದ್ದಿರುವ ಹೆಚ್ ಎಂ ಕೃಷ್ಣಮೂರ್ತಿ ಅವರು ನಿರ್ಮಿಸಿ ಹಾಗು ಕೆಂಪೇಗೌಡರ ಪಾತ್ರದಲ್ಲೂ ಅಭಿನಯಿಸಿರುವ ನಾಡಪ್ರಭು ಶ್ರೀಕೆಂಪೇಗೌಡರ ಕುರಿತಾದ "ನಾಡಸಿಂಹ ಕೆಂಪೇಗೌಡ" ಎಂಬ ಹಾಡಿನ ಲೋಕಾರ್ಪಣೆ ಇತ್ತೀಚಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅದ್ದೂರಿಯಾಗಿ ನೆರವೇರಿತು. ಜೆ.ಕೆ ಶರ್ಮ ಗುರೂಜಿ, ನಟ ವಸಿಷ್ಠ ಸಿಂಹ, ಹಿರಿಯ ನಟ ಅಶೋಕ್, ನಿರ್ದೇಶಕ ಟಿ.ಎಸ್. ನಾಗಾಭರಣ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಟರಾದ ಧರ್ಮ, ತಬಲ ನಾಣಿ, ನೀನಾಸಂ ....

131

Read More...

Raakha.Film News

Wednesday, June 12, 2024

  "ರಾಖಾ" ಚಿತ್ರಕ್ಕೆ ಸಚಿವ ತಂಗಡಗಿ ಚಾಲನೆ  ಕುಟುಂಬದ ಗೌರವ ಉಳಿಸಿದ ಮಗನ ಕಥೆ       ಕನ್ನಡ ಚಿತ್ರರಂಗದ ಹೆಸರಾಂತ ಸಾಹಿತಿ, ಸಂಭಾಷಣೆಗಾರ ಮಳವಳ್ಳಿ ಸಾಯಿಕೃಷ್ಣ ಬಹಳ‌ ದಿನಗಳ ನಂತರ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ಯುವನಟ ಕ್ರಾಂತಿ ಕಥೆ ಬರೆದು, ನಾಯಕನಾಗಿ ಅಭಿನಯಿಸುತ್ತಿರುವ ರಾಖಾ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶಿವಾ ಮೂವೀಸ್ ಮೂಲಕ ಡಾ.ಕೆ.ಬಿ. ನಾಗೂರ್(ಬಾಬು) ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ರಾಖಾ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ‌      ರಾಖಾ ಚಿತ್ರದ ಮುಹೂರ್ತ ದೃಶ್ಯಕ್ಕೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಕ್ಲಾಪ್ ಮಾಡಿದರೆ, ....

332

Read More...

Teddy Bear.Film News

Tuesday, June 18, 2024

  ಟೆಡ್ಡಿ ಬೇರ್ ಮಧ್ಯಮ ಭಾಗದ ಕಥನ          ’ಟೆಡ್ಡಿ ಬೇರ್’ ಚಿತ್ರದ ಪ್ರೊಮೋ, ಟ್ರೇಲರ್ ಹಾಗೂ ಕ್ಲೈಮಾಕ್ಸ್‌ದಲ್ಲಿ ಬರುವ ಗೀತೆ ಅನಾವರಣ ಕಾರ್ಯಕ್ರಮವು ಕಿಕ್ಕಿರಿದ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಆದ್ಯಲಕ್ಷೀ ಪ್ರೊಡಕ್ಷನ್ ಅಡಿಯಲ್ಲಿ ಜ್ಯೋತಿತಾರಕೇಶ್, ಭರತ್ ಮತ್ತು ನವೀನ್ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಟಾಲಿವುಡ್‌ನ ಪುರಿಜಗನ್ನಾಥ್ ಸಹಾಯಕರಾಗಿದ್ದ ಲೋಕೇಶ್.ಬಿ ಸಿನಿಮಾಕ್ಕೆ ಬರವಣಿಗೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.          ಈ ಸಂದರ್ಭದಲ್ಲಿ  ಮಾತನಾಡಿದ ನಿರ್ದೇಶಕರು ಇದು ನನ್ನ ಮೊದಲ ಸಿನಿಮಾ. ನಂತರ ’ಸುಡೂಕು’ ವಿಧುರ’ ’ವಿಕ್ರಮಾರ್ಕ’ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದೇನೆ. ....

177

Read More...

Sambavami Yuge Yuge.News

Tuesday, June 18, 2024

  *ಈ ವಾರ ತೆರೆಗೆ ‘ಸಂಭವಾಮಿ ಯುಗೇ ಯುಗೇ* ’   ರಾಜಲಕ್ಷ್ಮೀ ಎಂಟರ್‌ ಟೈನ್ಮೆಂಟ್ ಸಂಸ್ಥೆಯಡಿ ಶ್ರೀಮತಿ ಪ್ರತಿಭಾ ನಿರ್ಮಿಸಿರುವ, ಚೇತನ್‍ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ, ಬರೆದು ನಿರ್ದೇಶನ ಮಾಡಿರುವ ‘ಸಂಭವಾಮಿ ಯುಗೇ ಯುಗೇ’ ಚಿತ್ರವು ಇದೇ ಶುಕ್ರವಾರ (ಜೂನ್‍ 21) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಚೇತನ್‍ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದಕ್ಕೂ ಮುನ್ನ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದ ಚೇತನ್‍ ಅವರಿಗೆ ಇದು ಮೊದಲ ಸ್ವತಂತ್ರ ಪ್ರಯತ್ನ.   ಇದೊಂದು ಗ್ರಾಮೀಣ ಸೊಗಡಿನ ಕಮರ್ಷಿಯಲ್‍ ಥ್ರಿಲ್ಲರ್ ಚಿತ್ರವಾಗಿದ್ದು, ಮಂಡ್ಯ, ಚೆನ್ನಪಟ್ಟಣ, ರಾಮನಗರ ಮುಂತಾದ ಕಡೆ ....

149

Read More...

Chilli Chicken.News

Tuesday, June 18, 2024

  ಈ ವಾರ ತೆರೆಗೆ "ಚಿಲ್ಲಿ ಚಿಕನ್”          ಮೆಟನೋಯ್  ಸ್ಟುಡಿಯೋಸ್ ಪ್ರೊಡಕ್ಷನ್ ಅಡಿಯಲ್ಲಿ ದೀಪ್ ಭೀಮಜಿಯಾನಿ ಮತ್ತು ಸುಧಾ ನಂಬಿಯಾರ್ ಅವರ  ನಿರ್ಮಾಣದ, ಪ್ರತೀಕ್ ಪ್ರಜೋಶ್ ಅವರ ನಿರ್ದೇಶನದ, ಥ್ರಿಲ್ಲರ್  ಕಥಾಹಂದರ ಒಳಗೊಂಡ ಚಿತ್ರ ’ಚಿಲ್ಲಿ ಚಿಕನ್’ ಈ ವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ.    ಬೆಂಗಳೂರಲ್ಲಿ ನಡೆದ ನೈಜ ಘಟನೆ ಆಧಾರಿತ ಚಿತ್ರ ಇದಾಗಿದ್ದು,  ಉತ್ತರ ಭಾರತದಿಂದ ಬೆಂಗಳೂರಿಗೆ ಬಂದ ಐವರು ಹುಡುಗರು  ಚೈನೀಸ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತ, ಸ್ವಂತ ಹೋಟೆಲ್  ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ಹೋಟೆಲ್ ಮಾಡ್ತಾರಾ, ....

161

Read More...

Vidyarthi Vidyarthiniyare.News

Saturday, June 15, 2024

  ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!    ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ  ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ....

170

Read More...

Kotee.Movie News

Monday, June 10, 2024

  ಡಾಲಿ ಧನಂಜಯ್ ವೃತ್ತಿಜೀವನದ ಬಹುಮುಖ್ಯ ಸಿನಿಮಾ ’ಕೋಟಿ’   ಡಾಲಿ, ನಟರಾಕ್ಷಸ ಎಂದೇ ಕನ್ನಡ ಜನತೆಯ ಪ್ರೀತಿಗೆ ಪಾತ್ರರಾಗಿರುವ ಧನಂಜಯ ಅವರ ಹೊಚ್ಚ ಹೊಸ ಸಿನಿಮಾ ’ಕೋಟಿ’ ಬಿಡುಗಡೆಗೆ ತಯಾರಾಗಿದೆ. ಹಲವಾರು ಕಾರಣಗಳಿಗೆ ಈ ಸಿನಿಮಾ ಧನಂಜಯ ಅವರ ವೃತ್ತಿ ಜೀವನದಲ್ಲೇ ಬಹುಮುಖ್ಯ ಸಿನಿಮಾವಾಗಲಿದೆ.   ಕಳೆದ ವರ್ಷ ಮೇ ತಿಂಗಳಿನಲ್ಲಿ ಸೆಟ್ಟೇರಿದ್ದ ’ಕೋಟಿ’ ಈಗಾಗಲೇ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲೇ ಎಲ್ಲ ಕೆಲಸಗಳ ಮುಗಿಸಿ ಜೂನ್ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಧನಂಜಯ್ ಪೂರ್ಣಪ್ರಮಾಣದ ಹೀರೋ ಆದಮೇಲೆ ಮಾಡಿದ ದೊಡ್ಡ ಬಜೆಟ್ಟಿನ ಸಿನಿಮಾ ಇದಾಗಿದೆ. ’ಜಿಯೋ ಸ್ಟುಡಿಯೋಸ್’ನಂತಹ ದೊಡ್ಡ ಸಂಸ್ಥೆಯ ಮೊದಲ ಕನ್ನಡ ಸಿನಿಮಾ ಇದಾಗಿದ್ದು ಅವರ ನಾಯಕನಟನ ....

138

Read More...

Cocaine.Film News

Monday, June 10, 2024

  ಕೌರವ ವೆಂಕಟೇಶ್ ನಿರ್ದೇಶನದ ಕೊಕೇನ್           ಬಿ.ಸಿ.ಪಾಟೀಲ್ ನಿರ್ಮಾಣ, ಅಭಿನಯದ ’ಕೌರವ’ ಚಿತ್ರದ ಮೂಲಕ ಸಾಹಸ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ, ಬೆಂಗಳೂರಿನ ಕೌರವ ವೆಂಕಟೇಶ್  ಇಲ್ಲಿಯವರೆಗೂ 1600ಕ್ಕೂ ಹೆಚ್ಚು ಚಿತ್ರಗಳಿಗೆ ಸಾಹಸ ಸಂಯೋಜಕರಾಗಿ,  ಇಂದು  ದಕ್ಷಿಣ ಭಾರತದ ಹೆಸರಾಂತ ಫೈಟ್ ಮಾಸ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಇದೆಲ್ಲಾ ಅನುಭವದಿಂದ ಈಗ ಹೊಸ ಪ್ರಯತ್ನ ಎನ್ನುವಂತೆ ’ಕೊಕೇನ್’ ಸಿನಿಮಾಕ್ಕೆ ಸಾಹಸ ಮತ್ತು ಆಕ್ಷನ್ ಕಟ್ ಹೇಳುತ್ತಿದ್ದಾರೆ. ದ ಡಫಿನಿಷನ್ ಆಫ್ ಪ್ಯಾಟ್ರಿಯಾಟಿಸಮ್ ಎಂಬ ಅಡಿಬರಹವಿದೆ. ಅಯೋಧ್ಯರಾಮ್ ಪ್ರೊಡಕ್ಷನ್ಸ್ ಅಡಿಯಲ್ಲಿ ಪುನೀತ್ ನಿರ್ಮಾಣ ಮಾಡುತ್ತಿದ್ದಾರೆ.        ನಿರ್ದೇಶಕರ ....

166

Read More...

Signal Man 1971.News

Saturday, June 08, 2024

  *ಆಗಸ್ಟ್ ನಲ್ಲಿ ತೆರೆಗೆ ಬರಲಿದೆ  "ಸಿಗ್ನಲ್ ಮ್ಯಾನ್ 1971" ಚಿತ್ರ* .    ಹಿಂದೂಸ್ಥಾನ್ ಮುಕ್ತ ಮೀಡಿಯಾ ಎಂಟರ್ ಟೈನರ್ ಲಾಂಛನದಲ್ಲಿ ಗಣೇಶ್ ಪ್ರಭು ಬಿ.ವಿ ಅವರು ನಿರ್ಮಿಸಿರುವ, ಕೆ.ಶಿವರುದ್ರಯ್ಯ ನಿರ್ದೇಶನದ ಹಾಗೂ ಪ್ರಕಾಶ್ ಬೆಳವಾಡಿ, ರಾಜೇಶ್ ನಟರಂಗ, ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ "ಸಿಗ್ನಲ್ ಮ್ಯಾನ್ 1971" ಚಿತ್ರ ಆಗಸ್ಟ್ ನಲ್ಲಿ  ಬಿಡುಗಡೆಯಾಗಲಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   1971ರಲ್ಲಿ ನಡೆದ ಇಂಡೋ - ಪಾಕ್ ಕದನದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಅಳವಡಿಸಿಕೊಡಲಾಗಿದೆ. ಜೊತೆಗೆ ಯಾರು ಇಳಿಯದ, ಹತ್ತದ ರೈಲ್ವೆ ನಿಲ್ದಾಣದಲ್ಲಿ ಇಪ್ಪತ್ತು ವರ್ಷಗಳ ಕಾಲ ಕಾರ್ಯ ನಿರ್ವಹಿಸುವ ....

387

Read More...

Kotee.Film News

Sunday, June 09, 2024

  ಕೋಟಿಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿ     ಬರುವ ಶುಕ್ರವಾರ ಬಿಡುಗಡೆಗೆ ಸಿದ್ಧವಿರುವ ’ಕೋಟಿ’ ಸಿನಿಮಾ ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಸದ್ದು ಮಾಡುತ್ತಿದೆ. ಡಾಲಿ ಧನಂಜಯ್ ’ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ.   'ಕೋಟಿ’ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ’ಕೋಟಿ’ಯಲ್ಲಿ ಧನಂಜಯ್‌‌ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ. ಇತ್ತಿಚೆಗೆ ನಡೆದ ಚಿತ್ರದ ....

186

Read More...

Chilli Chicken.News

Saturday, June 08, 2024

  ಚಿಲ್ಲೀ ಚಿಕನ್ ಟ್ರೇಲರ್ ಬಿಡುಗಡೆ   ರೆಸ್ಟೋರೆಂಟ್ ನಲ್ಲಿ ಹುಟ್ಟಿದ ಕಥೆ      ಹೋಟೆಲ್ ಕೆಲಸಮಾಡುವ  ಐವರು ಹುಡುಗರ ಸುತ್ತ ನಡೆಯುವ ಕಥೆ ಇಟ್ಟುಕೊಂಡು ಪ್ರತೀಕ್ ಪ್ರಜೋಷ್ ಅವರು ನಿರ್ದೇಶಿಸಿರುವ ಚಿತ್ರ ಚಿಲ್ಲಿ ಚಿಕನ್. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು.    ಬೆಂಗಳೂರಿನ ಹೋಟೆಲೊಂದರಲ್ಲಿ ದುಡಿಯುತ್ತಾ ಚೈನೀಸ್ ರೆಸ್ಟೋರೆಂಟ್ ಒಂದನ್ನು ಪ್ರಾರಂಭಿಸಬೇಕೆಂಬ  ಕನಸು ಕಾಣುವ  ಈ ಹುಡುಗರ ಕನಸಿಗೆ ಏನೆಲ್ಲಾ ಅಡೆ ತಡೆಗಳು ಬರುತ್ತವೆ ಎಂಬ ಒನ್ ಲೈನ್ ಕಥೆ ಇಟ್ಟುಕೊಂಡು ’ಚಿಲ್ಲಿ ಚಿಕನ್’ ಸಿನಿಮಾ ಮಾಡಲಾಗಿದೆ. ಇದು ಬೆಂಗಳೂರಿನಲ್ಲಿ ನಡೆದ ನೈಜ ಘಟಕ ಆಧಾರಿತ ಸಿನಿಮಾ ಎಂಬುದು ವಿಶೇಷ. ಕಳೆದ ತಿಂಗಳು ಟೀಸರ್ ....

172

Read More...

Taj.Film Teaser.News

Saturday, June 08, 2024

      *ನೈಜ ಘಟನೆಯಾಧಾರಿತ ‘ತಾಜ್’ ತೆರೆಗೆ ಬರಲು ಸಿದ್ದ*   *ಟೀಸರ್ ಮತ್ತು ಹಾಡಿನಲ್ಲಿ ಗಮನ ಸೆಳೆದ ಹೊಸಬರ ‘ತಾಜ್’*   *ಹಿಂದೂ-ಮುಸ್ಲಿಂ ಪ್ರೇಮಕಥೆಗೆ ಸಿನಿಮಾ ರೂಪ*   ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ತಾಜ್’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ‘ತಾಜ್’ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್ ಮುಂದಿದೆ. ಇದೇ ವೇಳೆ ‘ತಾಜ್’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೀಗ ಸಿನಿಮಾದ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ.   ‘ಶ್ರೀಪಾವನಿ ಲಕ್ಷ್ಮೀ ಕಂಬೈನ್ಸ್’ ಲಾಂಛನದಲ್ಲಿ ಶ್ರೀಮತಿ ಲಕ್ಷ್ಮೀ ಷಣ್ಮುಖ ನಿರ್ಮಾಣ ಮಾಡಿರುವ ....

277

Read More...

Kotee.Film News

Thursday, June 06, 2024

  ಕೋಟಿಯ ಮೊದಲ‌ ಟಿಕೇಟ್ ’ಕಿಚ್ಚ’ನಿಗೆ     ಡಾಲಿ‌ ಧನಂಜಯ ಅಭಿನಯದ ’ಕೋಟಿ’ ಸಿನಿಮಾದ ಮೊದಲ‌ ಟಿಕೇಟನ್ನು ಚಿತ್ರತಂಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ನೀಡಿದೆ. ಅದ್ದೂರಿಯಾಗಿ ನಡೆದ ಕೋಟಿ ಸಿನಿಮಾದ ವಿಶೇಷ ಪ್ರೀರಿಲೀಸ್ ಟೀವಿ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿ ಸುಮಾರು ಒಂದು ಗಂಟೆಗಳಿಗೂ ಅಧಿಕ ಸಮಯ ವೇದಿಕೆಯ ಮೇಲಿದ್ದು‌ ನೆರೆದಿದ್ದ ಜನರ ರಂಜಿಸಿದರು. ಇದೇ ವೇದಿಕೆಯಲ್ಲಿ ಚಿತ್ರತಂಡ ಅಭಿನಯ ಚಕ್ರವರ್ತಿ ಸುದೀಪ್ ಅವರಿಗೆ ಕೋಟಿಯ ಮೊದಲ ಟಿಕೇಟ್ ನೀಡಿತು. ಚಿತ್ರದ ಹೊಸ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ ಕಿಚ್ಚ ನಾಯಕನಟ ಧನಂಜಯ್ ಮತ್ತು ನಿರ್ದೇಶಕ  ಪರಮ್ ಅವರಿಗೆ ಯಶಸ್ಸು‌ ಸಿಗಲಿ ಎಂದು ಶುಭ ಕೋರಿದರು.   ಈಗಾಗಲೇ ’ಕೋಟಿ’ ....

158

Read More...

Ramesh Suresh.News

Thursday, June 06, 2024

  *ಮನೋರಂಜನೆಯ ಮಹಾಪೂರವನ್ನೇ ಹರಿಸಲು ಬರುತ್ತಿದ್ದಾರೆ "ರಮೇಶ್ ಸುರೇಶ್"* .              ಆರ್ ಕೆ ಟಾಕೀಸ್ ಲಾಂಛನದಲ್ಲಿ ಪಿ.ಕೃಷ್ಣ ಹಾಗೂ ಬಿ.ಶಂಕರ್ ಅವರು ನಿರ್ಮಾಣ ಮಾಡಿರುವ, ನಾಗರಾಜ್ ಮಲ್ಲಿಗೇನಹಳ್ಳಿ ಹಾಗೂ ರಘುರಾಜ್ ಗೌಡ ನಿರ್ದೇಶನದ ಹಾಗೂ ಗುಬ್ಬಿ ವೀರಣ್ಣ ಅವರ ಮರಿಮಗ ಬೆನಕ ಹಾಗೂ ಯಶು ರಾಜ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿರುವ " ರಮೇಶ್ ಸುರೇಶ್" ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ನಟರಾದ ಸಂತೋಷ್ ಆರ್ಯನ್, ನಾಗೇಂದ್ರ ಅರಸ್, ವಿಜಯ್ ಚೆಂಡೂರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.                  ಇಬ್ಬರು ....

164

Read More...

Kotee.Film Trailer.News

Wednesday, June 05, 2024

  *ಬಹುನಿರೀಕ್ಷಿತ ’ಕೋಟಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ!*     ಡಾಲಿ ಧನಂಜಯ ಅಭಿನಯದ ’ಕೋಟಿ’ ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ.   ಧನಂಜಯ್ ’ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ ಕಥಾಹಂದರವನ್ನು‌ ಹೊಂದಿರುವ ಈ ಸಿನಿಮಾ ಜೂನ್ 14ಕ್ಕೆ ಬಿಡುಗಡೆಯಾಗಲಿದೆ.   ಧನಂಜಯ ಅವರ ಸಾಮಾನ್ಯ ವ್ಯಕ್ತಿಯ ಗೆಟಪ್, ರಮೇಶ್ ಇಂದಿರಾ ಅವರ ನಟೋರಿಯಸ್ ವಿಲನ್ ಪಾತ್ರ, ತಾರಾ ಅವರ ತಾಯಿಯ ಪಾತ್ರ, ಕ್ವಾಲಿಟಿ ವಿಶುವಲ್ಸ್, ....

163

Read More...

Grey Games.News

Monday, June 03, 2024

  *ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು "ಗ್ರೇ ಗೇಮ್ಸ್" ಗೆಲುವು*    ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ "ಆಯನ" ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ "ಚಿನ್ನಾರಿ ಮುತ್ತ" ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ "ಗ್ರೇ ಗೇಮ್ಸ್" ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.‌ ಇತ್ತೀಚಿಗೆ ಈ ಚಿತ್ರ ಯಶಸ್ವಿಯಾಗಿ ಇಪ್ಪತ್ತೈದು ದಿ‌ನ ಪೂರೈಸಿರುವ ಸಂದರ್ಭವನ್ನು ಚಿತ್ರತಂಡ ಸಂಭ್ರಮಿಸಿತ್ತು. ನಿರ್ಮಾಪಕರು ಚಿತ್ರತಂಡದವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು‌. ನಂತರ ಯಶಸ್ಸಿನ ಖುಷಿಯನ್ನು ಮಾತುಗಳ ಮೂಲಕ ಹಂಚಿಕೊಂಡರು.   ನಮ್ಮ ಚಿತ್ರ ಬಿಡುಗಡೆಯಾಗಿ ....

178

Read More...

Shivamma.News

Monday, June 03, 2024

  *ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ "ಶಿವಮ್ಮ" ಚಿತ್ರ ಜೂನ್ 14 ರಂದು ಬಿಡುಗಡೆ* .    *ಇದು ರಿಷಭ್ ಶೆಟ್ಟಿ ನಿರ್ಮಾಣದ ಚಿತ್ರ*   ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ "ಶಿವಮ್ಮ". ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. "ಶಿವಮ್ಮ" ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಭ್ ಶೆಟ್ಟಿ ತೀರ್ಮಾನಿಸಿದ್ದಾರೆ. ....

170

Read More...

Sahara.Film News

Friday, May 24, 2024

  *ಸಹಾರಾ ಸಿನಿಮಾದ ಮೊದಲ ನೋಟ ರಿಲೀಸ್.. ಚಿತ್ರಕ್ಕೆ ಸಾಥ್ ಕೊಟ್ಟ ಕ್ರಿಕೆಟರ್ ಗೌತಮ್*       ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧರಿತ ಸಿನಿಮಾ ಸಹಾರಾ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಸಿಬಿ ತಂಡದ ಮಾಜಿ ಆಟಗಾರ ಗೌತಮ್ ಕೆ ಚಿತ್ರದ ಮೊದಲ ನೋಟ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.     ಟ್ರೇಲರ್ ಬಿಡುಗಡೆ ಬಳಿಕ ಕ್ರಿಕೆಟರ್ ಕೃಷ್ಣಪ್ಪ ಗೌತಮ್ ಮಾತನಾಡಿ, ಕ್ರಿಕೆಟ್ ಕಥೆಯನ್ನು ಒಳಗೊಂಡಿರುವ ಚಿತ್ರ ಇದು. ಟ್ರೇಲರ್ ರಿಯಲಿಸ್ಟಿಕ್ ಆಗಿದೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.     ನಟಿ ಸಾರಿಕಾ ರಾವ್ ಮಾತನಾಡಿ, ಇದು ಸ್ಫೂರ್ತಿದಾಯಕ ಕಥೆ. ನಾನು ಜವಾಬ್ದಾರಿಯಿಂದ ....

185

Read More...
Copyright@2018 Chitralahari | All Rights Reserved. Photo Journalist K.S. Mokshendra,