*ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಅಭಿನಯದ "ಉಸಿರೇ ಉಸಿರೇ" ಚಿತ್ರ ಮೇ 3 ರಂದು ತೆರೆಗೆ* . *ವಿಶೇಷ ಪಾತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆ* . ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಸಿಕೊಂಡಿರುವ "ಉಸಿರೇ ಉಸಿರೇ" ಚಿತ್ರ ಮೇ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಜನರ ಮನ ಗೆದ್ದಿದೆ. ನಾನು ಈ ಚಿತ್ರಕ್ಕಾಗಿ ಐದು ವರ್ಷಗಳ ಕಾಲ ಶ್ರಮಪಟ್ಟಿದ್ದೇನೆ. ಈ ಸಮಯದಲ್ಲಿ ಬೇರೆ ಯಾವ ಚಿತ್ರಗಳನ್ನು ....
— ‘ಗುಂಮ್ಟಿ’ ಸಿನಿಮಾ ಸುದ್ದಿ ಬಿಡುಗಡೆ —- *’ಗುಂಮ್ಟಿ’ ಟೈಟಲ್ ಪೋಸ್ಟರ್ ರಿಲೀಸ್* *ತೆರೆಮೇಲೆ ಕುಡುಬಿ ಜನಜೀವನ ಅನಾವರಣ* *ಕಡಲತಡಿಯ ಕಥೆಗೆ ಚಿತ್ರರೂಪ* *ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ‘ಗುಂಮ್ಟಿ’ ನಿರತ* ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನಿಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನಿಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, ಈ ಬಾರಿ ಮತ್ತೊಂದು ಅಂಥದ್ದೇ ಕಂಟೆಂಟ್ ಆಧಾರಿತ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದ್ದಾರೆ. ಹೌದು, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ ತಮ್ಮ ಮೂರನೇ ....
ಮನಸಿಗಂಟಿಕೊಳ್ಳುವ ಕೆಂಡದ `ಧೂಳು’ ಲಿರಿಕಲ್ ವೀಡಿಯೋ ಸಾಂಗ್! ರೂಪಾ ರಾವ್ ನಿರ್ಮಾಣ ಮತ್ತು ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಕೆಂಡ’. ಆರಂಭದಿಂದ ಇಲ್ಲಿಯವರೆಗೂ ಒಂದಷ್ಟು ಕುತೂಹಲಕರ ವಿಚಾರಗಳೊಂದಿಗೇ ಈ ಸಿನಿಮಾ ಪ್ರೇಕ್ಷಕರನ್ನು ತಲುಪುತ್ತಾ ಬಂದಿದೆ. ಇದೀಗ ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿರುವ `ಕೆಂಡ’ದ ಕಡೆಯಿಂದೀಗ ಸಮ್ಮೋಹಕ ಹಾಡುಗಳ ಹಂಗಾಮಾ ಶುರುವಾಗಿದೆ. ಈಚೆಗಷ್ಟೇ ಚೆಂದದ್ದೊಂದು ಹಾಡು ಬಿಡುಗಡೆಗೊಂಡಿತ್ತು. ಇದೀಗ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಅನಾವರಣಗೊಂಡಿದೆ. ದಾರಿಯಲ್ಲಿ ಧೂಳು... ದೂರ ಎಲ್ಲೋ ಊರು... ಅಂತ ತೆರೆದುಕೊಳ್ಳೋ ಈ ಹಾಡು ನವಿರು ಸಾಹಿತ್ಯ, ಅದಕ್ಕೊಪ್ಪುವ ಸಂಗೀತ ಹಾಗೂ ....
'ಅಲೈಕ್ಯಾ’ ಟ್ರೈಲರ್ ಆಡಿಯೋ ಬಿಡುಗಡೆ ಹಾರರ್ ಹಿನ್ನೆಲೆಯಲ್ಲಿ ನಡೆಯೋ ಕಥಾಹಂದರ ಒಳಗೊಂಡ ಚಿತ್ರ ಅಲೈಕ್ಯಾ. 21-21-21 ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೈಲರ್ ಹಾಡುಗಳು ಬಿಡುಗಡೆ ಸಮಾರಂಭ ರೇಣುಕಾಂಬ ಸ್ಟಯಡಿಯೋದಲ್ಲಿ ನೆರವೇರಿತು. ಹಿರಿಯನಟ ಸುಚೇಂದ್ರಪ್ರಸಾದ್ ಹಾಗೂ ನಟಿ ಸಂಜನಾ ನಾಯ್ಡು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಂಡಕ್ಕೆ ಶುಭ ಹಾರೈಸಿದರು. ಹಿತೇಶ್ ಮೂವೀಸ್ ಲಾಂಛನದಲ್ಲಿ ಎಂ.ಭೂಪತಿ ಅವರು ನಿರ್ಮಿಸಿರುವ, ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಅಲೈಕ್ಯಾ ಚಿತ್ರದ ಎಲ್ಲಾ ಕೆಲಸಗಳು ಮುಗಿದಿದ್ದು, ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ. ಈ ಹಿಂದೆ ಮಳೆಬಿಲ್ಲು ಚಿತ್ರದ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಸಾತ್ವಿಕ್ ....
*ಏಪ್ರಿಲ್ 19 ರಂದು ಖ್ಯಾತ ಗಾಯಕ ರಾಜು ಅನಂತಸ್ವಾಮಿ ನೆನಪಿನಲ್ಲೊಂದು ಸುಂದರ ಸುಗಮ ಸಂಗೀತ ಸಂಜೆ "ರಾಜು ದಿ ಲೆಜೆಂಡ್"* ತಮ್ಮ ಅಮೋಘ ಗಾಯನದಿಂದ ವಿಶ್ವದೆಲ್ಲೆಡೆ ಮನೆಮಾತಾಗಿದ್ದ ಖ್ಯಾತ ಗಾಯಕ ರಾಜು ಅನಂತಸ್ವಾಮಿ ಅವರ ನೆನಪಿನಲ್ಲೊಂದು ಸುಗಮ ಸಂಗೀತ ಸಂಜೆ "ರಾಜು ದಿ ಲೆಜೆಂಡ್" ಎಂಬ ಹೆಸರಿನಲ್ಲಿ ಏಪ್ರಿಲ್ 19 ರಂದು ಕೋಣನ ಕುಂಟೆ ಬಳಿಯ ಶ್ರೀಹರಿ ಖೋಡೆ ಆಡಿಟೋರಿಯಂ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಹೆಸರಾಂತ ಡ್ರಮರ್ ಮಂಜನಾಥ್ ಸತ್ಯಶೀಲ್ ಹಾಗೂ ಖ್ಯಾತ ಗಾಯಕಿ ಅನನ್ಯ ಭಟ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಹಿರಿಯ ರಂಗಕರ್ಮಿ ಶ್ರೀನಿವಾಸ್ ಜಿ ಕಪ್ಪಣ್ಣ, ಸಂಗೀತ ನಿರ್ದೇಶಕರಾದ ಪ್ರವೀಣ್ ....
ಕರಾವಳಿ ಪ್ರತಿಭೆಗಳ ಕಲ್ಜಿಗ
ಕರಾವಳಿ ಸೀಮೆಯ ಯುವ ಪ್ರತಿಭೆಗಳೇ ಸೇರಿಕೊಂಡು ‘ಕಲ್ಜಿಗ’ ಚಿತ್ರವನ್ನು ಸಿದ್ದಪಡಿಸಿದ್ದಾರೆ. ಸಾಹಿತ್ಯ ಮತ್ತು ಸಂಗೀತ ಒದಗಿಸಿರುವ ನಾದಬ್ರಹ್ಮ ಹಂಸಲೇಖಾ ಸಮ್ಮುಖದಲ್ಲಿ ನಾನಾ ಕ್ಷೇತ್ರದ ಗಣ್ಯರು ಟೈಟಲ್ ಹಾಗೂ ಪೋಸ್ಟರ್ನ್ನು ಬಿಡುಗಡೆ ಮಾಡಿದರು. ಎಸ್.ಕೆ.ಗ್ರೂಪ್ ಮಾರ್ಕೆಟಿಂಗ್ ಸಂಸ್ಥೆ ಮಾಲೀಕ ಶರತ್ಕುಮಾರ್.ಎ.ಕೆ ಅವರು ಹಿಮಾನಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಸಾಕಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಸುಮನ್ಸುವರ್ಣ ಆಕ್ಷನ್ ಕಟ್ ಹೇಳಿದ್ದಾರೆ.
*ಥಿಯೇಟರಿನತ್ತ ‘ಪುಕ್ಸಟ್ಟೆ ಪೈಸ’* *ಕಾಸಿನ ಹಿಂದೆ ಬಿದ್ದವರ ಕನಸಿನ ಕಥೆ* *ಹೊಸಬರ ‘ಪುಕ್ಸಟ್ಟೆ ಪೈಸ’ ಏ. 19ಕ್ಕೆ ತೆರೆಗೆ* ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಪುಕ್ಸಟ್ಟೆ ಪೈಸ’ ಸಿನಿಮಾ ಇದೇ ಏ. 19 ರಂದು ತೆರೆಗೆ ಬರುತ್ತಿದೆ. ಸಿನಿಮಾ ಪ್ರಚಾರದ ಭಾಗವಾಗಿ ಈಗಾಗಲೇ ‘ಪುಕ್ಸಟ್ಟೆ ಪೈಸ’ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದಿದ್ದು, ಈ ವೇಳೆ ಸಿನಿಮಾದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿತು. ‘ಇಂಚರ ಪಿಕ್ಚರ್ಸ್’ ಬ್ಯಾನರಿನಲ್ಲಿ ಮಧುಸೂಧನ ಎ. ಎಸ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಿಸಿ, ನಿರ್ದೇಶಿಸಿರುವ ....
*ಚಿತ್ರೀಕರಣಕ್ಕೆ ಹೊರಟಳು ‘ಸುಮಾ’* *ಸದ್ದಿಲ್ಲದೆ ಸೆಟ್ಟೇರಿತು ಮತ್ತೊಂದು ಮಹಿಳಾ ಪ್ರಧಾನ ಚಿತ್ರ* *ನಮ್ಮ ನಡುವಿನ ಕಥೆಗೆ ಸಿನಿಮಾ ರೂಪ* ‘ಓಂ ಸಾಯಿ ಸಿನೆಮಾಸ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ‘ಸುಮಾ’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಬೆಂಗಳೂರಿನ ತ್ಯಾಗರಾಜನಗರದ ಗಣಪತಿ ದೇವಸ್ಥಾನದಲ್ಲಿ ನೆರವೇರಿದ ‘ಸುಮಾ’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಹಿರಿಯ ನಟ ಕಂ ನಿರ್ದೇಶಕ ರವಿಕಿರಣ್ ಕ್ಯಾಮರಾ ಸ್ವಿಚ್ ಆನ್ ಮಾಡಿದರೆ, ನಿರ್ಮಾಪಕರಾದ ಸಂಜಯ್ ಗೌಡ ಕ್ಲಾಪ್ ಮಾಡುವ ಮೂಲಕ ಸಿನಿಮಾದ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಚಿತ್ರರಂಗ ಮತ್ತು ವಿವಿಧ ....
*ಯಶಸ್ಸಿನ ಸಂಭ್ರಮದಲ್ಲಿ "ಯುವ"* . *ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆ* . ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ "ಯುವ" ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ....
*ಕನ್ನಡಕ್ಕೆ ‘ಕೋಟಿ’ ತಂದ ಜಿಯೋ ಸ್ಟುಡಿಯೋಸ್* *ಧನಂಜಯ ಅವರ ಹೊಸ ಸಿನಿಮಾ ಜೂನ್ 14ಕ್ಕೆ ಬಿಡುಗಡೆ* ಬೆಂಗಳೂರು, ಏಪ್ರಿಲ್ 13: ಕನ್ನಡ ಸಿನಿಮಾ ಮಾರುಕಟ್ಟೆಗೆ ದೇಶದ ಪ್ರಮುಖ ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್ ಕೋಟಿ ಸಿನಿಮಾ ಮೂಲಕ ಕಾಲಿಟ್ಟಿದೆ. ಕನ್ನಡದ ಅತಿ ಪ್ರತಿಭಾವಂತ ನಟ ಧನಂಜಯ ಈ ಸಿನಿಮಾ ನಾಯಕರಾಗಿದ್ದು ಪರಮ್ ಇದನ್ನು ನಿರ್ದೇಶಿಸುತ್ತಿದ್ದಾರೆ. ಇದರ ಟೀಸರ್ ಬಿಡುಗಡೆ ಸಮಾರಂಭ ಇಂದು ಬೆಂಗಳೂರಿನಲ್ಲಿ ನಡೆಯಿತು. ಬೈಪನ್ ಭಾರಿ ದೇವಾ (ಮರಾಠಿ), ಆರ್ಟಿಕಲ್ ೩೭೦, ತೇರಿ ಬಾತೋಂಮೆ ಐಸಾ ಉಲ್ಜಾಜಿಯಾ, ಶೈತಾನ್ ಮತ್ತು ಲಾಪಾತಾ ಲೇಡೀಸ್ ಹೀಗೆ ಒಂದಾದ ಮೇಲೆ ಒಂದರಂತೆ ಹಿಟ್ ಸಿನಿಮಾಗಳನ್ನು ಜಿಯೋ ಸ್ಟುಡಿಯೋಸ್ ಕೊಟ್ಟಿದೆ. ಈಗ ಕನ್ನಡ ಮಾರುಕಟ್ಟೆಗೆ ಪ್ರವೇಶಿಸುವ ....
*ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು "ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು" ಚಿತ್ರ.* . ಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ "ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬೆಂಗಳೂರಿನ ವಿದ್ಯಾಪೀಠದಲ್ಲಿರುವ ಶ್ರೀಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು. ಇಂಚಗೇರಿಯ ಶ್ರೀ ಸ.ಸ.ಪ್ರಭುಜೀ ಮಾಹಾರಾಜರ ಸಾನಿಧ್ಯದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಇಂಚಗೇರಿಯ ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಆದಿತ್ಯ ಅಭಿನಯದ "ಕಾಂಗರೂ" ಚಿತ್ರ.* ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ "ಕಾಂಗರೂ" ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಹಿರಿಯ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಅರಸಪ್ಪ ಮಾಜಿ ಅಧ್ಯಕ್ಷರು ಕರ್ನಾಟಕ ಸಣ್ಣ ಕೈಗಾರಿಕೆ ಉದ್ಯಮ, ಆರಿಫ್ ಅಧ್ಯಕ್ಷರು ಪೀಣ್ಯ ಕೈಗಾರಿಕಾ ಉದ್ಯಮ ಹಾಗೂ ನಿರ್ಮಾಪಕ ಸಿಲ್ಕ್ ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ....
*ಶ್ರೀವೀರಾಂಜನೇಯಸ್ವಾಮಿ ಸನ್ನಿಧಿಯಲ್ಲಿ ಆರಂಭವಾಯಿತು ದುನಿಯಾ ವಿಜಯ್ ಅಭಿನಯದ ನೂತನ ಚಿತ್ರ* . *ಕೆ.ವಿ.ಸತ್ಯಪ್ರಕಾಶ್ ನಿರ್ಮಾಣದ ಈ ಚಿತ್ರಕ್ಕೆ ಜಡೇಶ ಕೆ ಹಂಪಿ ನಿರ್ದೇಶನ* . ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ "ಸಾರಥಿ" ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ "ಸಾರಥಿ ಫಿಲಂಸ್" ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. "ಜಂಟಲ್ ಮ್ಯಾನ್", " ಗುರುಶಿಷ್ಯರು" ಚಿತ್ರಗಳ ನಿರ್ದೇಶಕ ಹಾಗೂ "ಕಾಟೇರ" ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್ ....
*ಅಪ್ಪು ಆಪ್ತರಿಂದ ಬಿಡುಗಡೆಯಾಯಿತು ’ರತ್ನ’ ಚಿತ್ರದ ಹಾಡುಗಳು* . ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ "ರತ್ನ" ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರದಲ್ಲಿ ಐದು ಹಾಡುಗಳಿದ್ದು, ಒಂದೊಂದು ಹಾಡನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಹಾಗೂ ಅವರ ಹತ್ತಿರದ ಒಡನಾಡಿಗಳು ಬಿಡುಗಡೆ ಮಾಡಿದ್ದು ವಿಶೇಷ. "ಅಪ್ಪು" ವೆಂಕಟೇಶ್, ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ಪುನೀತ್ ಅವರ ಅಂಗರಕ್ಷಕರಾಗಿದ್ದ ಚಲಪತಿ, ಹುಬ್ಳಳಿಯಿಂದ ಬಂದಿದ್ದ ರಘುಪತಿ ಹಾಗೂ ಮಾರುತಿ ಅವರು "ರತ್ನ" ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. "ರತ್ನ" ಕೂಡ ಅಪ್ಪು ಅಭಿಮಾನಿಯ ಕುರಿತಾದ ....
*ಏಪ್ರಿಲ್ 19ರಂದು ಬಿಡುಗಡೆಯಾಗಲಿದೆ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಣದ "O2" ಚಿತ್ರ* . *ಪುನೀತ್ ರಾಜಕುಮಾರ್ ಅವರು ಕೇಳಿ ಮೆಚ್ಚಿಕೊಂಡ ಕೊನೆಯ ಕಥೆ ಇದು* . ಸದಾ ಹೊಸಬರ ಹೊಸ ಪ್ರಯತ್ನಗಳಿಗೆ ಬೆನ್ನು ತಟ್ಟುವ ಕೆಲಸವನ್ನು ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಪುನೀತ್ ರಾಜಕುಮಾರ್ ಮಾಡಿಕೊಂಡು ಬರುತ್ತಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "O2" ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಇದೇ ಏಪ್ರಿಲ್ 19 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದು ಪುನೀತ್ ರಾಜಕುಮಾರ್ ಅವರು ಕೇಳಿ ಮೆಚ್ಚಿಕೊಂಡ ಕೊನೆಯ ಸಿನಿಮಾ ಕಥೆ. ಈ ....
*ತೆರೆಗೆ ಬರಲು ರೆಡಿ ’ಅಪ್ಪಾ ಐ ಲವ್ ಯೂ’...ಇದೇ ಏಪ್ರಿಲ್ 12ಕ್ಕೆ ಪ್ರೇಮ್-ಮಾನ್ವಿತಾ ಸಿನಿಮಾ ರಿಲೀಸ್* *ಏಪ್ರಿಲ್ 12ಕ್ಕೆ ಪ್ರೇಮ್-ಮಾನ್ವಿತಾ ನಟನೆಯ ಅಪ್ಪಾ ಐ ಲವ್ ಯೂ ಬಿಡುಗಡೆ...* *ಏಪ್ರಿಲ್ 12ಕ್ಕೆ ಬೆಳ್ಳಿಪರದೆಗೆ ಅಪ್ಪಾ ಐ ಲವ್ ಯೂ ಎಂಟ್ರಿ* ನೆನಪಿರಲಿ ಪ್ರೇಮ್ ಬೆಳ್ಳಿ ತೆರೆ ಮೇಲೆ ಬಂದು ಬಹಳ ದಿನ ಆಯಿತು. ಆದರೆ ಈಗ ಅಪ್ಪ ಐ ಲವ್ ಯು ಚಿತ್ರದ ಮೂಲಕ ಲವ್ಲಿ ಸ್ಟಾರ್ ಪ್ರೇಮ್ ಬರ್ತಿದ್ದಾರೆ. ಟಗರು ಚಿತ್ರ ಖ್ಯಾತಿಯ ನಟಿ ಮಾನ್ವಿತಾ ಹರೀಶ್ ಪ್ರೇಮ್ಗೆ ಜೋಡಿ ಆಗಿದ್ದಾರೆ. ಮೊದಲ ಬಾರಿಗೆ ಈ ಜೋಡಿ ಬೆಳ್ಳಿತೆರೆಗೆ ಬರುತ್ತಿದೆ. ಇದೀಗ ಇವರ ಈ ಚಿತ್ರ ರಿಲೀಸ್ಗೆ ರೆಡಿ ಆಗಿದೆ. ಚಿತ್ರದ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದ್ದು ಈ ಬಗ್ಗೆ ....
*ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ಪುತ್ರಿ ವಿವಾಹ ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ* . .
*ಪ್ರೇಕ್ಷಕರು ಅಪ್ಪಿದ ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ 25 ದಿನದ ಸಂಭ್ರಮ* *25 ದಿನದ ಸಂಭ್ರಮದಲ್ಲಿ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ...* *25 ದಿನ ಪೂರೈಸಿದ ಪೃಥ್ವಿ-ಮಿಲನಾ ಫಾರ್ ರಿಜಿಸ್ಟ್ರೇಷನ್ ಸಿನಿಮಾ* ಇಂದು ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂಬುದು ವಾರ, ತಿಂಗಳ ಸುತ್ತ ಬಂಧಿಯಾಗಿರೋ ಕಾಲಮಾನ. ಇಂಥಾ ಹೊತ್ತಿನಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ಪೂರೈಸೋದೇ ಕನಸಿನ ಮಾತು ಎನ್ನುವ ವಾತಾವರಣವಿದೆ. ಇಂತಹ ವಾತಾವರಣದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನದ ಸಂಭ್ರಮಾಚರಣೆಗೆ ಸಾಕ್ಷಿಯಾಗುತ್ತದೆ ಎಂದರೆ ಅಚ್ಚರಿಯಾಗದಿರಲು ಸಾಧ್ಯವೇ? ಅಂಥಾದ್ದೊಂದು ಅಚ್ಚರಿಯ ಬೆಳವಣಿಗೆಗೆ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಸಾಕ್ಷಿಯಾಗಿದೆ. ....
*"ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಡಾಲಿ ಹೇಳಿದ ಮಾತು ಈಗ ಚಲನಚಿತ್ರದ ಶೀರ್ಷಿಕೆ* . *ಸಿ.ಎಸ್ ವೆಂಕಟೇಶ್ ಚೊಚ್ಚಲ ನಿರ್ಮಾಣದ ಈ ಚಿತ್ರಕ್ಕೆ ಮಂಜುಕವಿ ನಿರ್ದೇಶನ* ನಟ ಡಾಲಿ ಧನಂಜಯ ಅವರು ಸಮಾರಂಭವೊಂದರಲ್ಲಿ "ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಎಂಬ ಮಾತು ಹೇಳಿದ್ದರು. ಆ ಮಾತು ಸಾಕಷ್ಟು ವೈರಲ್ ಆಗಿದೆ. ಈಗ ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿದೆ. ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಂಜುಕವಿ ನಿರ್ದೇಶಿಸುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ಬೆಂಗಳೂರು ಪೂರ್ವ ವಲಯದ ಡಿಸಿಪಿ ದೇವರಾಜ್ ಆರಂಭ ಫಲಕ ತೋರುವ ಮೂಲಕ ....
*‘ಜಾಜಿ’ ಹಾಡು ಬಿಡುಗಡೆ ಮಾಡಿ ಶುಭಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್* . ಹೊಸಪ್ರತಿಭೆಗಳ ಸದಾ ಜೊತೆಯಾಗಿ ನಿಲ್ಲುವ ನಟ ದರ್ಶನ್ ಅವರು ‘ಜಾಜಿ’ ಆಲ್ಬಂ ಸಾಂಗ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಕೈ ನೋವಿನ ನಡುವೆಯೂ ಕನ್ನಡದ ಪ್ರತಿಭೆಯನ್ನು ಪ್ರೋತ್ಸಾಹಿಸಲು ದರ್ಶನ್ ಅವರು ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಶಾಸಕ ಸತೀಶ್ ರೆಡ್ಡಿ, ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸೇರಿದಂತೆ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಮಾಜಿ ಉಪ ಮಹಾಪೌರರಾದ ಮೋಹನ್ ರಾಜು ಹಾಗೂ ಬಿ.ಸುನೀತಾ ಮೋಹನ್ ರಾಜು ಅವರ ಪುತ್ರಿ ಜಾಜಿ ನಟಿಸಿರುವ ಆಲ್ಬಂ ಸಾಂಗ್ (Album Song) ಬಿಡುಗಡೆ ಆಗಿದೆ. ಈ ಹಾಡಿನ ಹೆಸರು ಕೂಡ ‘ಜಾಜಿ’. ....