Alaikya.Film News

Monday, April 15, 2024

  'ಅಲೈಕ್ಯಾ’ ಟ್ರೈಲರ್ ಆಡಿಯೋ ಬಿಡುಗಡೆ       ಹಾರರ್ ಹಿನ್ನೆಲೆಯಲ್ಲಿ ನಡೆಯೋ ಕಥಾಹಂದರ ಒಳಗೊಂಡ ಚಿತ್ರ ಅಲೈಕ್ಯಾ. 21-21-21 ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೈಲರ್ ಹಾಡುಗಳು ‌ಬಿಡುಗಡೆ ಸಮಾರಂಭ ರೇಣುಕಾಂಬ ಸ್ಟಯಡಿಯೋದಲ್ಲಿ ನೆರವೇರಿತು. ಹಿರಿಯನಟ ಸುಚೇಂದ್ರಪ್ರಸಾದ್ ಹಾಗೂ ನಟಿ ಸಂಜನಾ ನಾಯ್ಡು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಂಡಕ್ಕೆ ಶುಭ ಹಾರೈಸಿದರು. ಹಿತೇಶ್ ಮೂವೀಸ್ ಲಾಂಛನದಲ್ಲಿ ಎಂ.ಭೂಪತಿ ಅವರು ನಿರ್ಮಿಸಿರುವ, ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ  ಅಲೈಕ್ಯಾ‌  ಚಿತ್ರದ ಎಲ್ಲಾ ಕೆಲಸಗಳು ಮುಗಿದಿದ್ದು,  ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ.  ಈ ಹಿಂದೆ ಮಳೆಬಿಲ್ಲು ಚಿತ್ರದ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದ ಸಾತ್ವಿಕ್ ....

223

Read More...

Raju Ananthaswamy Music Tribute.News

Monday, April 15, 2024

  *ಏಪ್ರಿಲ್ 19 ರಂದು ಖ್ಯಾತ ಗಾಯಕ ರಾಜು ಅನಂತಸ್ವಾಮಿ ನೆನಪಿನಲ್ಲೊಂದು ಸುಂದರ ಸುಗಮ ಸಂಗೀತ ಸಂಜೆ "ರಾಜು ದಿ ಲೆಜೆಂಡ್"*   ತಮ್ಮ ಅಮೋಘ ಗಾಯನದಿಂದ ವಿಶ್ವದೆಲ್ಲೆಡೆ ಮನೆಮಾತಾಗಿದ್ದ ಖ್ಯಾತ ಗಾಯಕ ರಾಜು ಅನಂತಸ್ವಾಮಿ ಅವರ ನೆನಪಿನಲ್ಲೊಂದು ಸುಗಮ ಸಂಗೀತ ಸಂಜೆ "ರಾಜು ದಿ ಲೆಜೆಂಡ್" ಎಂಬ ಹೆಸರಿನಲ್ಲಿ ಏಪ್ರಿಲ್ 19 ರಂದು ಕೋಣನ ಕುಂಟೆ ಬಳಿಯ ಶ್ರೀಹರಿ ಖೋಡೆ ಆಡಿಟೋರಿಯಂ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಹೆಸರಾಂತ ಡ್ರಮರ್ ಮಂಜನಾಥ್ ಸತ್ಯಶೀಲ್ ಹಾಗೂ ಖ್ಯಾತ ಗಾಯಕಿ ಅನನ್ಯ ಭಟ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಹಿರಿಯ ರಂಗಕರ್ಮಿ ಶ್ರೀನಿವಾಸ್ ಜಿ ಕಪ್ಪಣ್ಣ, ಸಂಗೀತ ನಿರ್ದೇಶಕರಾದ ಪ್ರವೀಣ್ ....

236

Read More...

Kaljiga.Film News

Monday, April 15, 2024

ಕರಾವಳಿ ಪ್ರತಿಭೆಗಳ ಕಲ್ಜಿಗ

      ಕರಾವಳಿ ಸೀಮೆಯ ಯುವ ಪ್ರತಿಭೆಗಳೇ ಸೇರಿಕೊಂಡು ‘ಕಲ್ಜಿಗ’  ಚಿತ್ರವನ್ನು ಸಿದ್ದಪಡಿಸಿದ್ದಾರೆ. ಸಾಹಿತ್ಯ ಮತ್ತು ಸಂಗೀತ ಒದಗಿಸಿರುವ ನಾದಬ್ರಹ್ಮ ಹಂಸಲೇಖಾ ಸಮ್ಮುಖದಲ್ಲಿ ನಾನಾ ಕ್ಷೇತ್ರದ ಗಣ್ಯರು ಟೈಟಲ್ ಹಾಗೂ ಪೋಸ್ಟರ್‌ನ್ನು ಬಿಡುಗಡೆ ಮಾಡಿದರು. ಎಸ್.ಕೆ.ಗ್ರೂಪ್ ಮಾರ್ಕೆಟಿಂಗ್ ಸಂಸ್ಥೆ ಮಾಲೀಕ ಶರತ್‌ಕುಮಾರ್.ಎ.ಕೆ ಅವರು ಹಿಮಾನಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.  ಸಾಕಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಸುಮನ್‌ಸುವರ್ಣ ಆಕ್ಷನ್ ಕಟ್ ಹೇಳಿದ್ದಾರೆ.

239

Read More...

Puksate Paisa.News

Friday, April 12, 2024

    *ಥಿಯೇಟರಿನತ್ತ ‘ಪುಕ್ಸಟ್ಟೆ ಪೈಸ’*   *ಕಾಸಿನ ಹಿಂದೆ ಬಿದ್ದವರ ಕನಸಿನ ಕಥೆ*   *ಹೊಸಬರ ‘ಪುಕ್ಸಟ್ಟೆ ಪೈಸ’ ಏ. 19ಕ್ಕೆ ತೆರೆಗೆ*     ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಪುಕ್ಸಟ್ಟೆ ಪೈಸ’ ಸಿನಿಮಾ ಇದೇ ಏ. 19 ರಂದು ತೆರೆಗೆ ಬರುತ್ತಿದೆ. ಸಿನಿಮಾ ಪ್ರಚಾರದ ಭಾಗವಾಗಿ ಈಗಾಗಲೇ ‘ಪುಕ್ಸಟ್ಟೆ ಪೈಸ’ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದಿದ್ದು, ಈ ವೇಳೆ ಸಿನಿಮಾದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿತು.   ‘ಇಂಚರ ಪಿಕ್ಚರ್ಸ್’ ಬ್ಯಾನರಿನಲ್ಲಿ ಮಧುಸೂಧನ ಎ. ಎಸ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಿಸಿ, ನಿರ್ದೇಶಿಸಿರುವ ....

200

Read More...

Somu.Film News

Sunday, April 07, 2024

  *ಚಿತ್ರೀಕರಣಕ್ಕೆ ಹೊರಟಳು ‘ಸುಮಾ’*   *ಸದ್ದಿಲ್ಲದೆ ಸೆಟ್ಟೇರಿತು ಮತ್ತೊಂದು ಮಹಿಳಾ ಪ್ರಧಾನ ಚಿತ್ರ*   *ನಮ್ಮ ನಡುವಿನ ಕಥೆಗೆ ಸಿನಿಮಾ ರೂಪ*   ‘ಓಂ ಸಾಯಿ ಸಿನೆಮಾಸ್’ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ ‘ಸುಮಾ’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು.   ಬೆಂಗಳೂರಿನ ತ್ಯಾಗರಾಜನಗರದ ಗಣಪತಿ  ದೇವಸ್ಥಾನದಲ್ಲಿ ನೆರವೇರಿದ ‘ಸುಮಾ’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ ಹಿರಿಯ ನಟ ಕಂ ನಿರ್ದೇಶಕ ರವಿಕಿರಣ್ ಕ್ಯಾಮರಾ ಸ್ವಿಚ್ ಆನ್ ಮಾಡಿದರೆ, ನಿರ್ಮಾಪಕರಾದ ಸಂಜಯ್ ಗೌಡ ಕ್ಲಾಪ್ ಮಾಡುವ ಮೂಲಕ ಸಿನಿಮಾದ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಚಿತ್ರರಂಗ ಮತ್ತು ವಿವಿಧ ....

230

Read More...

Yuva.Film Success Meet.News

Saturday, April 13, 2024

  *ಯಶಸ್ಸಿನ ಸಂಭ್ರಮದಲ್ಲಿ "ಯುವ"* .    *ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆ* .   ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ "ಯುವ" ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.   ....

252

Read More...

Kotee.Film News

Saturday, April 13, 2024

  *ಕನ್ನಡಕ್ಕೆ ‘ಕೋಟಿ’ ತಂದ ಜಿಯೋ ಸ್ಟುಡಿಯೋಸ್* *ಧನಂಜಯ ಅವರ ಹೊಸ ಸಿನಿಮಾ ಜೂನ್ 14ಕ್ಕೆ ಬಿಡುಗಡೆ*   ಬೆಂಗಳೂರು, ಏಪ್ರಿಲ್ 13: ಕನ್ನಡ ಸಿನಿಮಾ ಮಾರುಕಟ್ಟೆಗೆ ದೇಶದ ಪ್ರಮುಖ ನಿರ್ಮಾಣ ಸಂಸ್ಥೆ ಜಿಯೋ ಸ್ಟುಡಿಯೋಸ್ ಕೋಟಿ ಸಿನಿಮಾ ಮೂಲಕ ಕಾಲಿಟ್ಟಿದೆ. ಕನ್ನಡದ ಅತಿ ಪ್ರತಿಭಾವಂತ ನಟ ಧನಂಜಯ ಈ ಸಿನಿಮಾ ನಾಯಕರಾಗಿದ್ದು ಪರಮ್ ಇದನ್ನು ನಿರ್ದೇಶಿಸುತ್ತಿದ್ದಾರೆ. ಇದರ ಟೀಸರ್ ಬಿಡುಗಡೆ ಸಮಾರಂಭ ಇಂದು ಬೆಂಗಳೂರಿನಲ್ಲಿ ನಡೆಯಿತು.   ಬೈಪನ್ ಭಾರಿ ದೇವಾ (ಮರಾಠಿ), ಆರ್ಟಿಕಲ್ ೩೭೦, ತೇರಿ ಬಾತೋಂಮೆ ಐಸಾ ಉಲ್ಜಾಜಿಯಾ, ಶೈತಾನ್ ಮತ್ತು ಲಾಪಾತಾ ಲೇಡೀಸ್ ಹೀಗೆ ಒಂದಾದ ಮೇಲೆ ಒಂದರಂತೆ ಹಿಟ್ ಸಿನಿಮಾಗಳನ್ನು ಜಿಯೋ ಸ್ಟುಡಿಯೋಸ್ ಕೊಟ್ಟಿದೆ. ಈಗ ಕನ್ನಡ ಮಾರುಕಟ್ಟೆಗೆ ಪ್ರವೇಶಿಸುವ ....

238

Read More...

Samartha Sadguru SSM.News

Saturday, April 13, 2024

  *ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು "ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು"  ಚಿತ್ರ.* .      ಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ "ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬೆಂಗಳೂರಿನ ವಿದ್ಯಾಪೀಠದಲ್ಲಿರುವ ಶ್ರೀಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು. ಇಂಚಗೇರಿಯ ಶ್ರೀ ಸ.ಸ.ಪ್ರಭುಜೀ ಮಾಹಾರಾಜರ ಸಾನಿಧ್ಯದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.   ಇಂಚಗೇರಿಯ ....

199

Read More...

Kangroo.Film News

Friday, April 12, 2024

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಆದಿತ್ಯ ಅಭಿನಯದ "ಕಾಂಗರೂ" ಚಿತ್ರ.*   ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ  "ಕಾಂಗರೂ" ಚಿತ್ರದ ಟ್ರೇಲರ್  A2 music ಮೂಲಕ ಬಿಡುಗಡೆಯಾಗಿದೆ. ಹಿರಿಯ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಅರಸಪ್ಪ ಮಾಜಿ ಅಧ್ಯಕ್ಷರು ಕರ್ನಾಟಕ ಸಣ್ಣ ಕೈಗಾರಿಕೆ ಉದ್ಯಮ, ಆರಿಫ್ ಅಧ್ಯಕ್ಷರು ಪೀಣ್ಯ ಕೈಗಾರಿಕಾ ಉದ್ಯಮ ಹಾಗೂ ನಿರ್ಮಾಪಕ ಸಿಲ್ಕ್ ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.   ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ....

202

Read More...

Film V K 29.News

Thursday, April 11, 2024

  *ಶ್ರೀವೀರಾಂಜನೇಯಸ್ವಾಮಿ ಸನ್ನಿಧಿಯಲ್ಲಿ ಆರಂಭವಾಯಿತು ದುನಿಯಾ ವಿಜಯ್ ಅಭಿನಯದ ನೂತನ ಚಿತ್ರ* .    *ಕೆ.ವಿ.ಸತ್ಯಪ್ರಕಾಶ್ ನಿರ್ಮಾಣದ ಈ ಚಿತ್ರಕ್ಕೆ ಜಡೇಶ ಕೆ ಹಂಪಿ ನಿರ್ದೇಶನ* .    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ "ಸಾರಥಿ" ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ "ಸಾರಥಿ ಫಿಲಂಸ್" ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. "ಜಂಟಲ್ ಮ್ಯಾನ್", " ಗುರುಶಿಷ್ಯರು" ಚಿತ್ರಗಳ ನಿರ್ದೇಶಕ ಹಾಗೂ "ಕಾಟೇರ" ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್ ....

228

Read More...

Ratna.Film News

Saturday, April 06, 2024

  *ಅಪ್ಪು ಆಪ್ತರಿಂದ  ಬಿಡುಗಡೆಯಾಯಿತು ’ರತ್ನ’ ಚಿತ್ರದ ಹಾಡುಗಳು* .                ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ "ರತ್ನ" ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರದಲ್ಲಿ ಐದು ಹಾಡುಗಳಿದ್ದು, ಒಂದೊಂದು ಹಾಡನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಹಾಗೂ ಅವರ ಹತ್ತಿರದ ಒಡನಾಡಿಗಳು ಬಿಡುಗಡೆ ಮಾಡಿದ್ದು ವಿಶೇಷ. "ಅಪ್ಪು" ವೆಂಕಟೇಶ್, ಬೆಳ್ಳುಳ್ಳಿ ಕಬಾಬ್ ಖ್ಯಾತಿಯ ಚಂದ್ರು, ಪುನೀತ್ ಅವರ ಅಂಗರಕ್ಷಕರಾಗಿದ್ದ ಚಲಪತಿ, ಹುಬ್ಳಳಿಯಿಂದ ಬಂದಿದ್ದ ರಘುಪತಿ ಹಾಗೂ ಮಾರುತಿ ಅವರು "ರತ್ನ" ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. "ರತ್ನ" ಕೂಡ ಅಪ್ಪು ಅಭಿಮಾನಿಯ ಕುರಿತಾದ ....

227

Read More...

Film 02.News

Saturday, April 06, 2024

  *ಏಪ್ರಿಲ್ 19ರಂದು ಬಿಡುಗಡೆಯಾಗಲಿದೆ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಣದ "O2" ಚಿತ್ರ* .    *ಪುನೀತ್ ರಾಜಕುಮಾರ್ ಅವರು ಕೇಳಿ ಮೆಚ್ಚಿಕೊಂಡ ಕೊನೆಯ ಕಥೆ ಇದು* .   ಸದಾ ಹೊಸಬರ ಹೊಸ ಪ್ರಯತ್ನಗಳಿಗೆ ಬೆನ್ನು ತಟ್ಟುವ ಕೆಲಸವನ್ನು ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಪುನೀತ್ ರಾಜಕುಮಾರ್ ಮಾಡಿಕೊಂಡು ಬರುತ್ತಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ "O2" ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಇದೇ ಏಪ್ರಿಲ್   19 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇದು ಪುನೀತ್ ರಾಜಕುಮಾರ್ ಅವರು ಕೇಳಿ ಮೆಚ್ಚಿಕೊಂಡ ಕೊನೆಯ ಸಿನಿಮಾ ಕಥೆ. ಈ ....

199

Read More...

Appa I Love You.News

Thursday, April 04, 2024

  *ತೆರೆಗೆ ಬರಲು ರೆಡಿ ’ಅಪ್ಪಾ ಐ ಲವ್ ಯೂ’...ಇದೇ ಏಪ್ರಿಲ್ 12ಕ್ಕೆ ಪ್ರೇಮ್-ಮಾನ್ವಿತಾ ಸಿನಿಮಾ ರಿಲೀಸ್*     *ಏಪ್ರಿಲ್ 12ಕ್ಕೆ ಪ್ರೇಮ್-ಮಾನ್ವಿತಾ ನಟನೆಯ ಅಪ್ಪಾ ಐ ಲವ್ ಯೂ ಬಿಡುಗಡೆ...*     *ಏಪ್ರಿಲ್  12ಕ್ಕೆ ಬೆಳ್ಳಿಪರದೆಗೆ ಅಪ್ಪಾ ಐ ಲವ್ ಯೂ ಎಂಟ್ರಿ*       ನೆನಪಿರಲಿ ಪ್ರೇಮ್ ಬೆಳ್ಳಿ ತೆರೆ ಮೇಲೆ ಬಂದು ಬಹಳ ದಿನ ಆಯಿತು. ಆದರೆ ಈಗ ಅಪ್ಪ ಐ ಲವ್ ಯು ಚಿತ್ರದ ಮೂಲಕ ಲವ್ಲಿ ಸ್ಟಾರ್ ಪ್ರೇಮ್ ಬರ್ತಿದ್ದಾರೆ. ಟಗರು ಚಿತ್ರ ಖ್ಯಾತಿಯ ನಟಿ ಮಾನ್ವಿತಾ ಹರೀಶ್ ಪ್ರೇಮ್‌ಗೆ ಜೋಡಿ ಆಗಿದ್ದಾರೆ. ಮೊದಲ ಬಾರಿಗೆ ಈ ಜೋಡಿ ಬೆಳ್ಳಿತೆರೆಗೆ ಬರುತ್ತಿದೆ. ಇದೀಗ ಇವರ ಈ ಚಿತ್ರ ರಿಲೀಸ್‌ಗೆ ರೆಡಿ ಆಗಿದೆ. ಚಿತ್ರದ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದ್ದು ಈ ಬಗ್ಗೆ ....

252

Read More...

Ramesh Reddy Daughter Reception.

Wednesday, April 03, 2024

 

*ಖ್ಯಾತ ನಿರ್ಮಾಪಕ ರಮೇಶ್ ರೆಡ್ಡಿ ಪುತ್ರಿ ವಿವಾಹ ಆರತಕ್ಷತೆಯಲ್ಲಿ ಚಿತ್ರರಂಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ* . .       

260

Read More...

For Regn.25 Days.News

Thursday, April 04, 2024

  *ಪ್ರೇಕ್ಷಕರು ಅಪ್ಪಿದ ಫಾರ್ ರಿಜಿಸ್ಟ್ರೇಷನ್ ಸಿನಿಮಾಗೆ 25 ದಿನದ ಸಂಭ್ರಮ*   *25 ದಿನದ ಸಂಭ್ರಮದಲ್ಲಿ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ...*   *25 ದಿನ ಪೂರೈಸಿದ ಪೃಥ್ವಿ-ಮಿಲನಾ ಫಾರ್ ರಿಜಿಸ್ಟ್ರೇಷನ್ ಸಿನಿಮಾ*   ಇಂದು ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂಬುದು ವಾರ, ತಿಂಗಳ ಸುತ್ತ ಬಂಧಿಯಾಗಿರೋ ಕಾಲಮಾನ. ಇಂಥಾ ಹೊತ್ತಿನಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25  ಪೂರೈಸೋದೇ ಕನಸಿನ ಮಾತು ಎನ್ನುವ ವಾತಾವರಣವಿದೆ. ಇಂತಹ ವಾತಾವರಣದಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 25 ದಿನದ ಸಂಭ್ರಮಾಚರಣೆಗೆ ಸಾಕ್ಷಿಯಾಗುತ್ತದೆ ಎಂದರೆ ಅಚ್ಚರಿಯಾಗದಿರಲು ಸಾಧ್ಯವೇ? ಅಂಥಾದ್ದೊಂದು ಅಚ್ಚರಿಯ ಬೆಳವಣಿಗೆಗೆ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಸಾಕ್ಷಿಯಾಗಿದೆ.   ....

235

Read More...

Baduvru Maklu Belibeku Kanraya.News

Thursday, April 04, 2024

  *"ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಡಾಲಿ ಹೇಳಿದ ಮಾತು ಈಗ ಚಲನಚಿತ್ರದ ಶೀರ್ಷಿಕೆ* .         *ಸಿ.ಎಸ್ ವೆಂಕಟೇಶ್ ಚೊಚ್ಚಲ ನಿರ್ಮಾಣದ ಈ ಚಿತ್ರಕ್ಕೆ ಮಂಜುಕವಿ ನಿರ್ದೇಶನ*   ನಟ ಡಾಲಿ ಧನಂಜಯ ಅವರು ಸಮಾರಂಭವೊಂದರಲ್ಲಿ "ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ" ಎಂಬ ಮಾತು ಹೇಳಿದ್ದರು. ಆ ಮಾತು ಸಾಕಷ್ಟು ವೈರಲ್ ಆಗಿದೆ. ಈಗ ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿದೆ. ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಂಜುಕವಿ ನಿರ್ದೇಶಿಸುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ಬೆಂಗಳೂರು ಪೂರ್ವ ವಲಯದ ಡಿಸಿಪಿ ದೇವರಾಜ್ ಆರಂಭ ಫಲಕ ತೋರುವ ಮೂಲಕ ....

245

Read More...

Jaaji.Video Song.News

Wednesday, April 03, 2024

  *‘ಜಾಜಿ’ ಹಾಡು ಬಿಡುಗಡೆ ಮಾಡಿ ಶುಭಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್* .   ಹೊಸಪ್ರತಿಭೆಗಳ ಸದಾ ಜೊತೆಯಾಗಿ ನಿಲ್ಲುವ ನಟ ದರ್ಶನ್​ ಅವರು ‘ಜಾಜಿ’ ಆಲ್ಬಂ ಸಾಂಗ್​ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಕೈ ನೋವಿನ ನಡುವೆಯೂ ಕನ್ನಡದ ಪ್ರತಿಭೆಯನ್ನು ಪ್ರೋತ್ಸಾಹಿಸಲು ದರ್ಶನ್ ಅವರು ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಶಾಸಕ ಸತೀಶ್ ರೆಡ್ಡಿ, ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಸೇರಿದಂತೆ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.   ಮಾಜಿ ಉಪ ಮಹಾಪೌರರಾದ  ಮೋಹನ್​ ರಾಜು ಹಾಗೂ ಬಿ.ಸುನೀತಾ ಮೋಹನ್ ರಾಜು ಅವರ ಪುತ್ರಿ ಜಾಜಿ ನಟಿಸಿರುವ ಆಲ್ಬಂ ಸಾಂಗ್​ (Album Song) ಬಿಡುಗಡೆ ಆಗಿದೆ. ಈ ಹಾಡಿನ ಹೆಸರು ಕೂಡ ‘ಜಾಜಿ’. ....

221

Read More...

Avatar Purusha 2.News

Monday, April 01, 2024

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ "ಅವತಾರ ಪುರುಷ 2".*    *ಬಹು ನಿರೀಕ್ಷಿತ ಈ ಚಿತ್ರ ಏಪ್ರಿಲ್ 5 ರಂದು ತೆರೆಗೆ* ..   ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ "ಅವತಾರ ಪುರುಷ 2" ಚಿತ್ರದ ಟ್ರೇಲರ್ ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. ನಟರಾದ "ನೆನಪಿರಲಿ" ಪ್ರೇಮ್, ರಿಷಿ, ವಿಕ್ಕಿ ವರುಣ್, ಪ್ರವೀಣ್ ತೇಜ್ ಹಾಗೂ ನಿರ್ದೇಶಕ ಸಂತು ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.    "ಅವತಾರ ಪುರುಷ" ಮೊದಲ ಭಾಗವನ್ನು ಚಿತ್ರಮಂದಿರ, ಓಟಿಟಿ ಹಾಗೂ ಖಾಸಗಿ ವಾಹಿನಿಯಲ್ಲಿ ಸಾಕಷ್ಟು ಜನರು ವೀಕ್ಷಿಸಿದ್ದಾರೆ. ಅದೇ ರೀತಿ ಈ ಚಿತ್ರದ ....

241

Read More...

KCPS.News

Sunday, March 31, 2024

  ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಉತ್ತಮ ಫಲಿತಾಂಶ: ರಮೇಶ್ ಅರವಿಂದ್   •           ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಆಯೋಜಿಸಿದ್ದ ‘ಸಿನಿಮಾ ಮಾಧ್ಯಮ ಸ್ಥಿತಿ-ಗತಿ’ ಎಂಬ ವಿಚಾರ ಸಂಕಿರಣ  •          ರಮೇಶ್‍ ಅರವಿಂದ್,‍ ಪಿ. ಶೇಷಾದ್ರಿ, ಜೋಗಿ ಉಪಸ್ಥಿತಿ •           ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ   ಬೆಂಗಳೂರು, ಮಾ.31- ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ ಬದಲಾವಣೆ ಬರಲು ಸಾಧ್ಯ ಎಂದು ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಇಂದಿಲ್ಲಿ ಹೇಳಿದ್ದಾರೆ. ‘ಯಾವುದೇ ಕ್ಷೇತ್ರದಲ್ಲಿ ಮಾಡಿದ  ಕೆಲಸವನ್ನೇ ಮಾಡುತ್ತಾ ಅದರಲ್ಲಿ ಬದಲಾವಣೆ ....

245

Read More...

Majestic 2.News

Sunday, March 31, 2024

  ಮೆಜೆಸ್ಟಿಕ್-2ಗೆ ರಾಯರ ಸನ್ನಿಧಿಯಲ್ಲಿ ಚಾಲನೆ       ಮರಿದಾಸನ ತಾಯಿಯಾಗಿ ಹಿರಿಯನಟಿ ಶೃತಿ    ಬೆಂಗಳೂರಿನ  ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದರೆ ಮೆಜೆಸ್ಟಿಕ್. ಈ  ಮೆಜೆಸ್ಟಿಕ್  ಕುರಿತು ಒಂದು ಇತಿಹಾಸವನ್ನೇ ಬರೆಯಬಹುದು, ಅಲ್ಲಿ ಹಗಲಲ್ಲಿ  ನಡೆಯುವ ಚಟುವಟಿಕೆಗಳದ್ದು  ಒಂದು ಕಥೆಯಾದರೆ, ರಾತ್ರಿ ನಡೆಯುವ ಚಟುವಟಿಕೆಗಳದ್ದು ಮತ್ತೊಂದು ಕಥೆಯಾಗುತ್ತೆ. ಈಗ ಆ ಮೆಜೆಸ್ಟಿಕ್ ಬಗ್ಗೆ ಮತ್ತೊಂದು ಚಿತ್ರ ನಿರ್ಮಾಣವಾಗುತ್ತಿದೆ.  ಹಿಂದಿನ ಮೆಜೆಸ್ಟಿಕ್ ನಲ್ಲಿ ಆಗಿನ ಕಾಲದ ರೌಡಿಸಂ ಹೇಗೆ ನಡೆಯುತ್ತಿತ್ತೆಂದು ಹೇಳಿದರೆ, ಹೊಸ ಮೆಜೆಸ್ಟಿಕ್ ಈಗಿನ ಕಾಲದ ಮೆಜೆಸ್ಟಿಕ್‌ನಲ್ಲಿ ಏನೇನೆಲ್ಲ ಚಟುವಟಿಕೆಗಳು ನಡೆಯುತ್ತವೆ, ಈಗಲೂ ಅಲ್ಲಿ ರೌಡಿಸಂ ಹೇಗೆ ....

375

Read More...
Copyright@2018 Chitralahari | All Rights Reserved. Photo Journalist K.S. Mokshendra,