'ಪ್ರೇಮಂ’ ಪ್ರೀತಿಯ ಕಥೆಯಲ್ಲಿ ಏರಿಳಿತಗಳು ಈ ಹಿಂದೆ ಇಂಜಿನೀಯರ್ಸ ಮತ್ತು ಗಂಡುಲಿ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ವಿನಯ್ ರತ್ನಸಿದ್ದಿ ಈಗ ಮತ್ತೊಂದು ಪ್ರೇಮಕಥೆ ಹಿಡಿದುಕೊಂಡು ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇದೇ ತಿಂಗಳಲ್ಲಿ ತೆರೆಗೆ ಬರಲು ಸಿದ್ದವಾಗಿರುವ ಪ್ರೇಮಂ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ವಿನಯ್ ರತ್ನಸಿದ್ದಿ ಅವರೇ ಚಿತ್ರದ ನಾಯಕನಾಗಿ ನಟಿಸುವುದರ ಜೊತೆಗೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ. ಶಕುಂತಲಾ, ವೈಷ್ಣವಿ, ಸುಶ್ಮಿತಾ, ಮಂಜುಶ್ರೀ, ಕಾವೇರಿ ಹಾಗೂ ಪ್ರಿಯಾಂಕಾ ಸೇರಿ ೬ ಜನ ನಾಯಕಿಯರು ಚಿತ್ರದಲ್ಲಿದ್ದಾರೆ. ರತ್ನಸಿದ್ದಿ ಫಿಲಂಸ್ ಮೂಲಕ ಚಂದನ, ಅಮರೇಂದ್ರ ವರದ ಹಾಗೂ ಪ್ರಸಾದ್ ಬಿಜಿ, ಈ ....
ನಾ ಕೋಳಿಕ್ಕೆ ರಂಗ ನವೆಂಬರ್10ಕ್ಕೆ ರಿಲೀಸ್: ಇದು ಮಾಸ್ಟರ್ ಆನಂದ್ ಚಿತ್ರ ' ನಾನು ಕೋ ಕೋ ಕೋಳಿಕ್ಕೆ ರಂಗ...’ ಬಹುಶಃ ಈ ಹಾಡನ್ನು ಕೇಳದವರೇ ಇಲ್ಲ. ಈ ಹಾಡು ಇಂದಿಗೂ ಎವರ್ ಗ್ರೀನ್. ಇಷ್ಟಕ್ಕೂ ಈ ಹಾಡಿನ ಬಗ್ಗೆ ಹೇಳೋಕೆ ಕಾರಣ ’ ನಾ ಕೋಳಿಕ್ಕೆರಂಗ’ ಸಿನಿಮಾ. ಹೌದು, ಮಾಸ್ಟರ್ ಆನಂದ್ ಈ ಸಿನಿಮಾದ ಹೀರೋ. ಇದೊಂದು ಹಳ್ಳಿ ಕಥೆ. ಸಿನಿಮಾದ ಶೀರ್ಷಿಕೆ ಹೇಳುವಂತೆ, ಕೋಳಿ ಹಾಗು ರಂಗನ ಕಥೆ. ಅದೊಂದು ಅಪರೂಪದ ಭಾವ ಸಂಗಮ. ಈ ಚಿತ್ರ ಈಗ ತೆರೆಗೆ ಬರಲು ಸಜ್ಜಾಗಿದೆ. ನವೆಂಬರ್ 10 ರಂದು ರಿಲೀಸ್ ಆಗುತ್ತಿದೆ. ತಮ್ಮ ಸಿನಿಮಾ ಬಗ್ಗೆ ಮಾತಿಗಿಳಿದ ನಾಯಕ ಮಾಸ್ಟರ್ ಆನಂದ್, ’ಕೊರೊನಾ ಮೊದಲು ಚಿತ್ರ ಶುರುವಾಗಿತ್ತು. ಆ ನಂತರ ಸಮಸ್ಯೆ ಎದುರಾಯ್ತು. ಈಗ ಸಿನಿಮಾ ....
'ಕಚೋರಿ’ ಸ್ವಲ್ಪಸಿಹಿ, ಸ್ವಲ್ಪಖಾರ ಇರೋ ಪ್ರೇಮಕಥೆ ಕಚೋರಿ ಎಲ್ಲರೂ ಇಷ್ಟಪಡುವಂಥ ರುಚಿಕರವಾದ ಖಾದ್ಯ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದ್ದು, ತೆರೆಗೆ ಬರಲು ಸಿದ್ದವಾಗಿದೆ. ಸಿನಿವೇ ಸಿನಿ ಕ್ರಿಯೇಶನ್ಸ್ ಮೂಲಕ ಈ ಚಿತ್ರವನ್ನು ಆರ್ಯನ್ ಅವರು ನಿರ್ಮಾಣ ಮಾಡುವುದರ ಜೊತೆಗೆ ಆಕ್ಷನ್ ಕಟ್ ಕೂಡ ಹೇಳಿದ್ದಾರೆ. ಆರ್ಯನ್ ಈ ಚಿತ್ರದ ನಾಯಕನೂ ಆಗಿದ್ದು, ಇಳಾ ವಿಟ್ಲ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಹಿರಿಯ ನಟ ಕೀರ್ತಿರಾಜ್ ಒಬ್ಬ ಡಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೃಪಾಕರ್ ಅವರ ಸಂಗೀತ ನಿರ್ದೇಶನ ಇರುವ ಈ ಚಿತ್ರದ ಪ್ರಥಮ ಪತ್ರಿಕಾಗೋಷ್ಟಿ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ....
*ಪಂಚಭಾಷೆಗಳಲ್ಲಿ ಬಿಡುಗಡೆಯಾಯಿತು "ಇನಾಮ್ದಾರ್" ಚಿತ್ರದ ಟ್ರೇಲರ್.* ನಿರಂಜನ್ ಶೆಟ್ಟಿ ತಲ್ಲೂರು ನಿರ್ಮಾಣದ, ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ "ಇನಾಮ್ದಾರ್ " ಚಿತ್ರದ ಟ್ರೇಲರ್ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಯಿತು. ನಿರಂಜನ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಉದ್ಯಮಿ ಕರುಣಾಕರ್ ರೆಡ್ಡಿ, ಎಂ.ಕೆ.ಮಠ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. ಇದು ಉತ್ತರ ಕರ್ನಾಟಕ ಮೂಲದ ಶಿವಾಜಿ ಮಹಾರಾಜರನ್ನು ಆರಾಧಿಸುವ "ಇನಾಮ್ದಾರ್" ಕುಟುಂಬ ಹಾಗೂ ದಕ್ಷಿಣದ ಕರಾವಳಿ ಭಾಗದ ಕಾಡಿನಲ್ಲಿ ವಾಸಿಸುವ ಹಾಗೂ ಶಿವನ ಆರಾಧಕರಾದ ಕಾಡು ....
ಶೋಷಿತೆ ಟ್ರೇಲರ್, ಹಾಡು ಬಿಡುಗಡೆ ಚಿತ್ರರಂಗಕ್ಕೆ ವಿದ್ಯಾವಂತ ಪ್ರತಿಭೆಗಳು ಅದರಲ್ಲೂ ಇಂಜಿನಿಯರ್ಗಳು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ಆಂಧ್ರಪ್ರದೇಶ, ಸದ್ಯ ಬೆಂಗಳೂರು ನಿವಾಸಿ ಶಶಿಧರ್ ಸೇರ್ಪಡೆಯಾಗುತ್ತಾರೆ. ಮೊದಲಿನಿಂದಲೂ ಸಿನಿಮಾರಂಗದ ಮೇಲೆ ಆಸಕ್ತಿ ಹಾಗೂ ಹಿರಿಯ ನಿರ್ದೇಶಕರುಗಳಾದ ಕೆ.ಬಾಲಚಂದರ್, ಮಣಿರತ್ನಂ, ರಾಮ್ಗೋಪಾಲ್ವರ್ಮ ಮುಂತಾದವರ ಪ್ರೇರಣೆಯಿಂದ ತಾನು ಸಹ ಇಲ್ಲಿಯೇ ಸಾಧನೆ ಮಾಡಬೇಕೆಂದು ಚಿಂತನೆ ನಡೆಸಿರುತ್ತಾರೆ. ಅದರ ಪ್ರತಿಫಲ ಎರಡು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಇದರ ಅನುಭವದಿಂದಲೇ ಕನ್ನಡ ಭಾಷೆ ಕಲಿತು ‘ಶೋಷಿತೆ’ ಸಿನಿಮಾಕ್ಕೆ ....
*‘ಆಡೇ ನಮ್ God’ ಟ್ರೇಲರ್ ಅನಾವರಣ…ಅಕ್ಟೋಬರ್ 6ಕ್ಕೆ ಬೆಳ್ಳಿತೆರೆಯಲ್ಲಿ ಸಿನಿಮಾ ದಿಬ್ಬಣ* ಆಡನ್ನು ದೇವರಾಗಿ ಪೂಜೆ ಮಾಡಿದಾಗ ಏನೆಲ್ಲಾ ಆಗುತ್ತದೆ ಎನ್ನುವ ಕಥಾಹಂದರ ಹೊಂದಿರುವ ‘ಆಡೇ ನಮ್ God’ ಸಿನಿಮಾದ ಟ್ರೇಲರ್ ಅನಾವರಣಗೊಂಡಿದೆ. ಒಂದೊಳ್ಳೆ ಸಂದೇಶದೊಂದಿಗೆ ಹಾಸ್ಯಮಯವಾಗಿ ಕಥೆ ಹೆಣೆದಿದ್ದಾರೆ ಹಿರಿಯ ನಿರ್ದೇಶಕ ಪಿ.ಎಚ್.ವಿಶ್ವನಾಥ್. ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ‘ಆಡೇ ನಮ್ God’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಪಿ.ಎಚ್.ವಿಶ್ವನಾಥ್ ಮಾತನಾಡಿ, ಸಿನಿಮಾ ಮಾಡಿದ ಮೇಲೆ ಸಿನಿಮಾದ ಮೇಲೆ ನಿರ್ದೇಶಕರು ಮಾತನಾಡುವುದು ಏನೂ ....
ಮಹಿಳೆಯರಿಂದ ರಾಜಯೋಗ ಟ್ರೈಲರ್ ಬಿಡುಗಡೆ ಮಾನವನ ಜೀವನದಲ್ಲಿ ರಾಜಯೋಗ ಎಂಬ ಪದಕ್ಕೆ ಬಹಳ ಮಹತ್ವವಿದೆ. ರಾಜಯೋಗ ಬಂತೆಂದರೆ ಮುಂದೆ ಆತನಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಹಾಸ್ಯನಟ ಪೋಷಕನಟ ಧರ್ಮಣ್ಣ ನಾಯಕನಾಗಿ ನಟಿಸಿರುವ ಚಲನಚಿತ್ರದ ಹೆಸರೂ ಸಹ ರಾಜಯೋಗ. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ವಿಶೇಷವಾಗಿ ಇಬ್ಬರು ಸಾಮಾನ್ಯ ಮಹಿಳೆಯರು ಈ ಟ್ರೈಲರ್ ಬಿಡುಗಡೆಗೊಳಿಸಿದರು. ಲಿಂಗರಾಜ ಉಚ್ಚಂಗಿದುರ್ಗ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು ಶ್ರೀರಾಮರತ್ನ ಪ್ರೊಡಕ್ಷನ್ಸ್ ಅಡಿ ಕುಮಾರ ಕಂಠೀರವ, ದೀಕ್ಷಿತ್ ಕೃಷ್ಣ, ಪ್ರಭು ಚಿಕ್ಕನಾಯ್ಕನಹಳ್ಳಿ, ಲಿಂಗರಾಜು ಕೆಎನ್, ....
ಅಕ್ಟೋಬರ್ ೮ರಿಂದ ಬಿಗ್ಬಾಸ್ ಕಿರುತೆರೆಯ ಜನಪ್ರಿಯ ರಿಯಾಲಿಟಿ ಷೋ ಬಿಗ್ಬಾಸ್ ೧೦ನೇ ಆವೃತ್ತಿ ಎಂದಿನಂತೆ ಇದೇ ಅಕ್ಟೋಬರ್ ೮ರಿಂದ ಚಾಲನೆ ಸಿಗಲಿದೆ. ಪ್ರತಿ ವರ್ಷದಂತೆ ಈ ಸಲವೂ ಸುದೀಪ್ ನಿರೂಪಣೆಯ ಜವಬ್ದಾರಿಯನ್ನು ಹೊತ್ತುಕೊಳ್ಳುತ್ತಿದ್ದಾರೆ. ಕಲರ್ಸ್ ಕನ್ನಡ ವಾಹಿನಿ ನೂತನ ಮುಖ್ಯಸ್ಥ ಪ್ರಶಾಂತ್ನಾಯಕ್ ಹೇಳುವಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿನ ೧೬-೧೮ ಸ್ಪರ್ಧಿಗಳು ಮನೆಯೊಳಗೆ ಹೋಗುತ್ತಾರೆ. ಪ್ರಸ್ತುತ ಅನೇಕ ಹೊಸತುಗಳು ಇರಲಿದ್ದು, ಶೋ ಪ್ರಾರಂಭಗೊಂಡಾಗ ಎಲ್ಲವು ತಿಳಿಯುತ್ತದೆ. ಸ್ಪರ್ಧಿಗಳ ಆಯ್ಕೆಗೆ ಅದರದ್ದೇ ಆದ ಮಾನದಂಡಗಳಿವೆ. ಮನೆ ಎಂದಾಗ ಎಲ್ಲಾ ರೀತಿಯ ಪಾತ್ರಗಳು ಅವಶ್ಯಕತೆ ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಹೊಸಬರ "ವೇಷ"* . ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ "ವೇಷ" ಚಿತ್ರದ ಟ್ರೇಲರ್ ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ, ಮರಿಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ "ವೇಷ" ಚಿತ್ರದ ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು "ವೇಷ"ದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ " ವೇಷ" ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ....
*ಅಕ್ಟೋಬರ್ 6ಕ್ಕೆ ಹೊಸಬರ ‘ಲವ್’ ಸಿನಿಮಾ ರಿಲೀಸ್..* ಅಪ್ಪಟ ಕನ್ನಡ ಪ್ರತಿಭೆಗಳಿಗೆ ಅವಕಾಶ ನೀಡಿ ತೆಗೆದಿರುವ ಲವ್ ಚಿತ್ರ ಬಿಡುಗಡೆಗೆ ಅಣಿಯಾಗಿದೆ. ಚಿತ್ರದ ಟ್ರೇಲರ್ ಕೂಡ ಬಿಡುಗಡೆಯಾಗಿದ್ದು, ಪ್ರಾಮಿಸಿಂಗ್ ಆಗಿದೆ. ಲವ್ ಚಿತ್ರವನ್ನು ಅಕ್ಟೋಬರ್ 6ಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಮಹೇಶ ಸಿ ಅಮ್ಮಳ್ಳಿದೊಡ್ಡಿ ಲವ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಎರಡನೇ ಹೆಜ್ಜೆ. ಈ ಹಿಂದೆ ಮಹೇಶ ಓ ಎಂಬ ಹಾರರ್ ಚಿತ್ರ ನಿರ್ದೇಶಿಸಿದ್ದು, ಈಗ ಪ್ರೇಮಕಥೆ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಬಿಡುಗಡೆ ಹೊಸ್ತಿಲಿನಲ್ಲಿರುವ ಲವ್ ಸಿನಿಮಾದ ಸುದ್ದಿಗೋಷ್ಠಿ ಬೆಂಗಳೂರಿನ SRV ಥಿಯೇಟರ್ ನಲ್ಲಿ ನಡೆದಿದ್ದು, ಈ ಬಗ್ಗೆ ಚಿತ್ರತಂಡ ಮಾಹಿತಿ ....
*"ಅಥರ್ವ" ನಾಗಿ ಕನ್ನಡ ಚಿತ್ರರಂಗಕ್ಕೆ ಕಾರ್ತಿಕ್ ರಾಜು ಆಗಮನ* . "ಮನೆ ದೇವ್ರು", " ಹಾಲುಂಡ ತವರು", "ಕರುಳಿನ ಕೂಗು" ಮುಂತಾದ ಯಶಸ್ವಿ ಚಿತ್ರಗಳ ನಿರ್ಮಾಪಕ ವೈಜಾಕ್ ರಾಜು ಅವರ ಪುತ್ರ ಕಾರ್ತಿಕ್ ರಾಜು "ಅಥರ್ವ" ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. "ಅಥರ್ವ" ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ನಮ್ಮ ತಂದೆ ವೈಜಾಕ್ ರಾಜು, ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ನಾನು ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದೇನೆ. ಕನ್ನಡದಲ್ಲಿ ಇದು ಮೊದಲ ....
*ರಾಜವರ್ಧನ್ ’ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ...* ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೋ ಆಗಿ ಅವರು ಸ್ಯಾಂಡಲ್ವುಡ್ನಲ್ಲಿ ಗುರುಸಿಕೊಂಡಿರುವ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚುತ್ತಿರುವ ರಾಜವರ್ಧನ್ ಕೈಯಲ್ಲಿ ಹಲವು ಪ್ರಾಜೆಕ್ಟ್ ಗಳಿವೆ. ಅವುಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ‘ಗಜರಾಮ’. ಈ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ....
*"ತಾರಿಣಿ" ಎಂಬ ಗರ್ಭಿಣಿಯ ಕಥೆ* . *ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಚಿತ್ರದ ಮೊದಲ ನೋಟ* . ಮಮತ ರಾಹುತ್ ನಾಯಕಿಯಾಗಿ ನಟಿಸಿರುವ, ಸಿದ್ದು ಪೂರ್ಣಚಂದ್ರ ನಿರ್ದೇಶನದ "ತಾರಿಣಿ" ಚಿತ್ರ ಗರ್ಭಿಣಿಯ ಕುರಿತಾದ ಕಥಾಹಂದರ ಹೊಂದಿದೆ. ಈ ಚಿತ್ರದ ಮೊದಲ ನೋಟ(ಫಸ್ಟ್ ಲುಕ್) ಇತ್ತೀಚೆಗೆ ಬಿಡುಗಡೆಯಾಯಿತು. ಸಾಹಿತಿ, ಹೋರಾಟಗಾರ್ತಿ ಬಿ.ಟಿ.ಲಲಿತ ನಾಯಕ್ ಸೇರಿದಂತೆ ಹಲವು ಗಣ್ಯರು "ತಾರಿಣಿ" ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. "ತಾರಿಣಿ" ಗರ್ಭಿಣಿ ಹೆಣ್ಣಿನ ಕಥೆಯನ್ನು ಹೊಂದಿರುವ ಚಿತ್ರ ಎಂದು ಮಾತು ಆರಂಭಿಸಿದ ನಿರ್ದೇಶಕ ಸಿದ್ದು ....
*ಡಾರ್ಲಿಂಗ್ ಕೃಷ್ಣ ಅಭಿನಯದ "ಶುಗರ್ ಫ್ಯಾಕ್ಟರಿ" ಟ್ರೇಲರ್ ಗೆ ಸಿನಿರಸಿಕರು ಫಿದಾ* *ದೀಪಕ್ ಅರಸ್ ನಿರ್ದೇಶನದ ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆಗೆ* . ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರ ಭಾರಿ ಸುದ್ದಿಯಲ್ಲಿದೆ. ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡೆಗಡೆಯಾಗಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಟ್ರೇಲರ್ ನಲ್ಲಿ ಮನೋರಂಜನೆಯ ಮಹಾಪೂರವೇ ಹರಿದು ಬಂದಿದೆ. ಎರಡು ನಿಮಿಷಗಳ ಟ್ರೇಲರ್ ನಲ್ಲೇ ಇಷ್ಟು ಮನರಂಜನೆ ಹಾಗೂ ಹಾಸ್ಯಭರಿತ ಸಂಭಾಷಣೆಗಳಿದೆ. ಇನ್ನು ಇಡೀ ಚಿತ್ರದುದ್ದಕ್ಕೂ ನಾನ್ ಸ್ಟಾಪ್ ಮನರಂಜನೆ ಖಚಿತ ....
*ಡಿಸೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ ಹೊಂಬಾಳೆ ಫಿಲಂಸ್ನ ‘ಸಲಾರ್’* ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಬಿಡುಗಡೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಅತ್ಯಂತ ಮಹಾತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1 – ಸೀಸ್ಫೈರ್’, ಡಿ. 22 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ‘ಸಲಾರ್ ಪಾರ್ಟ್ 1 – ಸೀಸ್ಫೈರ್’ ಚಿತ್ರದ ಮೊದಲ ಟೀಸರ್ ಯಾವಾಗ ಬಿಡುಗಡೆಯಾಯಿತೋ, ಆಗಿನಿಂದಲೇ ಜಗತ್ತಿನಾದ್ಯಂತ ಇರುವ ಪ್ರಭಾಸ್ ಅಭಿಮಾನಿಗಳಲ್ಲಿ ಈ ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಗರಿಗೆದರಿವೆ. ‘ಸಲಾರ್’ ....
*ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ’ಬರ್ಮ’ ಚಿತ್ರ ಆರಂಭ.* ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ "ಗಟ್ಟಿಮೇಳ" ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ "ಬರ್ಮ" ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಆರಂಭ ಫಲಕ ತೋರಿದರು. ರಾಘವೇಂದ್ರ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು ಹಾಗೂ ನಟ ಧ್ರುವ ಸರ್ಜಾ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದರು. ನಿರ್ಮಾಪಕ ಕೆ.ಪಿ.ಶ್ರೀಕಾಂತ್, ನಿರ್ದೇಶಕ ....
*"ಗರಡಿ" ಟೈಟಲ್ ಟ್ರ್ಯಾಕ್ಗೆ ಅಭಿಮಾನಿಗಳು ಫಿದಾ* . *ಬಹು ನಿರೀಕ್ಷಿತ ’ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ* . ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ’ಗರಡಿ’ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ’ಸರೆಗಮ ಕನ್ನಡ’ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ’ಲೋಕಾನೆ ಗರಡಿ.. ಬಾಳೇ ಅಖಾಡ" ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜೊತೆಗೆ ಸಾಕಷ್ಟು ಪ್ರತಿಭಾವಂತ ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ....
*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು "ಗರುಡ ಪುರಾಣ" ಚಿತ್ರದ ಟೀಸರ್* .
27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ " ಗರುಡ ಪುರಾಣ" ಚಿತ್ರದ ಟೀಸರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಮಾಜಿ ಶಾಸಕರಾದ ರಾಜು ಗೌಡ, ತಿಪ್ಪರಾಜು, ಡಿ.ಎಸ್.ಮ್ಯಾಕ್ಸ್ ನ ದಯಾನಂದ್, ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಕೂಚ್ಚಣ್ಣ, ನಟ ಮಣಿಕಂಠ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
*‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ…* ದಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮೀ TRP ರಾಮ ಸಿನಿಮಾ ಮೂಲಕ ಮತ್ತೆ ಕಮ್ಬ್ಯಾಕ್ ಆಗುತ್ತಿರುವುದು ಗೊತ್ತೇ ಇದೆ. ರವಿಪ್ರಸಾದ್ ನಟಿಸಿ ಮತ್ತು ನಿರ್ದೇಶನದ ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದೆ. ಹೆಣ್ಣಿನ ಶೋಷಣೆ, ಮಾಧ್ಯಮಗಳ ಮೌಲ್ಯವೇನು ಅನ್ನೋದನ್ನು ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಟ್ರೇಲರ್ ಬಿಡುಗಡೆ ಮಾಡಲಾಗಿದ್ದು, ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ. ಹಿರಿಯ ನಟಿ ಮಹಾಲಕ್ಷ್ಮೀ ಮಾತನಾಡಿ, ನಾನು ಎಲ್ಲಾ ಭಾಷೆಯಲ್ಲಿ ಎಲ್ಲಾ ಹೀರೋಗಳ ಜೊತೆ ಸಿನಿಮಾ ಮಾಡಿದ್ದೇನೆ. ಎಲ್ಲವೂ ಟೀಂ ವರ್ಕ್..ನಮ್ಮ ....
*ಸ್ಯಾಂಡಲ್ವುಡ್, ಕಾಲಿವುಡ್, ಮಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗದವರಿಗೆ ಪ್ರಿಯವಾಗಲಿದೆ "ಜಾಲಿವುಡ್"* ಸ್ಯಾಂಡಲ್ವುಡ್, ಬಾಲಿವುಡ್ , ಮಾಲಿವುಡ್, ಕಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗವರು ಚಿತ್ರಿಕರಣ ನಡೆಸಲು ಅದ್ಭುತವಾದ ಲೊಕೇಶನ್ ಬಿಡದಿ ಬಳಿ ನಿರ್ಮಾಣವಾಗಿದೆ. ಅದೇ "ಜಾಲಿವುಡ್". ಈ ಹಿಂದೆ ಇನ್ನೋವೇಟೀವ್ ಫಿಲ್ಮ್ ಸಿಟಿ ಎಂದು ಗುರುತಿಸಿಕೊಂಡಿದ್ದ ಜಾಗವನ್ನು ಉದ್ಯಮಿ ಐಸಿರಿ ಗಣೇಶ್ ವಹಿಸಿಕೊಂಡು "ಜಾಲಿವುಡ್" ಹೆಸರಲ್ಲಿ ಮರು ನಾಮಕರಣ ಮಾಡಿದ್ದಾರೆ. ಹಲವು ವಿಶೇಷಗಳಿಂದ ಕೂಡಿರುವ "ಜಾಲಿವುಡ್" ಚಿತ್ರೀಕರಣಕ್ಕೆ ಇದು ಹೇಳಿ ಮಾಡಿಸಿದ ಸ್ಥಳ. ....